ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯ ನೇಮಕಾತಿ-2026

ಚಿಕ್ಕಮಗಳೂರು ಪ್ರಧಾನ ಜಿಲ್ಲಾ & ಸತ್ರ  ನ್ಯಾಯಾಲಯ  ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ  ಶೀಘ್ರಲಿಪಿಗಾರರು ಗ್ರೇಡ್-III, ಬೆರಳಚ್ಚುಗಾರರು & ಬೆರಳಚ್ಚು-ನಕಲುಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯ ನೇಮಕಾತಿ 2026 ಶೀಘ್ರಲಿಪಿಗಾರರು, ಬೆರಳಚ್ಚುಗಾರರು ಮತ್ತು ಬೆರಳಚ್ಚು-ನಕಲುಗಾರರ 12 ಹುದ್ದೆಗಳ ಅಧಿಸೂಚನೆ

ಹುದ್ದೆಗಳ ವಿವರ:-

  • ಒಟ್ಟು ಹುದ್ದೆಗಳು: 12
  • ಶೀಘ್ರಲಿಪಿಗಾರರು ಗ್ರೇಡ್-III (Stenographer Grade-III): 05 ಹುದ್ದೆಗಳು
  • ಬೆರಳಚ್ಚುಗಾರರು (Typist): 06 ಹುದ್ದೆಗಳು
  • ಬೆರಳಚ್ಚು-ನಕಲುಗಾರರು (Typist-Copyist): 01 ಹುದ್ದೆಗಳು

ವಿಧ್ಯಾರ್ಹತೆ:-

ಶೀಘ್ರಲಿಪಿಗಾರರು ಗ್ರೇಡ್-III:

  • ದ್ವಿತೀಯ ಪಿ.ಯು.ಸಿ (12ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ & ಆಂಗ್ಲ ಬೆರಳಚ್ಚು ಪ್ರೌಢದರ್ಜೆ ಪರೀಕ್ಷೆ (Senior Grade) ಶೀಘ್ರಲಿಪಿ ಹಾಗೂ ಕನ್ನಡ & ಆಂಗ್ಲ ಬೆರಳಚ್ಚು ಪ್ರೌಢದರ್ಜೆ ಪರೀಕ್ಷೆ (Senior Grade) ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಪಾಸಾಗಿರಬೇಕು.

ಬೆರಳಚ್ಚುಗಾರರು:

  • ದ್ವಿತೀಯ ಪಿ.ಯು.ಸಿ (12ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ & ಆಂಗ್ಲ ಬೆರಳಚ್ಚು ಪ್ರೌಢದರ್ಜೆ ಪರೀಕ್ಷೆ (Senior Grade) ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಪಾಸಾಗಿರಬೇಕು.

ಬೆರಳಚ್ಚು-ನಕಲುಗಾರರು:

  • ದ್ವಿತೀಯ ಪಿ.ಯು.ಸಿ (12ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ & ಆಂಗ್ಲ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆ (Junior Grade) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು.

ವಯೋಮಿತಿ (Age Limit):-

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಟ ವಯಸ್ಸು ಈ ಕೆಳಕಂಡಂತೆ ಇರಬೇಕು

  • ಸಾಮಾನ್ಯ ವರ್ಗ-ಸಾಮಾನ್ಯ ವರ್ಗದ ಅಭ್ಯರ್ಥಿಗಳು 40 ವರ್ಷ ಮೀರಿರಬಾರದು.
  • ಹಿಂದುಳಿದ ವರ್ಗಗಳು (2A, 2B, 3A, 3B):-ಅಭರ್ಥಿಗಳು 43 ವರ್ಷ ಮೀರಿರಬಾರದು
  • ಪ್ರವರ್ಗ-1/Sc /St:-ಅಭರ್ಥಿಗಳು 45 ವರ್ಷ ಮೀರಿರಬಾರದು

ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಅರ್ಜಿ ಶುಲ್ಕ:-

ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ ಸೂಚಿಸಿದಂತಹ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಲೆಕ್ಟ್ ಪೇಜ್ ನಲ್ಲಿ ನೆಟ್ ಅಥವಾ ಇಂಟರ್ನೆಟ್ ಬ್ಯಾಂಕಿಂಗ್ / ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್/ಯು.ಪಿ.ಐ ಮೂಲಕ ಆನ್ ಲೈನ್ ಶುಲ್ಕ ಸಂದಾಯ ಮಾಡಬಹುದಾಗಿದೆ.

