ಚಾಮರಾಜನಗರ ಪ್ರಧಾನ ಜಿಲ್ಲಾ & ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು ಗ್ರೇಡ್-III, ಬೆರಳಚ್ಚುಗಾರರು & ಬೆರಳಚ್ಚು-ನಕಲುಗಾರರ ಮತ್ತು ಜವಾನ ಹುದ್ದೆಗಳನ್ನು ನೇರ ನೇಮಕಾತಿಯ ಮುಖಾಂತರ ಭರ್ತಿ ಮಾಡಲು ಆನಲೈನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ:-
- ಒಟ್ಟು ಹುದ್ದೆಗಳು: 25
- ಶೀಘ್ರಲಿಪಿಗಾರರು ಗ್ರೇಡ್-III (Stenographer Grade-III): 02 ಹುದ್ದೆಗಳು
- ಬೆರಳಚ್ಚುಗಾರರು (Typist): 02 ಹುದ್ದೆಗಳು
- ಬೆರಳಚ್ಚು-ನಕಲುಗಾರರು (Typist-Copyist): 04 ಹುದ್ದೆಗಳು
- ಜವಾನ (Peon) :- 13 ಹುದ್ದೆಗಳು
ವಿಧ್ಯಾರ್ಹತೆ:-
ಶೀಘ್ರಲಿಪಿಗಾರರು ಗ್ರೇಡ್-III:
- ದ್ವಿತೀಯ ಪಿ.ಯು.ಸಿ (12ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ & ಆಂಗ್ಲ ಬೆರಳಚ್ಚು ಪ್ರೌಢದರ್ಜೆ ಪರೀಕ್ಷೆ (Senior Grade) ಶೀಘ್ರಲಿಪಿ ಹಾಗೂ ಕನ್ನಡ & ಆಂಗ್ಲ ಬೆರಳಚ್ಚು ಪ್ರೌಢದರ್ಜೆ ಪರೀಕ್ಷೆಗಳಲ್ಲಿ (Senior Grade) ಪಾಸಾಗಿರಬೇಕು.
ಅಥವಾ
- ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್/ಸೆಕ್ರೆಟರಿಯಲ್ ಪ್ರಾಕ್ಟಿಸ್ ಉತ್ತೀರ್ಣರಾಗಿರತಕ್ಕದ್ದು ಮತ್ತು ಅದರಲ್ಲಿ ಕನ್ನಡ / ಆಂಗ್ಲ ಭಾಷೆಯಲ್ಲಿ ಯಾವುದಾದರೂ ಒಂದು ಭಾಷೆಯಲ್ಲಿ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಯದಲ್ಲಿ ಉತ್ತೀರ್ಣರಾಗಿದ್ದರೆ ಅಂತಹ ಅಭ್ಯರ್ಥಿಗಳು ಉಳಿದ ಕನ್ನಡ/ಆಂಗ್ಲ ಭಾಷೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಹಿರಿಯ ದರ್ಜೆ (Senior Grade) ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಬೆರಳಚ್ಚುಗಾರರು:
- ದ್ವಿತೀಯ ಪಿ.ಯು.ಸಿ (12ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ & ಆಂಗ್ಲ ಬೆರಳಚ್ಚು ಪ್ರೌಢದರ್ಜೆ ಪರೀಕ್ಷೆ (Senior Grade) ಪರೀಕ್ಷೆಗಳಲ್ಲಿ ಪಾಸಾಗಿರಬೇಕು.
ಅಥವಾ
- ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್/ಸೆಕ್ರೆಟರಿಯಲ್ ಪ್ರಾಕ್ಟಿಸ್ ಉತ್ತೀರ್ಣರಾಗಿರತಕ್ಕದ್ದು ಮತ್ತು ಅದರಲ್ಲಿ ಕನ್ನಡ / ಆಂಗ್ಲ ಭಾಷೆಯಲ್ಲಿ ಯಾವುದಾದರೂ ಒಂದು ಭಾಷೆಯಲ್ಲಿ ಬೆರಳಚ್ಚು ವಿಷಯದಲ್ಲಿ ಉತ್ತೀರ್ಣರಾಗಿದ್ದರೆ ಅಂತಹ ಅಭ್ಯರ್ಥಿಗಳು ಉಳಿದ ಕನ್ನಡ/ಆಂಗ್ಲ ಭಾಷೆಯ ಬೆರಳಚ್ಚು ಪರೀಕ್ಷೆಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಹಿರಿಯ ದರ್ಜೆ (Senior Grade) ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಬೆರಳಚ್ಚು-ನಕಲುಗಾರರು:
- ದ್ವಿತೀಯ ಪಿ.ಯು.ಸಿ (12ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ & ಆಂಗ್ಲ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆ (Junior Grade) ಪರೀಕ್ಷೆಗಳಲ್ಲಿ ಪಾಸಾಗಿರಬೇಕು.
