ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಲು ಮತ್ತು ಈ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲು ಉನ್ನತ ಮಟ್ಟದ ಅಧಿಕಾರಿಗಳನ್ನು ನೇಮಿಸಿದೆ. ಈ ಕುರಿತಂತೆ 24.06.2026 ರಂದು ಅಧಿಕೃತ ಆದೇಶವನ್ನು ಹೊರಡಿಸಿದೆ.

ಸರ್ಕಾರಿ ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಸಿಹಿಸುದ್ದಿ! ನೀಡಿದೆ. ಮುಂದಿನ 6 ತಿಂಗಳಲ್ಲಿ ಒಟ್ಟು 72,186 ಹುದ್ದೆಗಳ ಭರ್ತಿಗೆ ಕರ್ನಾಟಕ ರಾಜ್ಯ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ . ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಾದ ಶಿಕ್ಷಣ, ಪೊಲೀಸ್, ಆರೋಗ್ಯ, ಕಂದಾಯ, ನೀರಾವರಿ ಹಾಗೂ ಇತರೆ ಪ್ರಮುಖ ಸರ್ಕಾರಿ ಇಲಾಖೆಗಳಲ್ಲಿ ಭರ್ತಿ ಮಾಡಲಾಗುತ್ತದೆ ನಿರುದ್ಯೋಗ ಸಮಸ್ಯೆ ಕಡಿಮೆ ಮಾಡುವ ಹಾಗೂ ಆಡಳಿತಾತ್ಮಕ ಕಾರ್ಯಕ್ಷಮತೆ ಹೆಚ್ಚಿಸುವ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರವು ಶೀಘ್ರದಲ್ಲೇ ಇಲಾಖಾವಾರು ಅಧಿಸೂಚನೆಗಳನ್ನು ಬಿಡುಗಡೆ ಮಾಡಲಿದ್ದು, ಅರ್ಜಿ ಪ್ರಕ್ರಿಯೆ ಆನ್ಲೈನ್ ಮೂಲಕ ನಡೆಯಲಿದೆ.
ಒಟ್ಟು ಹುದ್ದೆಗಳು:–
ಕರ್ನಾಟಕ ಸರ್ಕಾರವು ಸುಮಾರು 34 ಇಲಾಖೆಗಳಲ್ಲಿ ಖಾಲಿ ಇರುವ 72,186 ಹುದ್ದೆಗಳನ್ನು ಭರ್ತಿ ಮಾಡಲು ಅನುಮೋದನೆ ನೀಡಿದೆ. 2023-24ನೇ ಸಾಲಿನಿಂದ ಇಲ್ಲಿಯವರೆಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 40,009 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಈಗಾಗಲೇ ಸಹಮತಿ ನೀಡಿದೆ. ಕಲ್ಯಾಣ-ಕರ್ನಾಟಕ ಸ್ಥಳೀಯ ವೃಂದದ 32,177 ಹುದ್ದೆಗಳ ಪೈಕಿ ಶೇ. 80 ರಷ್ಟು ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಸಹಮತಿ ನೀಡಿದೆ.
ಮೇಲ್ವಿಚಾರಣೆ:–
17 ಇಲಾಖೆಗಳ ನೇರ ನೇಮಕಾತಿಯನ್ನು ಮೇಲ್ವಿಚಾರಣೆ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಿಗೆ ಮತ್ತು 34 ಇಲಾಖೆಗಳ ನೇಮಕಾತಿಯನ್ನು ಮೇಲ್ವಿಚಾರಣೆ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಜವಾಬ್ದಾರಿಯನ್ನು ನೀಡಿ ಕರ್ನಾಟಕ ಸರ್ಕಾರವು ಆದೇಶಿಸಿದೆ.
ನಿಗದಿತ ಕಾಲಮಿತಿ:
- 2 ತಿಂಗಳಲ್ಲಿ: ನೇಮಕಾತಿ ಅಧಿಸೂಚನೆ (Notification) ಹೊರಡಿಸುವುದು.
- 4 ತಿಂಗಳಲ್ಲಿ: ನೇಮಕಾತಿ ಪರೀಕ್ಷೆಗಳನ್ನು ನಡೆಸುವುದು.
- 6 ತಿಂಗಳಲ್ಲಿ: ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ನೇಮಕಾತಿ ಆದೇಶಗಳನ್ನು ಹೊರಡಿಸುವುದು.