  • ಸಾಮಾನ್ಯ ವರ್ಗ:- 300/-
  • ಹಿಂದುಳಿದ ವರ್ಗಗಳು (2A, 2B, 3A, 3B):- 150/-
  • ಪ್ರವರ್ಗ-1/Sc /St/Pwd:- ಶುಲ್ಕ ವಿನಾಯಿತಿ ಇರುತ್ತದೆ.

ವೇತನ ಶ್ರೇಣಿ:-

  • ಶೀಘ್ರಲಿಪಿಗಾರರು ಗ್ರೇಡ್-III::- 44425-83700
  • ಬೆರಳಚ್ಚುಗಾರರು :- 34100-67600
  • ಬೆರಳಚ್ಚು-ನಕಲುಗಾರರು:- 34100-67600

ಪರಿವೀಕ್ಷಣಾ ಅವಧಿ:-

  1. ಶೀಘ್ರಲಿಪಿಗಾರರು ಗ್ರೇಡ್-III:- ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸಿವಿಲ್ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977 ರ ಪ್ರಕಾರ ಎರಡು ವರ್ಷಗಳ ಅವಧಿಗೆ ಅಥವಾ ಅಗತ್ಯವಿದ್ದರೆ ವಿಸ್ತರಿಸಬಹುದಾದ ಅವಧಿಗೆ ಪರಿವೀಕ್ಷಣಾರ್ಥಿಗಳಾಗಿರುತ್ತಾರೆ. ಹಾಗೂ ಸದರಿ ಅವಧಿಯಲ್ಲಿ ತಮ್ಮ ಹುದ್ದೆಗಳಿಗೆ ನಿಗಧಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ ಹಾಗೂ ಕನ್ನಡ ಭಾಷಾ ಪರೀಕ್ಷೆಯಲ್ಲಿ& ನಿಯಮದ ಪ್ರಕಾರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ (ಸಿ.ಎಲ್.ಟಿ)  ಉತ್ತೀರ್ಣರಾಗಬೇಕು.
  2. ಬೆರಳಚ್ಚುಗಾರರು:- ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸಿವಿಲ್ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977 ರ ಪ್ರಕಾರ ಎರಡು ವರ್ಷಗಳ ಅವಧಿಗೆ ಅಥವಾ ಅಗತ್ಯವಿದ್ದರೆ ವಿಸ್ತರಿಸಬಹುದಾದ ಅವಧಿಗೆ ಪರಿವೀಕ್ಷಣಾರ್ಥಿಗಳಾಗಿರುತ್ತಾರೆ. ಹಾಗೂ ಸದರಿ ಅವಧಿಯಲ್ಲಿ ತಮ್ಮ ಹುದ್ದೆಗಳಿಗೆ ನಿಗಧಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ ಹಾಗೂ ಕನ್ನಡ ಭಾಷಾ ಪರೀಕ್ಷೆಯಲ್ಲಿ& ನಿಯಮದ ಪ್ರಕಾರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ (ಸಿ.ಎಲ್.ಟಿ)  ಉತ್ತೀರ್ಣರಾಗಬೇಕು
  3. ಬೆರಳಚ್ಚು-ನಕಲುಗಾರರು:- ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸಿವಿಲ್ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977 ರ ಪ್ರಕಾರ ಎರಡು ವರ್ಷಗಳ ಅವಧಿಗೆ ಅಥವಾ ಅಗತ್ಯವಿದ್ದರೆ ವಿಸ್ತರಿಸಬಹುದಾದ ಅವಧಿಗೆ ಪರಿವೀಕ್ಷಣಾರ್ಥಿಗಳಾಗಿರುತ್ತಾರೆ. ಹಾಗೂ ಸದರಿ ಅವಧಿಯಲ್ಲಿ ತಮ್ಮ ಹುದ್ದೆಗಳಿಗೆ ನಿಗಧಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ ಹಾಗೂ ಕನ್ನಡ ಭಾಷಾ ಪರೀಕ್ಷೆಯಲ್ಲಿ& ನಿಯಮದ ಪ್ರಕಾರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ (ಸಿ.ಎಲ್.ಟಿ)  ಉತ್ತೀರ್ಣರಾಗಬೇಕು

