ಸರ್ಕಾರಿ/ಖಾಸಗಿ/ಅನುದಾನಿತ ಸ್ನಾತಕೋತ್ತರ ಪದವಿ ಕಾಲೇಜುಗಳಲ್ಲಿ ಖಾಯಂ/ಅತಿಥಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಬೇಕು ಎಂಬುದು ಲಕ್ಷಾಂತರ ಆಕಾಂಕ್ಷಿಗಳ ಕನಸಾಗಿದ್ದು, ಈ ಕನಸನ್ನು ನನಸಾಗಿಸಿಕೊಳ್ಳಲು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ (KSET) ಅರ್ಹತಾ ಪರೀಕ್ಷೆಯಲ್ಲಿ ಪಾಸಾಗುವುದು ಕಡ್ಡಾಯವಾಗಿದ್ದು, KSET ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿ ಆನಲೈನ ಮುಖಾಂತರ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಶೈಕ್ಷಣಿಕ ವಿದ್ಯಾರ್ಹತೆ:-
- ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಪಾಸಾಗಿರಬೇಕು ಅಥವಾ ಅಂತೀಮ/ದ್ವೀತೀಯ ವರ್ಷದಲ್ಲಿ ವ್ಯಾಸಾಂಗ ಮಾಡುತ್ತಿರುವ ಅಭ್ಯರ್ಥಿಗಳು KSET ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹರಿರುತ್ತಾರೆ.
ವಯೋಮಿತಿ:-
- ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ (KSET) ಅರ್ಹತಾ ಪರೀಕ್ಷೆ-2026 ಕ್ಕೆ ಹಾಜರಾಗಲು ಯಾವುದೇ ಗರಿಷ್ಠ ವಯೋಮಿತಿ ಇರುವುದಿಲ್ಲ.
ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಅರ್ಜಿ ಶುಲ್ಕ:-
- ಸಾಮಾನ್ಯ ವರ್ಗ & ಇತರೆ ಹಿಂದುಳಿದ ವರ್ಗಗಳು (2A, 2B, 3A, 3B):- 750/-
- ಪ್ರವರ್ಗ-1/Sc /St/Pwd/ತೃತೀಯ ಲಿಂಗಿಗಳಿಗೆ:- 500/-
ಪ್ರಮುಖ ದಿನಾಂಕಗಳು:-
- ಅಧಿಸೂಚನೆ ಬಿಡುಗಡೆ ಮಾಡಿದ ದಿನಾಂಕ: 10 ಅಗಸ್ಟ್ 2026
- ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭಿಸಿದ ದಿನಾಂಕ: 10 ಅಗಸ್ಟ್ 2026
- ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05 ಸಪ್ಟೆಂಬರ್ 2026
- ಆನ್‌ಲೈನ್ ಮುಖಾಂತರ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 06 ಸಪ್ಟೆಂಬರ್ 2026
- ಪ್ರವೇಶ ಪತ್ರ ಬಿಡುಗಡೆಯ ದಿನಾಂಕ: 01 ಅಕ್ಟೋಬರ್ 2026
- KSET ಪರೀಕ್ಷಾ ದಿನಾಂಕ: 11 ಅಕ್ಟೋಬರ್ 2026
ಅರ್ಹತಾ ನಿಬಂಧನೆಗಳು:-
- ಅಭ್ಯರ್ಥಿಗಳು ಯು.ಜಿ.ಸಿ ಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯ / ಉನ್ನತ ಶಿಕ್ಷಣ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಅಥವಾ ಸಮಾನವಾದ ಪರೀಕ್ಷೆಯಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಕಡ್ಡಾಯವಾಗಿ ಶೇ.55% ರಷ್ಟು ಅಂಕಗಳನ್ನು (ಪೂರ್ಣಾಂಕಿತಗೋಳಿಸಿರಬಾರದು) ಪಡೆದಿರಬೇಕು. ಪರಿಶಿಷ್ಟ ಜಾತಿ (SC-A/SC-B/SC-C), ಪರಿಶಿಷ್ಟ ಪಂಗಡ (ST), ಇತರೆ ಹಿಂದುಳಿದ ಅಭ್ಯರ್ಥಿಗಳು (ಪ್ರವರ್ಗ-I, IIA, IIB, IIIA, IIIB) ವಿಶೇಷಚೇತನರು (PwD) ಹಾಗೂ ತೃತೀಯ ಲಿಂಗ ಗುಂಪಿಗೆ ಸೇರಿದ ಅಭ್ಯರ್ಥಿಗಳು ಕಡ್ಡಾಯವಾಗಿ ಶೇ.50% ರಷ್ಟು (ಪೂರ್ಣಾಂಕಿತಗೋಳಿಸಿರಬಾರದು) ಅಂಕಗಳನ್ನು ಪಡೆದಿರಬೇಕು.
