ಕರ್ನಾಟಕ ರಾಜ್ಯ ಸರ್ಕಾರವು ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು, ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ) ನಿಯಮಗಳು 1997 ಹಾಗೂ ಕಾಲಕಾಲಕ್ಕೆ ತಿದ್ದುಪಡಿಯಾದ ನಿಯಮಗಳಡಿಯಲ್ಲಿ ಗೆಜೆಟೆಡ್ ಪ್ರೊಬೇಷನರ್ 2026-27ನೇ ಸಾಲಿನ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿ, ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಹುದ್ದೆಗಳ ವಿವರ:-
- ಒಟ್ಟು ಹುದ್ದೆಗಳು:- 319
- ಹುದ್ದೆಯ ಹೆಸರು:- ಗೆಜೆಟೆಡ್ ಪ್ರೊಬೇಷನರ್
ಇಲಾಖಾವಾರು ಹುದ್ದೆಗಳ ವಿವರ:-
ಗ್ರೂಪ್-ಎ
| ಕ್ರ.ಸಂ. | ಸೇವಾ ವೃಂದದ ಹೆಸರು ಮತ್ತು ಇಲಾಖೆಯ ಹೆಸರು | ಹುದ್ದೆಗಳ ಸಂಖ್ಯೆ | ಒಟ್ಟು ಹುದ್ದೆಗಳ ಸಂಖ್ಯೆ | |
| ಉಳಿಕೆ ಮೂಲ ವೃಂದ | ಕಲ್ಯಾಣ ಕರ್ನಾಟಕ ವೃಂದ | |||
| 1. | ಸಹಾಯಕ ಆಯುಕ್ತರು (ಕಿರಿಯ ಶ್ರೇಣಿ), ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ | 36 | 03 | 39 |
| 2. | ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ | 50 | – | 50 |
| 3. | ಸಹಾಯಕ ನಿರ್ದೇಶಕರು, ಖಜಾನೆ ಇಲಾಖೆ | 02 | – | 02 |
| 4. | ಕಾರ್ಯನಿರ್ವಾಹಕ ಅಧಿಕಾರಿ/ಸಹಾಯಕ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ | 13 | 02 | 15 |
| 5. | ಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ | 11 | – | 11 |
| ಒಟ್ಟು | 112 | 05 | 117 | |
ಗ್ರೂಪ್-ಬಿ
| ಕ್ರ.ಸಂ. | ಸೇವಾ ವೃಂದದ ಹೆಸರು ಮತ್ತು ಇಲಾಖೆಯ ಹೆಸರು | ಹುದ್ದೆಗಳ ಸಂಖ್ಯೆ | ಒಟ್ಟು ಹುದ್ದೆಗಳ ಸಂಖ್ಯೆ | |
| ಉಳಿಕೆ ಮೂಲ ವೃಂದ | ಕಲ್ಯಾಣ ಕರ್ನಾಟಕ ವೃಂದ | |||
| 1. | ತಹಶೀಲ್ದಾರ್ (ಗ್ರೇಡ್-2), ಕಂದಾಯ ಇಲಾಖೆ | 18 | 07 | 25 |
| 2. | ವಾಣಿಜ್ಯ ತೆರಿಗೆ ಅಧಿಕಾರಿ, ವಾಣಿಜ್ಯ ತೆರಿಗೆ ಇಲಾಖೆ | 74 | – | 74 |
| 3. | ಸಹಾಯಕ ಅಧೀಕ್ಷಕರು, ಒಳಾಡಳಿತ ಇಲಾಖೆ (ಕಾರಾಗೃಹ) | 5 | 1 | 6 |
| 4. | ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಸಹಕಾರ ಇಲಾಖೆ | 19 | 02 | 21 |
| 5. | ಸಹಾಯಕ ನಿರ್ದೇಶಕರು, ಕೃಷಿ ಮಾರಾಟ ಇಲಾಖೆ (ಸಹಕಾರ ಇಲಾಖೆ) | 10 | 02 | 12 |
| 6. | ಅಬಕಾರಿ ಉಪ ಅಧೀಕ್ಷಕರು, ಆರ್ಥಿಕ ಇಲಾಖೆ (ಅಬಕಾರಿ ಇಲಾಖೆ) | 05 | – | 05 |
| 7. | ಉದ್ಯೋಗಾಧಿಕಾರಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ | 03 | – | 03 |