ಆಯ್ಕೆ ವಿಧಾನ :-

ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮ 1977 ಹಾಗೂ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರ ಹುದ್ದೆಗಳು) (ನೇಮಕಾತಿ) ನಿಯಮಗಳು, 1982  ಹಾಗೂ ತಿದ್ದುಪಡಿ ನಿಯಮಗಳು 2007 ಮತ್ತು 2021 ರನ್ವಯ ನೇರ ನೇಮಕಾತಿ  ಮೂಲಕ ಆಯ್ಕೆ.

  1. ಶೀಘ್ರಲಿಪಿಗಾರರು ಗ್ರೇಡ್-III:-ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು & 1 ಕ್ಕೆ 120 ಪದಗಳ ವೇಗದಲ್ಲಿ 5 ನಿಮಿಷಗಳ ಕಾಲ ಉಕ್ತಲೇಖನವನ್ನು ತೆಗೆದುಕೊಂಡು ಉಕ್ತಲೇಖನವನ್ನು 45 ನಿಮಿಷಗಳಲ್ಲಿ ಕಂಪ್ಯೂಟರನಲ್ಲಿ ಅನುಲಿಪಿ ಮಾಡುವ ಕೌಶಲ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು & ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ, 1 ಹುದ್ದೆಗೆ 5  ಅಭ್ಯರ್ಥಿಗಳಂತೆ (1:5 ಅನುಪಾತದಲ್ಲಿ) ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯುವರು. (ಕೌಶಲ್ಯ ಪರೀಕ್ಷೆಯು ಗರಿಷ್ಠ 100 ಅಂಕಗಳನ್ನು ಒಳಗೊಂಡಿದ್ದು, ಅದರಲ್ಲಿ ಅರ್ಹರಾಗಲು ಕನಿಷ್ಠ 50 ಅಂಕಗಳನ್ನು ಪಡೆಯಬೇಕು & ಸಂದರ್ಶನವು 5 ಅಂಕಗಳನ್ನು ಒಳಗೊಂಡಿರುತ್ತದೆ)
  2. ಬೆರಳಚ್ಚುಗಾರರು:-ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು 15 ನಿಮಿಷಗಳ ಕಾಲ ಉಕ್ತಲೇಖನದಲ್ಲಿ ಕೋಡುವ ವಿಷಯವನ್ನು ಕಂಪ್ಯೂಟರನಲ್ಲಿ ಬೆರಳಚ್ಚು ಮಾಡುವ ಅರ್ಹತಾ (ಕೌಶಲ್ಯ) ಪರೀಕ್ಷೆಯಲ್ಲಿ ಗಳಿಸುವ ಅಂಕಗಳು & ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ, 1 ಹುದ್ದೆಗೆ 5  ಅಭ್ಯರ್ಥಿಗಳಂತೆ (1:5 ಅನುಪಾತದಲ್ಲಿ) ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯುವರು. (ಅರ್ಹತಾ ಪರೀಕ್ಷೆಯು ಗರಿಷ್ಠ 100 ಅಂಕಗಳನ್ನು ಒಳಗೊಂಡಿದ್ದು, ಅದರಲ್ಲಿ ಅರ್ಹರಾಗಲು ಕನಿಷ್ಠ 50 ಅಂಕಗಳನ್ನು ಪಡೆಯಬೇಕು & ಸಂದರ್ಶನವು 5 ಅಂಕಗಳನ್ನು ಒಳಗೊಂಡಿರುತ್ತದೆ)
  3. ಬೆರಳಚ್ಚು-ನಕಲುಗಾರರು:- ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು 15 ನಿಮಿಷಗಳ ಕಾಲ ಉಕ್ತಲೇಖನದಲ್ಲಿ ಕೋಡುವ ವಿಷಯವನ್ನು ಕಂಪ್ಯೂಟರನಲ್ಲಿ ಬೆರಳಚ್ಚು ಮಾಡುವ ಅರ್ಹತಾ (ಕೌಶಲ್ಯ) ಪರೀಕ್ಷೆಯಲ್ಲಿ ಗಳಿಸುವ ಅಂಕಗಳು & ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ, 1 ಹುದ್ದೆಗೆ 5  ಅಭ್ಯರ್ಥಿಗಳಂತೆ (1:5 ಅನುಪಾತದಲ್ಲಿ) ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯುವರು. (ಅರ್ಹತಾ ಪರೀಕ್ಷೆಯು ಗರಿಷ್ಠ 100 ಅಂಕಗಳನ್ನು ಒಳಗೊಂಡಿದ್ದು, ಅದರಲ್ಲಿ ಅರ್ಹರಾಗಲು ಕನಿಷ್ಠ 50 ಅಂಕಗಳನ್ನು ಪಡೆಯಬೇಕು & ಸಂದರ್ಶನವು 5 ಅಂಕಗಳನ್ನು ಒಳಗೊಂಡಿರುತ್ತದೆ)