- ಸ್ನಾತಕೋತ್ತರ ಪದವಿ ಪಡೆದವರು ಹಾಗೂ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ (ಅಂತಿಮ ಅಥವಾ ದ್ವಿತೀಯ) ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಕೆಸೆಟ್ ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ. ಆದರೆ, ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ಪರೀಕ್ಷೆ ತೆಗೆದುಕೊಳ್ಳಲು ತಾತ್ಕಾಲಿಕವಾಗಿ ಮಾತ್ರ ಪ್ರವೇಶ ನೀಡಲಾಗುವುದು. ಅವರು ಸ್ನಾತಕೋತ್ತರ ಪದವಿ ಅಥವಾ ಸಮಾನವಾದ ಪರೀಕ್ಷೆಯನ್ನು ಸಾಮಾನ್ಯ ವರ್ಗದವರು ಕಡ್ಡಾಯವಾಗಿ ಶೇ.55% ರಷ್ಟು ಹಾಗೂ ಪರಿಶಿಷ್ಟ ಜಾತಿ (SC-A/SC-B/SC-C), ಪರಿಶಿಷ್ಟ ಪಂಗಡ (ST), ಪ್ರವರ್ಗ-I, IIA, IIB, IIIA, ಮತ್ತು IIIB, ವಿಶೇಷಚೇತನ (PwD) ಮತ್ತು ತೃತೀಯ ಲಿಂಗದ ಅಭ್ಯರ್ಥಿಗಳು ಕಡ್ಡಾಯವಾಗಿ ಶೇ. 50% ರಷ್ಟು ಅಂಕ ಪಡೆದು, ಅರ್ಹತೆ ಹೊಂದಿ ಕೆಸೆಟ್ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ ದಿನಾಂಕದಿಂದ ಎರಡು ವರ್ಷಗಳೊಳಗಾಗಿ ಅವರ ಸ್ನಾತಕೋತ್ತರ ಪದವಿಯ ಅಂಕಪಟ್ಟಿಗಳನ್ನು ಸಲ್ಲಿಸಿದರೆ ಮಾತ್ರ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪ್ರಮಾಣ ಪತ್ರ ಪಡೆಯಬಹುದಾಗಿರುತ್ತದೆ ಇಲ್ಲವಾದಲ್ಲಿ ಅಂತಹವರ ಅರ್ಹತೆಯನ್ನು ರದ್ದುಪಡಿಸಲಾಗುತ್ತದೆ.
- ಸ್ನಾತಕೋತ್ತರ ಪದವಿಯಲ್ಲಿ ಅಧ್ಯಯನ ಮಾಡಿದ ವಿಷಯದಲ್ಲೇ ಅಭ್ಯರ್ಥಿಗಳು ಕೆಸೆಟ್ (KSET) ಪರೀಕ್ಷೆಯನ್ನು ತೆಗೆದುಕೊಳ್ಳಬೇಕಾಗುತ್ತದೆ, ಪ್ರಸ್ತುತ ಕೆ.ಇ.ಎ ಪ್ರಕಟಿಸಿದ ಕೆಸೆಟ್-2026 ಅಧಿಸೂಚನೆಯಲ್ಲಿ ಇಲ್ಲದಿರುವ ವಿಷಯಗಳಿಗೆ, ಅಭ್ಯರ್ಥಿಗಳು ವರ್ಷದಲ್ಲಿ ಎರಡು ಬಾರಿ ನಡೆಯುವ ಯು.ಜಿ.ಸಿ. ಎನ್.ಇ.ಟಿ ಅಥವಾ ಯು.ಜಿ.ಸಿ.-ಸಿ.ಎಸ್.ಐ.ಆರ್-ಎನ್.ಇ.ಟಿ ಪರೀಕ್ಷೆಯನ್ನು ತೆಗೆದುಕೊಳ್ಳಬಹುದಾಗಿರುತ್ತದೆ.