ಅಥವಾ
- ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್/ಸೆಕ್ರೆಟರಿಯಲ್ ಪ್ರಾಕ್ಟಿಸ್ ಉತ್ತೀರ್ಣರಾಗಿರತಕ್ಕದ್ದು ಮತ್ತು ಅದರಲ್ಲಿ ಕನ್ನಡ / ಆಂಗ್ಲ ಭಾಷೆಯಲ್ಲಿ ಯಾವುದಾದರೂ ಒಂದು ಭಾಷೆಯಲ್ಲಿ ಬೆರಳಚ್ಚು ವಿಷಯದಲ್ಲಿ ಉತ್ತೀರ್ಣರಾಗಿದ್ದರೆ ಅಂತಹ ಅಭ್ಯರ್ಥಿಗಳು ಉಳಿದ ಕನ್ನಡ/ಆಂಗ್ಲ ಭಾಷೆಯ ಬೆರಳಚ್ಚು ಪರೀಕ್ಷೆಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಹಿರಿಯ ದರ್ಜೆ (Senior Grade) ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಜವಾನ:
- ಎಸ್.ಎಸ್.ಎಲ್.ಸಿ (10ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಅಭ್ಯರ್ಥಿಗೆ ಕನ್ನಡ ಓದಲು ಹಾಗೂ ಬರೆಯಲು ಬರಬೇಕು
ವಯೋಮಿತಿ (Age Limit)
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಟ ವಯಸ್ಸು ಈ ಕೆಳಕಂಡಂತೆ ಇರಬೇಕು
- ಸಾಮಾನ್ಯ ವರ್ಗ-ಸಾಮಾನ್ಯ ವರ್ಗದ ಅಭ್ಯರ್ಥಿಗಳು 40 ವರ್ಷ ಮೀರಿರಬಾರದು.
- ಹಿಂದುಳಿದ ವರ್ಗಗಳು (2A, 2B, 3A, 3B):-ಅಭರ್ಥಿಗಳು 43 ವರ್ಷ ಮೀರಿರಬಾರದು
- ಪ್ರವರ್ಗ-1/Sc /St:-ಅಭರ್ಥಿಗಳು 45 ವರ್ಷ ಮೀರಿರಬಾರದು
ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಅರ್ಜಿ ಶುಲ್ಕ:-
- ಸಾಮಾನ್ಯ ವರ್ಗ, ಹಿಂದುಳಿದ ವರ್ಗಗಳು (2A, 2B, 3A, 3B):- 200/-
- ಪ್ರವರ್ಗ-1/Sc /St/Pwd:- ಶುಲ್ಕ ವಿನಾಯಿತಿ ಇರುತ್ತದೆ.
ವೇತನ ಶ್ರೇಣಿ:-
- ಶೀಘ್ರಲಿಪಿಗಾರರು ಗ್ರೇಡ್-III::- 44425-83700
- ಬೆರಳಚ್ಚುಗಾರರು :- 34100-67600
- ಬೆರಳಚ್ಚು-ನಕಲುಗಾರರು:- 34100-67600
- ಜವಾನ:- 27000-46675
ಪರಿವೀಕ್ಷಣಾ ಅವಧಿ:-
ಶೀಘ್ರಲಿಪಿಗಾರರು ಗ್ರೇಡ್-III:- ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸಿವಿಲ್ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977 ರ ಪ್ರಕಾರ ಎರಡು ವರ್ಷಗಳ ಅವಧಿಗೆ ಪರಿವೀಕ್ಷಣಾರ್ಥಿಗಳಾಗಿರುತ್ತಾರೆ. ಹಾಗೂ ಸದರಿ ಅವಧಿಯಲ್ಲಿ ತಮ್ಮ ಹುದ್ದೆಗಳಿಗೆ ನಿಗಧಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ, ಹಾಗೂ ಕನ್ನಡ ಭಾಷಾ ಪರೀಕ್ಷೆಯಲ್ಲಿ& ನಿಯಮದ ಪ್ರಕಾರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ (ಸಿ.ಎಲ್.ಟಿ) ಉತ್ತೀರ್ಣರಾಗಬೇಕು.