ದಾಖಲೆಗಳ ಪರಿಶೀಲನೆ:-

  1. ಶೈಕ್ಷಣಿಕ ವಿದ್ಯಾರ್ಹತೆ:- ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಮೂಲ ಅಂಕಪಟ್ಟಿ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯ ಮೂಲ ಅಂಕಪಟ್ಟಿಗಳನ್ನು ದಾಖಲೆಗಳ ಪರಿಶೀಲನೆ ಸಮಯದಲ್ಲಿ ಪ್ರಾಧಿಕಾರದ ಮುಂದೆ ಹಾಜರುಪಡಿಸಬೇಕು.
  2. ಜನ್ಮ ದಿನಾಂಕಃ ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಮೂಲ ಅಂಕಪಟ್ಟಿ ಅಥವಾ ಮೂಲ ಜನನ ಪ್ರಮಾಣ ಪತ್ರವನ್ನು ದಾಖಲೆಗಳ ಪರಿಶೀಲನೆ ಸಮಯದಲ್ಲಿ ಪ್ರಾಧಿಕಾರದ ಮುದೆ ಹಾಜರುಪಡಿಸಬೇಕು.
  3. ಮೀಸಲಾತಿ ಕೋರುವ ಮಾನ್ಯವಿರುವ ಮೂಲ ಪ್ರಮಾಣ ಪತ್ರಗಳು:- ಅಭ್ಯರ್ಥಿಯು ದಾಖಲೆಗಳ ಪರಿಶೀಲನೆ ಸಮಯದಲ್ಲಿ ಪ್ರಾಧಿಕಾರದ ಮುಂದೆ ಹಾಜರುಪಡಿಸಬೇಕು.
  4. ಗುರುತಿನ ಪುರಾವೆ:- ಅಭ್ಯರ್ಥಿಯು ದಾಖಲೆಗಳ ಪರಿಶೀಲನೆ ಸಮಯದಲ್ಲಿ ಗುರುತಿನ ಪುರಾವೆಯಾಗಿ ಮೂಲ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಇತರೆ ದಾಖಲೆಗಳನ್ನು ಪ್ರಾಧಿಕಾರದ ಮುಂದೆ ಹಾಜರುಪಡಿಸಬೇಕು. ಪ್ರಾಧಿಕಾರವು ನಿರ್ದೇಶಿಸಿದಾಗ ಸಂಬಂಧಪಟ್ಟ ದಾಖಲೆಗಳನ್ನು ಅಭ್ಯರ್ಥಿಗಳು ಹಾಜರುಪಡಿಸಬೇಕು.