- 1991ರ ಸೆಪ್ಟೆಂಬರ್ 19 ರೊಳಗೆ ಸ್ನಾತಕೋತ್ತರ ಪೂರ್ಣಗೊಳಿಸಿ (ಫಲಿತಾಂಶ ಘೋಷಣೆಯ ದಿನಾಂಕವನ್ನು ಲೆಕ್ಕಿಸದೆ) ಹಾಗೂ ಪಿ.ಹೆಚ್.ಡಿ ಪದವಿ ಪಡೆದವರು ಕೆಸೆಟ್ ಪರೀಕ್ಷೆಯನ್ನು ತೆಗೆದುಕೊಳ್ಳಲು ಒಟ್ಟು ಅಂಕಗಳಲ್ಲಿ 5% ವಿನಾಯಿತಿ ಇರುತ್ತದೆ (55% ರ ಬದಲಾಗಿ 50%).
- ಸಾಮಾನ್ಯ ವರ್ಗದ ಅಭ್ಯರ್ಥಿಗಳನ್ನು ಹೊರತುಪಡಿಸಿ, ಮೀಸಲಾತಿಯನ್ನು ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲೇ ಸ್ಪಷ್ಟವಾಗಿ ಜಾತಿಯ ವಿವರಗಳನ್ನು ನಮೂದಿಸಬೇಕಾಗುತ್ತದೆ. SC-A, SC-B, SC-C, ST, CAT-1, IIA, IIB, IIIA, ಮತ್ತು IIIB ಅಭ್ಯರ್ಥಿಗಳು ಸಕ್ಷಮ ಪ್ರಾಧಿಕಾರದಿಂದ ನೀಡುವ ಪ್ರವರ್ಗ ಪ್ರಮಾಣಪತ್ರಗಳನ್ನು ಕಡ್ಡಾಯವಾಗಿ ಪಡೆದಿರಬೇಕು. (ವಿವಾಹಿತ ಅಭ್ಯರ್ಥಿಗಳು ಒಟ್ಟು ಕುಟುಂಬ ಆದಾಯವನ್ನು ಘೋಷಿಸಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಕ್ಷಮ ಪ್ರಾಧಿಕಾರದಿಂದ ಪಡೆದು ಸಲ್ಲಿಸಬೇಕು ಹಾಗೂ ವಿವಾಹಿತ ಮಹಿಳಾ ಅಭ್ಯರ್ಥಿಗಳು ತಮ್ಮ ಹೆಸರಿನೊಂದಿಗೆ ಪತಿಯ ಹೆಸರಿನಲ್ಲಿ ಜಾರಿಯಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಕ್ಷಮ ಪ್ರಾಧಿಕಾರದಿಂದ ಪಡೆದು ಸಲ್ಲಿಸಬೇಕು) ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಚಾಲ್ತಿಯಲ್ಲಿರುವ ಪ್ರಮಾಣ ಪತ್ರದ ರೆವಿನ್ಯೂ ಡಿವಿಜನ್ (RD) ಸಂಖ್ಯೆ ನಮೂದಿಸುವುದು ಕಡ್ಡಾಯ, ನಂತರ ಸಲ್ಲಿಸುವ ಪ್ರಮಾಣ ಪತ್ರಗಳನ್ನು ಪರಿಗಣಿಸಲಾಗುವುದಿಲ್ಲ