ಬೆರಳಚ್ಚುಗಾರರು:- ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸಿವಿಲ್ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977 ರ ಪ್ರಕಾರ ಎರಡು ವರ್ಷಗಳ ಅವಧಿಗೆ ಪರಿವೀಕ್ಷಣಾರ್ಥಿಗಳಾಗಿರುತ್ತಾರೆ. ಹಾಗೂ ಸದರಿ ಅವಧಿಯಲ್ಲಿ ತಮ್ಮ ಹುದ್ದೆಗಳಿಗೆ ನಿಗಧಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ ಹಾಗೂ ಕನ್ನಡ ಭಾಷಾ ಪರೀಕ್ಷೆಯಲ್ಲಿ& ನಿಯಮದ ಪ್ರಕಾರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ (ಸಿ.ಎಲ್.ಟಿ) ಉತ್ತೀರ್ಣರಾಗಬೇಕು
ಬೆರಳಚ್ಚು-ನಕಲುಗಾರರು:- ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸಿವಿಲ್ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977 ರ ಪ್ರಕಾರ ಎರಡು ವರ್ಷಗಳ ಅವಧಿಗೆ ಪರಿವೀಕ್ಷಣಾರ್ಥಿಗಳಾಗಿರುತ್ತಾರೆ. ಹಾಗೂ ಸದರಿ ಅವಧಿಯಲ್ಲಿ ತಮ್ಮ ಹುದ್ದೆಗಳಿಗೆ ನಿಗಧಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ ಹಾಗೂ ಕನ್ನಡ ಭಾಷಾ ಪರೀಕ್ಷೆಯಲ್ಲಿ& ನಿಯಮದ ಪ್ರಕಾರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ (ಸಿ.ಎಲ್.ಟಿ) ಉತ್ತೀರ್ಣರಾಗಬೇಕು
ಜವಾನ:- ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸಿವಿಲ್ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977 ರ ಪ್ರಕಾರ ಎರಡು ವರ್ಷಗಳ ಅವಧಿಗೆ ಪರಿವೀಕ್ಷಣಾರ್ಥಿಗಳಾಗಿರುತ್ತಾರೆ.
ಆಯ್ಕೆ ವಿಧಾನ :-
ಶೀಘ್ರಲಿಪಿಗಾರರು ಗ್ರೇಡ್-III:-ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು & 1 ನಿಮಿಷಕ್ಕೆ 120 ಪದಗಳ ವೇಗದಲ್ಲಿ 5 ನಿಮಿಷಗಳ ಕಾಲ ಉಕ್ತಲೇಖನವನ್ನು ತೆಗೆದುಕೊಂಡು ಉಕ್ತಲೇಖನವನ್ನು 45 ನಿಮಿಷಗಳಲ್ಲಿ ಕಂಪ್ಯೂಟರನಲ್ಲಿ ಅನುಲಿಪಿ ಮಾಡುವ ಕೌಶಲ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು & ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ, 1 ಹುದ್ದೆಗೆ 5 ಅಭ್ಯರ್ಥಿಗಳಂತೆ (1:5 ಅನುಪಾತದಲ್ಲಿ) ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯುವರು. (ಕೌಶಲ್ಯ ಪರೀಕ್ಷೆಯು ಗರಿಷ್ಠ 100 ಅಂಕಗಳನ್ನು ಒಳಗೊಂಡಿದ್ದು, ಅದರಲ್ಲಿ ಅರ್ಹರಾಗಲು ಕನಿಷ್ಠ 50 ಅಂಕಗಳನ್ನು ಪಡೆಯಬೇಕು & ಸಂದರ್ಶನವು 5 ಅಂಕಗಳನ್ನು ಒಳಗೊಂಡಿರುತ್ತದೆ)