ಆನಲೈನ್ ಮುಖಾಂತರ ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ವೇಳಾಪಟ್ಟಿ:-

  1. ಆನಲೈನ್ ಮುಖಾಂತರ  ಅರ್ಜಿ ಸಲ್ಲಿಕೆ ಆರಂಭ:- 29 ಜೂನ್ 2026
  2. ಆನಲೈನ್ ಮುಖಾಂತರ  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 28 ಜುಲೈ 2026
  3. ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ:- 28 ಜುಲೈ 2026

ಆನಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-

  1. 10 ನೇ ತರಗತಿ ಅಂಕಪಟ್ಟಿ
  2. ವಿಧ್ಯಾರ್ಹತೆ ಪ್ರಮಾಣ ಪತ್ರಗಳು (ಹುದ್ದೆಗೆ ಅನುಗುಣವಾಗಿ)
  3. ಜಾತಿ ಪ್ರಮಾಣ ಪತ್ರ
  4. ಮೀಸಲಾತಿ ಪ್ರಮಾಣ ಪತ್ರಗಳು (ಕನ್ನಡ/ಗ್ರಾಮೀಣ/ಮುಳುಗಡೆ)
  5. ಅಂಗವೀಕಲ್ ಪ್ರಮಾಣ ಪತ್ರ (ಅಂಗವೀಕಲ ಅಭ್ಯರ್ಥಿಗಳಿಗೆ ಮಾತ್ರ)
  6. ಮೊಬೈಲ್ ಸಂಖ್ಯೆ & ಮೇಲ್ ಐಡಿ
  7. ಇತ್ತೀಚಿನ White Background ಭಾವಚಿತ್ರ & ಸಹಿ
ಶೀಘ್ರಲಿಪಿಗಾರರು ಗ್ರೇಡ್-III  ಹುದ್ದೆಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ ಮಾಡಿ https://cdnbbsr.s3waas.gov.in/s3ec027486cef2522ee03547cfb970a404/uploads/2026/06/2026062793.pdf
ಬೆರಳಚ್ಚುಗಾರರು ಹುದ್ದೆಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ ಮಾಡಿhttps://cdnbbsr.s3waas.gov.in/s3ec027486cef2522ee03547cfb970a404/uploads/2026/06/2026062717.pdf
ಬೆರಳಚ್ಚು-ನಕಲುಗಾರರು  ಹುದ್ದೆಯ ಅಧಿಸೂಚನೆಗಾಗಿ ಇಲ್ಲಿ  ಕ್ಲಿಕ ಮಾಡಿ ನೇಮಕಾತಿ-2026https://cdnbbsr.s3waas.gov.in/s3ec027486cef2522ee03547cfb970a404/uploads/2026/06/2026062725.pdf
ಶೀಘ್ರಲಿಪಿಗಾರರು ಗ್ರೇಡ್-III  ಹುದ್ದೆಗೆ ಅರ್ಜಿ ಸಲ್ಲಿಸಲು  ಇಲ್ಲಿ ಕ್ಲಿಕ ಮಾಡಿhttps://judiciary.karnataka.gov.in/recruitment/district/ckm/stg/home.php
ಬೆರಳಚ್ಚುಗಾರರು ಹುದ್ದೆಗೆ ಅರ್ಜಿ ಸಲ್ಲಿಸಲು  ಇಲ್ಲಿ ಕ್ಲಿಕ ಮಾಡಿhttps://judiciary.karnataka.gov.in/recruitment/district/ckm/typ/home.php
ಬೆರಳಚ್ಚು-ನಕಲುಗಾರರು ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ ಮಾಡಿ https://judiciary.karnataka.gov.in/recruitment/district/ckm/tcp/home.php

 

 

Leave a Comment

Your email address will not be published. Required fields are marked *

Scroll to Top