- ವಿಶೇಷಚೇತನ ಅಭ್ಯರ್ಥಿಗಳು ವಿವಿಧ ವೈಕಲ್ಯತೆಯ ಶೇ.40ಕ್ಕಿಂತ ಕಡಿಮೆ ಇಲ್ಲದಿರುವ ಬಗ್ಗೆ ಸರ್ಕಾರದ ಅಧಿಕೃತ ಜ್ಞಾಪನ ಸಂಖ್ಯೆ: ಸಿಆಸುಇ 115 ಸೆನನಿ 2005ರಲ್ಲಿ ನಿಗದಿ ಪಡಿಸಿದ ನಮೂನೆಯಲ್ಲಿ ಅಂಗವಿಕಲತೆ ಬಗ್ಗೆ ಜಿಲ್ಲಾ ಮಟ್ಟದ ವೈದ್ಯಕೀಯ ಮಂಡಳಿಯಿಂದ ನೀಡಲಾದ ವೈದ್ಯಕೀಯ ಪ್ರಮಾಣ ಪತ್ರದ UDID ಸಂಖ್ಯೆಯನ್ನು ಆನಲೈನನಲ್ಲಿ ಅರ್ಜಿ ಭರ್ತಿ ಮಾಡುವಾಗ ಕಡ್ಡಾಯವಾಗಿ ನಮೂದಿಸಬೇಕು.
- ತೃತೀಯ ಲಿಂಗ ಮೀಸಲಾತಿ ಕೋರುವ ಅಭ್ಯರ್ಥಿಗಳು, ತೃತೀಯ ಲಿಂಗ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಅಧಿನಿಯಮ 2019ರ ಕೇಂದ್ರ ಅಧಿನಿಯಮ 2019 ರ ಸೆಕ್ಷನ್ 6 ರ ಖಂಡ (1) ರಲ್ಲಿ ನಿರ್ದೇಶಿಸಿದಂತೆ, ಸಂಬಂಧಪಟ್ಟ ಜಿಲ್ಲಾ ದಂಡಾಧಿಕಾರಿಗಳು ಜಾರಿಮಾಡಿರುವ ತೃತೀಯ ಲಿಂಗ ಪ್ರಮಾಣ ಪತ್ರವನ್ನು ಪಡೆದಿರುವುದು ಕಡ್ಡಾಯ, ಆನಲೈನನಲ್ಲಿ ಅರ್ಜಿ ಭರ್ತಿ ಮಾಡುವಾಗ ಕಡ್ಡಾಯವಾಗಿ ನಮೂದಿಸಬೇಕು.
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಮಾಣ ಪತ್ರಗಳು ಯಾವುದೇ ಹಂತದಲ್ಲಾದರೂ, ಸುಳ್ಳು ಎಂದು ಸಾಬೀತಾದರೆ ಅವರ ಅಭ್ಯರ್ಥಿತನವನ್ನು ಮುನ್ಸೂಚನೆ ಇಲ್ಲದೆ ರದ್ದುಗೊಳಿಸಲಾಗುತ್ತದೆ ಮತ್ತು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ.
- ಹೊರರಾಜ್ಯದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಮೀಸಲಾತಿ ಇರುವುದಿಲ್ಲ. ಅವರು ಸ್ನಾತಕೋತ್ತರ ಪರೀಕ್ಷೆಯಲ್ಲಿ ನಿಗದಿತ ಕನಿಷ್ಠ 55% ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿದ್ದಲ್ಲಿ ಮಾತ್ರ ಸಾಮಾನ್ಯ ವರ್ಗಡಿಯಲ್ಲಿ ಪ್ರವೇಶತೆಗೆ ನೊಂದಾಯಿಸಬಹುದು. SC-A/SC-B/SC-C/ST/OBC/Transgender/PwD ಅರ್ಹತೆಯ ನಿಯಮವು ಕೇವಲ ಕರ್ನಾಟಕ ರಾಜ್ಯದ SC-A/SC-B/SC-C/ST/OBC/Transgender/PwD ಅಭ್ಯರ್ಥಿಗಳಿಗೆ ಮಾತ್ರ ಅನ್ವಯವಾಗುತ್ತದೆ.