ಬೆರಳಚ್ಚುಗಾರರು:-ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು 15 ನಿಮಿಷಗಳ ಕಾಲ ಉಕ್ತಲೇಖನದಲ್ಲಿ ಕೋಡುವ ವಿಷಯವನ್ನು ಕಂಪ್ಯೂಟರನಲ್ಲಿ ಬೆರಳಚ್ಚು ಮಾಡುವ ಅರ್ಹತಾ (ಕೌಶಲ್ಯ) ಪರೀಕ್ಷೆಯಲ್ಲಿ ಗಳಿಸುವ ಅಂಕಗಳು & ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ, 1 ಹುದ್ದೆಗೆ 5 ಅಭ್ಯರ್ಥಿಗಳಂತೆ (1:5 ಅನುಪಾತದಲ್ಲಿ) ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯುವರು. (ಅರ್ಹತಾ ಪರೀಕ್ಷೆಯು ಗರಿಷ್ಠ 100 ಅಂಕಗಳನ್ನು ಒಳಗೊಂಡಿದ್ದು, ಅದರಲ್ಲಿ ಅರ್ಹರಾಗಲು ಕನಿಷ್ಠ 50 ಅಂಕಗಳನ್ನು ಪಡೆಯಬೇಕು & ಸಂದರ್ಶನವು 5 ಅಂಕಗಳನ್ನು ಒಳಗೊಂಡಿರುತ್ತದೆ)
ಬೆರಳಚ್ಚು-ನಕಲುಗಾರರು:- ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು 15 ನಿಮಿಷಗಳ ಕಾಲ ಉಕ್ತಲೇಖನದಲ್ಲಿ ಕೋಡುವ ವಿಷಯವನ್ನು ಕಂಪ್ಯೂಟರನಲ್ಲಿ ಬೆರಳಚ್ಚು ಮಾಡುವ ಅರ್ಹತಾ (ಕೌಶಲ್ಯ) ಪರೀಕ್ಷೆಯಲ್ಲಿ ಗಳಿಸುವ ಅಂಕಗಳು & ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ, 1 ಹುದ್ದೆಗೆ 5 ಅಭ್ಯರ್ಥಿಗಳಂತೆ (1:5 ಅನುಪಾತದಲ್ಲಿ) ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯುವರು. (ಅರ್ಹತಾ ಪರೀಕ್ಷೆಯು ಗರಿಷ್ಠ 100 ಅಂಕಗಳನ್ನು ಒಳಗೊಂಡಿದ್ದು, ಅದರಲ್ಲಿ ಅರ್ಹರಾಗಲು ಕನಿಷ್ಠ 50 ಅಂಕಗಳನ್ನು ಪಡೆಯಬೇಕು & ಸಂದರ್ಶನವು 5 ಅಂಕಗಳನ್ನು ಒಳಗೊಂಡಿರುತ್ತದೆ)
ಜವಾನ:– ಜವಾನರ ಹುದ್ದೆಗೆ ಎಸ್.ಎಸ್.ಎಲ್.ಸಿ.ಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ (1:10ರ ಅನುಪಾತದಲ್ಲಿ) ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುತ್ತದೆ ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. (ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ.)
ಸೂಚನೆ:- ಆಯ್ಕೆಯ ಪಟ್ಟಿಯನ್ನು ಕರ್ನಾಟಕ ರಾಜ್ಯ ಪತ್ರ ಅಧಿಸೂಚನೆ ಸಂಖ್ಯೆ LAW 01 LAC 2005, Bengaluru, Dated 13.02.2008 Rule 5 (v) & (vi) ಪ್ರಕಾರ ಪ್ರಕಟಿಸಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:-
- ಅಭ್ಯರ್ಥಿಗಳು ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ಜಾಲತಾಣವಾದ https://chamarajanagara.dcourts.gov.in/online-recruitment/ ನಲ್ಲಿ ನಿಗಧಿಪಡಿಸಿದ ಹುದ್ದೆಗಳಿಗೆ ಪ್ರತ್ಯೇಕವಾಗಿ ಆನಲೈನ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
- ಅಭ್ಯರ್ಥಿಗಳು ಆನಲೈನ ಮೂಲಕ ಅರ್ಜಿಯನ್ನು ದಿನಾಂಕಃ 27.07.2026 ರಿಂದ ದಿನಾಂಕಃ 27.08.2026 ರ ರಾತ್ರಿ 11.59 ರವರೆಗೆಸಲ್ಲಿಸಬಹುದಾಗಿರುತ್ತದೆ. ಮುಂದುವರಿದು ಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಕಡೆಯ ದಿನಾಂಕಃ 29.08.2026 ಆಗಿರುತ್ತದೆ.