| 8. | ಮುಖ್ಯಾಧಿಕಾರಿ (ಗ್ರೇಡ್-1), ನಗರಾಭಿವೃದ್ಧಿ ಇಲಾಖೆ | 18 | 02 | 20 |
| 9. | ಸಹಾಯಕ ಖಜಾನಾಧಿಕಾರಿ, ಆರ್ಥಿಕ ಇಲಾಖೆ (ಖಜಾನೆ) | 12 | – | 12 |
| 10. | ಸಹಾಯಕ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ | 02 | 02 | 04 |
| 11. | ಶಾಖಾಧಿಕಾರಿ, ಕರ್ನಾಟಕ ಸರ್ಕಾರದ ಸಚಿವಾಲಯ | 05 | – | 05 |
| 12 | ಶಾಖಾಧಿಕಾರಿ, ಕರ್ನಾಟಕ ಲೋಕಸೇವಾ ಆಯೋಗ | 03 | 01 | 04 |
| 13 | ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ | 11 | – | 11 |
| ಒಟ್ಟು | 185 | 17 | 202 | |
| ಒಟ್ಟು ಹುದ್ದೆಗಳು (ಗ್ರೂಪ್ ಎ+ಗ್ರೂಪ್ ಬಿ) | ||||
| ಒಟ್ಟು ಗ್ರೂಪ್ ‘ಎ’ | 112 | 05 | 117 | |
| ಒಟ್ಟು ಗ್ರೂಪ್ ‘ಬಿ’ | 185 | 17 | 202 | |
| ಒಟ್ಟು ಹುದ್ದೆಗಳು (ಗ್ರೂಪ್ ಎ+ಗ್ರೂಪ್ ಬಿ) | 297 | 22 | 319 | |
ಪ್ರಮುಖ ದಿನಾಂಕಗಳು:-
- ಅಧಿಸೂಚನೆ ಬಿಡುಗಡೆ ಮಾಡಿದ ದಿನಾಂಕ: 31 ಜುಲೈ 2026
- ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭಿಸಿದ ದಿನಾಂಕ: 01 ಅಗಸ್ಟ್ 2026
- ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಅಗಸ್ಟ್ 2026
- ಪೂರ್ವಭಾವಿ ಪರೀಕ್ಷಾ ದಿನಾಂಕ (ತಾತ್ಕಾಲಿಕ):-15 ನವ್ಹೆಂಬರ್ 2026
- ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಸಲಾಗುವ ಪರೀಕ್ಷೆಗಳು ಹಾಗೂ ವ್ಯಕ್ತಿತ್ವ ಪರೀಕ್ಷೆಯ ಸಂಭಾವ್ಯ ದಿನಾಂಕಗಳು ಹಾಗೂ ಫಲಿತಾಂಶ ಪ್ರಕಟಣೆ ಸಂಭಾವ್ಯ ದಿನಾಂಕಗಳ (Tentative) ಪಟ್ಟಿಯನ್ನು ಆಯೋಗದ ವೆಬ್ಸೈಟ್ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
- ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ತೊಂದರೆಗಳು ಎದುರಾದಲ್ಲಿ ಈ ಕೆಳಕಂಡ HELP LINE NO. ಅನ್ನು ಸಂಪರ್ಕಿಸಲು ಸೂಚಿಸಲಾಗಿರುತ್ತದೆ HELP LINE NO: 080-30574957 / 30574901 / 22356487 / 22200090
- ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೂ ಕಾಯದೆ ಮುಂಚಿತವಾಗಿ ನಿಗದಿತ ಅವಧಿಯಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಕೊನೆಯ ಸಮಯದಲ್ಲಿ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ತಾಂತ್ರಿಕ ದೋಷ/ತೊಂದರೆ ಉಂಟಾದರೆ ಕರ್ನಾಟಕ ಲೋಕಸೇವಾ ಆಯೋಗವು ಜವಾಬ್ದಾರಿಯಾಗುವುದಿಲ್ಲ.