- ಅಭ್ಯರ್ಥಿಗಳು ಮುಖ್ಯವಾಗಿ ಗಮನಿಸಬೇಕಾದ ಅಂಶವೆಂದರೆ ಅವರ ಅಭ್ಯರ್ಥಿತನವು ತಾತ್ಕಾಲಿಕವೆಂದು ಪರಿಗಣಿಸಿಕೊಳ್ಳಬೇಕು, ಪ್ರವೇಶಾತಿ ಪಡೆದ ಕಾರಣಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅವರನ್ನು ಅರ್ಹ ಅಭ್ಯರ್ಥಿಯಾಗಿ ಪರಿಗಣಿಸಿದೆ ಎಂದು ತಿಳಿಯಬಾರದು. ಅಭ್ಯರ್ಥಿಗಳ ಅರ್ಹತಾ ನಿಬಂಧನೆಗಳನ್ನು ಪರಿಶೀಲಿಸಿದ ನಂತರ ಅವರ ಅಭ್ಯರ್ಥಿತನವನ್ನು ಪರಿಗಣಿಸಲಾಗುತ್ತದೆ.
- ಈಗಾಗಲೇ ಕೆಸೆಟ್ ಪರೀಕ್ಷೆಯಲ್ಲಿ ಯಾವುದೇ ಒಂದು ವಿಷಯದಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು 2026 ಕೆಸೆಟ್ ಪರೀಕ್ಷೆಗೆ ಅದೇ ವಿಷಯದಲ್ಲಿ (Same Subject) ಅರ್ಜಿ ಸಲ್ಲಿಸುವಂತಿಲ್ಲ. ಯಾವುದೇ ವಿಷಯದಲ್ಲಿ ಕೆಸೆಟ್ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಪುನಃ ಅದೇ ವಿಷಯದಲ್ಲಿ ಅರ್ಜಿ ಸಲ್ಲಿಸಿದ್ದು ಕಂಡು ಬಂದಲ್ಲಿ ಅಂತಹ ಅಭ್ಯರ್ಥಿಗಳ ಅರ್ಹತೆಯನ್ನು ರದ್ದುಪಡಿಸಲಾಗುವುದು ಹಾಗೂ ಅವರು ಹಿಂದೆ ಪಡೆದಿರುವ ಕೆಸೆಟ್ ಪರೀಕ್ಷೆಯ ಅರ್ಹತೆಯನ್ನು ಕೂಡ ಡಿನೋಟಿಫಿಕೇಷನ್ ಮೂಲಕ ಹಿಂಪಡೆಯಲಾಗುತ್ತದೆ.
- ಭಾರತೀಯ ವಿಶ್ವವಿದ್ಯಾಲಯ / ಸಂಸ್ಥೆ ನೀಡುವ ಎರಡು ವರ್ಷದ ಸ್ನಾತಕೋತ್ತರ ಡಿಪ್ಲೊಮಾ / ಪ್ರಮಾಣಪತ್ರ ಅಥವಾ ವಿದೇಶಿ ವಿಶ್ವವಿದ್ಯಾಲಯ / ಸಂಸ್ಥೆ ನೀಡುವ ವಿದೇಶಿ ಪದವಿ / ಡಿಪ್ಲೊಮಾ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ತಮ್ಮ ಹಿತದೃಷ್ಟಿಯಿಂದ, ಮಾನ್ಯತೆ ಪಡೆದ ಭಾರತೀಯ ಸ್ನಾತಕೋತ್ತರ ಪದವಿಯೊಂದಿಗೆ ತಮ್ಮ ಡಿಪ್ಲೊಮಾ/ ಪದವಿ/ ಪ್ರಮಾಣಪತ್ರದ ಸಮಾನತೆಯನ್ನು (ಅಸೋಸಿಯೇಷನ್ ಆಫ್ ಇಂಡಿಯನ್ ಯೂನಿವರ್ಸಿಟೀಸ್ (ಎಐಯು) ನವದೆಹಲಿ (www.aiu.ac.in) ಯಿಂದ ಖಚಿತಪಡಿಸಿಕೊಳ್ಳಬೇಕಾಗುತ್ತದೆ.