- ಅಭ್ಯರ್ಥಿಗಳು ಆನಲೈನ ಮೂಲಕ ಅರ್ಜಿ ಸಲ್ಲಿಸುವಾಗ ಅರ್ಜಿಯಲ್ಲಿ ತಮ್ಮ ಚಾಲ್ತಿಯಲ್ಲಿರುವ ದೂರವಾಣಿ ಸಂಖ್ಯೆ ಹಾಗೂ ಇ – ಮೇಲ್ ವಿಳಾಸವನ್ನು ಕಡ್ಡಾಯವಾಗಿ ನಮೂದಿಸಬೇಕು.
- ಅರ್ಜಿಯನ್ನುಆನ್ ಲೈನ್ ಹೊರತುಪಡಿಸಿ/ ಖುದ್ದಾಗಿ / ಅಂಚೆ ಮೂಲಕ / ಇನ್ನಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ತೆಗೆದುಕೊಳ್ಳಲಾಗುವುದಿಲ್ಲ.
ಪ್ರಮುಖ ದಿನಾಂಕಗಳು
- ಆನಲೈನ್ ಮುಖಾಂತರ ಅರ್ಜಿ ಸಲ್ಲಿಕೆ ಆರಂಭ:- 27 ಜುಲೈ 2026
- ಆನಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 27 ಅಗಸ್ಟ್ 2026
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ:- 29 ಅಗಸ್ಟ್ 2026
ಆನಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-
- 10 ನೇ ತರಗತಿ ಅಂಕಪಟ್ಟಿ
- ವಿಧ್ಯಾರ್ಹತೆ ಪ್ರಮಾಣ ಪತ್ರಗಳು (ಹುದ್ದೆಗೆ ಅನುಗುಣವಾಗಿ)
- ಜಾತಿ ಪ್ರಮಾಣ ಪತ್ರ
- ಮೀಸಲಾತಿ ಪ್ರಮಾಣ ಪತ್ರಗಳು (ಕನ್ನಡ/ಗ್ರಾಮೀಣ/ಮುಳುಗಡೆ)
- ಅಂಗವೀಕಲ್ ಪ್ರಮಾಣ ಪತ್ರ (ಅಂಗವೀಕಲ ಅಭ್ಯರ್ಥಿಗಳಿಗೆ ಮಾತ್ರ)
- ಮೊಬೈಲ್ ಸಂಖ್ಯೆ & ಇ–ಮೇಲ್ ಐಡಿ
- ಇತ್ತೀಚಿನ White Background ಭಾವಚಿತ್ರ & ಸಹಿ
ಶೀಘ್ರಲಿಪಿಗಾರರು ಗ್ರೇಡ್-III ಹುದ್ದೆಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ ಮಾಡಿhttps://cdnbbsr.s3waas.gov.in/s3ec03a36b598abb934e4528412e5a2127/uploads/2026/07/2026072743.pdf
ಬೆರಳಚ್ಚುಗಾರರು ಹುದ್ದೆಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ ಮಾಡಿhttps://cdnbbsr.s3waas.gov.in/s3ec03a36b598abb934e4528412e5a2127/uploads/2026/07/2026072783.pdf
ಬೆರಳಚ್ಚು-ನಕಲುಗಾರರು ಹುದ್ದೆಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ ಮಾಡಿhttps://cdnbbsr.s3waas.gov.in/s3ec03a36b598abb934e4528412e5a2127/uploads/2026/07/2026072719.pdf
ಜವಾನ ಹುದ್ದೆಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ ಮಾಡಿhttps://cdnbbsr.s3waas.gov.in/s3ec03a36b598abb934e4528412e5a2127/uploads/2026/07/2026072750.pdf
ಶೀಘ್ರಲಿಪಿಗಾರರು ಗ್ರೇಡ್-III ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ ಮಾಡಿhttps://judiciary.karnataka.gov.in/recruitment/district/chm/stg/home.php
ಬೆರಳಚ್ಚುಗಾರರು ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ ಮಾಡಿhttps://judiciary.karnataka.gov.in/recruitment/district/chm/typ/home.php
ಬೆರಳಚ್ಚು-ನಕಲುಗಾರರು ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ ಮಾಡಿ https://judiciary.karnataka.gov.in/recruitment/district/chm/tcp/home.php
ಜವಾನ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ ಮಾಡಿ https://judiciary.karnataka.gov.in/recruitment/district/chm/gdp/home.php