ಅರ್ಹತಾ ಷರತ್ತುಗಳು:-
- ಅಭ್ಯರ್ಥಿಯು ಭಾರತೀಯ ನಾಗರೀಕನಾಗಿರಬೇಕು.
- ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿ ಮತ್ತು ಈಗಾಗಲೇ ಇನ್ನೊಬ್ಬ ಹೆಂಡತಿ ಇರುವ ವ್ಯಕ್ತಿಯನ್ನು ಮದುವೆಯಾಗಿರುವ ಮಹಿಳಾ ಅಭ್ಯರ್ಥಿಯು ಸರ್ಕಾರದಿಂದ ಪೂರ್ವಾನುಮತಿಯನ್ನು ಪಡೆಯದೆ ನೇಮಕಾತಿಗೆ ಅರ್ಹರಾಗುವುದಿಲ್ಲ.
- ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ನೇಮಕಾತಿಯು ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಭವ ಇರುವ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತರಾಗಿರಬೇಕು.
- ದೈಹಿಕವಾಗಿ ಅನಹರಾಗಿದ್ದಾರೆಂಬುದಾಗಿ ವೈದ್ಯಕೀಯ ಮಂಡಳಿಯ ವರದಿಯ ಮೇಲೆ ಅನಹರೆಂದು ತಿರಸ್ಕರಿಸುವ ಪೂರ್ಣ ವಿವೇಚನೆಯನ್ನು ಕರ್ನಾಟಕ ರಾಜ್ಯ ಸರ್ಕಾರವು ಕಾಯ್ದಿರಿಸಿಕೊಂಡಿದೆ ಮತ್ತು ಸರ್ಕಾರದ ವಿವೇಚನೆಯು ಯಾವುದೇ ವಿಧದಲ್ಲೂ ಈ ನಿಯಮಗಳ ಮೂಲಕ ಸೀಮಿತವಾಗಿರುವುದಿಲ್ಲ.
- ಕೇಂದ್ರ ಅಥವಾ ಕರ್ನಾಟಕ ಅಥವಾ ಇತರೆ ರಾಜ್ಯದ ಲೋಕ ಸೇವಾ ಆಯೋಗದಿಂದ ನಡೆಸಲಾಗುವ ಪರೀಕ್ಷೆಗಳಿಂದ ಅಥವಾ ನೇಮಕಾತಿಗಳಿಂದ ಖಾಯಂ ಆಗಿ ಡಿಬಾರ್ ಆದ ವ್ಯಕ್ತಿಗಳು ನೇಮಕಾತಿಗೆ ಅರ್ಹರಾಗುವುದಿಲ್ಲ.