ವಿನಾಯಿತಿಯ ವಿವರ :-
ಕರ್ನಾಟಕ ರಾಜ್ಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ, ವಿಶ್ವವಿದ್ಯಾನಿಲಯ / ಪ್ರಥಮ ದರ್ಜೆ ಕಾಲೇಜುಗಳು/ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ (ಸರ್ಕಾರಿ/ಅನುದಾನಿತ/ಖಾಸಗಿ) ನೇಮಕವಾಗಬೇಕಾದರೆ, ಅಭ್ಯರ್ಥಿಗಳು ಕಡ್ಡಾಯವಾಗಿ ಕೆಸೆಟ್ ಅಥವಾ UGC-NET ಪರೀಕ್ಷೆಯಲ್ಲಿ ಅರ್ಹತೆ ಪಡೆದಿರಬೇಕೆಂಬ ನಿಯಮವಿದೆ.
- ಯು.ಜಿ.ಸಿ ಕಾಲಕಾಲಕ್ಕೆ ಹೊರಡಿಸುವ ನಿಬಂಧನೆಗಳು, ಯು.ಜಿ.ಸಿ ಮಾರ್ಗಸೂಚಿಗಳು ಹಾಗೂ ಅಧಿನಿಯಮಗಳ ಅನ್ವಯ ಕೆಸೆಟ್ ಅರ್ಹತೆ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುತ್ತದೆ.
- ಅಭ್ಯರ್ಥಿಯು 1989 ಕ್ಕಿಂತ ಮುಂಚಿತವಾಗಿ ಯು.ಜಿ.ಸಿ-ನೆಟ್/ಸಿ.ಎಸ್.ಐ.ಆರ್-ನೆಟ್, ಜೆ.ಆರ್.ಎಫ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಲ್ಲಿ ಅಂತಹವರಿಗೆ ಕೆಸೆಟ್ ಪರೀಕ್ಷೆಯಿಂದ ವಿನಾಯಿತಿ ಇರುತದ್ತೆ
- ಅಭ್ಯರ್ಥಿಯು 1ನೇ ಜೂನ್ 2002 ಕ್ಕಿಂತ ಮೊದಲು ನಡೆಸಲಾದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ (SET) ತರ್ಗಡೆಯಾಗಿದ್ದ ಅಭ್ಯರ್ಥಿಗಳಿಗೂ ಸಹ ಕೆಸೆಟ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿರುತ್ತದೆ. ಅಂತಹ ಅಭ್ಯರ್ಥಿಗಳು ಭಾರತದಲ್ಲಿ ಎಲ್ಲಿಯಾದರೂ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರಾಗುತ್ತಾರೆ. ಆದರೆ 01 ಜೂನ್, 2002 ರ ನಂತರ ಕೆಸೆಟ್ ಪರೀಕ್ಷೆಯನ್ನು ಅರ್ಹರಾದ ಅಭ್ಯರ್ಥಿಗಳು ಆಯಾ ರಾಜ್ಯಗಳ ವಿಶ್ವವಿದ್ಯಾನಿಲಯಗಳು / ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮಾತ್ರ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರಾಗಿರುತ್ತಾರೆ.
ಪರೀಕ್ಷಾ ವಿಧಾನ:-
- ಕೆಸೆಟ್ (KSET) ಪರೀಕ್ಷೆಯಲ್ಲಿ ಎರಡು ಪ್ರಶ್ನೆಪತ್ರಿಕೆಗಳಿರುತ್ತವೆ. ಎರಡು ಪತ್ರಿಕೆಗಳು ಸಹ ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತವೆ. ಪರೀಕ್ಷೆಯನ್ನು ಆಫ್‌ಲೈನ್ ಓ.ಎಂ.ಆರ್ ಮಾದರಿಯಲ್ಲಿ ದಿನಾಂಕ:11.10.2026 ರಂದು ಒಂದು ಅವಧಿಯಲ್ಲಿ ಈ ಕೆಳಕಂಡಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುತ್ತದೆ.
| ಪತ್ರಿಕೆಗಳ ವಿವರ | ಅಂಕಗಳ ವಿವರ | ಪ್ರಶ್ನೆಗಳ ಸಂಖ್ಯೆ | ಅವಧಿ |
| ಪತ್ರಿಕೆ-1 | 100 | 50 ಪ್ರಶ್ನೆಗಳು ಕಡ್ಡಾಯವಾಗಿರುತ್ತವೆ | 3 ಗಂಟೆಗಳು (ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.00 ರವರೆಗೆ) |
| ಪತ್ರಿಕೆ-2 | 200 | 100 ಪ್ರಶ್ನೆಗಳು ಕಡ್ಡಾಯವಾಗಿರುತ್ತವೆ |
ಪತ್ರಿಕೆ -1 : ಸಾಮಾನ್ಯ ಪತ್ರಿಕೆಯು ಅಭ್ಯರ್ಥಿಗಳ ಬೋಧನೆ, ಸಂಶೋಧನೆ ಮತ್ತು ಬೌದ್ಧಿಕ ಸಾಮರ್ಥ್ಯಗಳನ್ನು ಪರೀಕ್ಷಿಸುವುದಾಗಿರುತ್ತದೆ.
- ಈ ಪತ್ರಿಕೆಯು ಅಭ್ಯರ್ಥಿಗಳ ಸಾಮಾನ್ಯ ಪತ್ರಿಕೆಯಾಗಿದ್ದು, ಸಾಮಾನ್ಯ ಜ್ಞಾನ, ಬೋಧನೆ ಹಾಗೂ ಸಂಶೋಧನೆಯ ಅಭಿರುಚಿಗೆ ಸಂಬಂಧಿಸಿರುತ್ತದೆ. ಅಭ್ಯರ್ಥಿಗಳ ಸಾಮಾನ್ಯ ತಿಳಿವಳಿಕೆಗಳನ್ನು ಗ್ರಹಿಸುವ ಹಾಗೂ ಯೋಚನಾ ಸಾಮರ್ಥ್ಯವನ್ನು ಅಳೆಯುವಂತಾಗಿರುತ್ತದೆ. ಈ ಪತ್ರಿಕೆಯು 50 ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿದ್ದು, ಪ್ರತಿ ಪ್ರಶ್ನೆಗೆ 02 ಅಂಕಗಳು ಇರುತ್ತವೆ.
ಪತ್ರಿಕೆ – 2: ವಿಷಯ ಪತ್ರಿಕೆ
- ಈ ಪತ್ರಿಕೆಯು ಅಭ್ಯರ್ಥಿಯು ಅರ್ಜಿ ಸಲ್ಲಿಸುವಾಗ ಆಯ್ಕೆ ಮಾಡಿದ ವಿಷಯವಾಗಿರುತ್ತದೆ. ಈ ಪತ್ರಿಕೆಯು ಆಯ್ಕೆ ಮಾಡಿದ ವಿಷಯದಲ್ಲಿ 100 ಕಡ್ಡಾಯ ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿದ್ದು, ಪ್ರತಿ ಪ್ರಶ್ನೆಗೂ 02 ಅಂಕಗಳಿರುತ್ತವೆ. ಗರಿಷ್ಠ 200 ಅಂಕಗಳಿರುತ್ತವೆ.
ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಜೊತೆಗೆ ನೀಡುವ ಪೇಪರ್-I ಮತ್ತು ಪೇಪರ್-II ರ ಒ.ಎಂ.ಆರ್. ಹಾಳೆಯಲ್ಲಿ ನಿಗದಿಪಡಿಸಿದ ನಮೂನೆಯಲ್ಲಿಯೇ ಉತ್ತರಗಳನ್ನು ಗುರುತಿಸಬೇಕಾಗುತ್ತದೆ.
ಕೆಸೆಟ್ (KSET) ಪರೀಕ್ಷೆಯ ಫಲಿತಾಂಶ ಪ್ರಕಟಣೆಯ ವಿಧಾನ :-
- UGC ಮಾರ್ಗಸೂಚಿಗಳ ಪ್ರಕಾರ KSETನ ಮಾನದಂಡವು UGC-NETನ ಮಾನದಂಡದ ಪ್ರಕಾರವಾಗಿರುತ್ತದೆ. ಇದು ಅಂತಿಮ ಮತ್ತು ಅಭ್ಯರ್ಥಿಗಳು ಇದಕ್ಕೆ ಭಾದ್ಯರಾಗಿಬೇಕಾಗುತ್ತದೆ.
- ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲು ಅಭ್ಯರ್ಥಿಗಳನ್ನು ಈ ಕೆಳಗಿನ UGC ಮಾರ್ಗಸೂಚಿಗಳಂತೆ ಪರಿಗಣಿಸಲಾಗುತ್ತದೆ. ಸಹಾಯಕ ಪ್ರಾಧ್ಯಾಪಕರ ಅರ್ಹತೆಗಾಗಿ ಅಭ್ಯರ್ಥಿಗಳು ಪೇಪರ್-I ಮತ್ತು ಪೇಪರ್-II ರ ಪತ್ರಿಕೆಗಳ ಒಟ್ಟು ಅಂಕಗಳಲ್ಲಿ ಕೆಳಗೆ ನಿರ್ದಿಷ್ಟಪಡಿಸಿದ ಕನಿಷ್ಠ ಅಂಕಗಳನ್ನು ಪಡೆಯಬೇಕಾಗುತ್ತದೆ.
CATEGORY | ಪಡೆಯಬೇಕಾದ ಕನಿಷ್ಠ (%) ಅಂಕಗಳು | |
PAPER-I | PAPER-II | |
General (GM) | ಎರಡು ಪತ್ರಿಕೆಗಳಲ್ಲಿ ಸೇರಿ ಒಟ್ಟು 40% ಅಂಕಗಳು | |
Sc/St/Cat-I/II-A/ II-B/III-A/IIIB/Pwd/Transgender | ಎರಡು ಪತ್ರಿಕೆಗಳಲ್ಲಿ ಸೇರಿ ಒಟ್ಟು 35% ಅಂಕಗಳು | |
ಆನಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-
- 10 ನೇ ತರಗತಿ ಅಂಕಪಟ್ಟಿ
- ಆಧಾರ ಕಾರ್ಡ
- ಪದವಿಯ ಎಲ್ಲ ಅಂಕಟ್ಟಿಗಳು
- ಸ್ನಾತಕೋತ್ತರ ಪದವಿಯ ಎಲ್ಲ ಅಂಕಪಟ್ಟಿಗಳು (ಪಾಸಾಗಿದ್ದರೆ ಮಾತ್ರ)
- ಅಂಗವಿಕಲ ಪ್ರಮಾಣ ಪತ್ರ ( ಅಂಗವೀಕರಲಿಗೆ ಮಾತ್ರ ಅನ್ವಯ)
- ಜಾತಿ ಪ್ರಮಾಣ ಪತ್ರ
- ಮೊಬೈಲ್ ಸಂಖ್ಯೆ & ಇ–ಮೇಲ್ ಐಡಿ
- ಇತ್ತೀಚಿನ ಭಾವಚಿತ್ರ, ಸಹಿ & ಎಡಗೈ ಹೆಬ್ಬೆಟ್ಟಿನ ಗುರುತು.
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ (KSET) ಅರ್ಹತಾ ಪರೀಕ್ಷೆ-2026 ಅಧಿಸೂಚನೆಯನ್ನು ಒದಲು ಇಲ್ಲಿ ಕ್ಲಿಕ ಮಾಡಿ :-https://cetonline.karnataka.gov.in/keawebentry456/kset2026/KSET_NOTI_KAN_10082026kannada.pdf
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ (KSET) ಅರ್ಹತಾ ಪರೀಕ್ಷೆ-2026 ಕ್ಕೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ ಮಾಡಿ :-https://kearecruitment.karnataka.gov.in/kset2026/Account/Login