- ಯಾವುದೇ ನೈತಿಕ ಪರಿಭಾಷೆಯಡಿ ಶಿಕ್ಷೆಗೆ ಒಳಪಟ್ಟ ವ್ಯಕ್ತಿ ಅಥವಾ ಕೇಂದ್ರ ಅಥವಾ ಕರ್ನಾಟಕ ಅಥವಾ ಇತರೆ ರಾಜ್ಯದ ಲೋಕ ಸೇವಾ ಆಯೋಗದಿಂದ ನಡೆಸಲಾಗುವ ಪರೀಕ್ಷೆಗಳಿಂದ ಅಥವಾ ನೇಮಕಾತಿಗಳಿಂದ ತಾತ್ಕಾಲಿಕವಾಗಿ ಡಿಬಾರ್ ಆದ ಅಥವಾ ಅನರ್ಹಗೊಂಡ ವ್ಯಕ್ತಿಯು, ಸರ್ಕಾರವು ಎಲ್ಲಾ ಸಂದರ್ಭಗಳನ್ನು ಮರುಪರಿಶೀಲಿಸಿ ಅವರು ನೇಮಕಾತಿಗೆ ಅರ್ಹರೆಂದು ಪರಿಗಣಿಸುವವರೆಗೂ, ನೇಮಕಾತಿಗೆ ಅರ್ಹರಾಗುವುದಿಲ್ಲ.
ಪರೀಕ್ಷೆಯ ಪ್ರಯತ್ನಗಳು:-
- 1997ರ ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿ ನಿಯಮಗಳಡಿ ವಯೋಮಿತಿಯ ಶರತ್ತಿಗೊಳಪಟ್ಟಂತೆ ಈ ಕೆಳಗಿನಂತೆ ಅಭ್ಯರ್ಥಿಗಳಿಗೆ ಪರೀಕ್ಷೆಯ ಪ್ರಯತ್ನಗಳನ್ನು ನಿಗದಿಪಡಿಸಲಾಗಿದೆ.
| ಮೀಸಲಾತಿ | ಪ್ರಯತ್ನಗಳು |
| ಸಾಮಾನ್ಯ ಅರ್ಹತೆ (General Merit) ಅಭ್ಯರ್ಥಿಗಳಿಗೆ | 05 ಬಾರಿ |
| ಪ್ರವರ್ಗ (1), ಪ್ರವರ್ಗ 2(ಅ), 2(ಬಿ), 3(ಅ), 3(ಬಿ) ಅಭ್ಯರ್ಥಿಗಳಿಗೆ | 07 ಬಾರಿ |
| ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ | ಪ್ರಯತ್ನಗಳ ಮಿತಿ ಇರುವುದಿಲ್ಲ. |
ಸೂಚನೆ:
ಪೂರ್ವಭಾವಿ ಪರೀಕ್ಷೆಯ ಪ್ರತಿಯೊಂದು ಪ್ರಯತ್ನವನ್ನು ಒಂದು ಅವಕಾಶವೆಂದು ಪರಿಗಣಿಸಲಾಗುವುದು. ನಿಗದಿತ ಪ್ರಯತ್ನಗಳ ಮಿತಿಯನ್ನು ಮೀರಿದಲ್ಲಿ ಅಭ್ಯರ್ಥಿತತ್ವವು ರದ್ದುಗೊಳಿಸಲಾಗುವುದು.
ಶೈಕ್ಷಣಿಕ ವಿದ್ಯಾರ್ಹತೆ:-
ಈ ಕೆಳಕಂಡ ನಿಗದಿತ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತಾರೆ.
- ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ಸ್ಗಳ ನೇಮಕಾತಿ (ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ) ನಿಯಮಗಳು, 1997 ಹಾಗೂ (8ನೇ ತಿದ್ದುಪಡಿ) ನಿಯಮಗಳು 2010 ರ ನಿಯಮ 7 ರಂತೆ ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದ ಸ್ನಾತಕ ಅಥವಾ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
- ಅಭ್ಯರ್ಥಿಗಳು ಯಾವುದಾದರೂ ಪರೀಕ್ಷೆಗೆ ಹಾಜರಾಗಿದ್ದು, ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಗೆ ಶೈಕ್ಷಣಿಕವಾಗಿ ಅರ್ಹರಾಗುವುದಾದಲ್ಲಿ, ಆದರೆ ಆ ಪರೀಕ್ಷೆಯ ಫಲಿತಾಂಶ ಪ್ರಕಟಗೊಳ್ಳದೆ ಇದ್ದಲ್ಲಿ, ಅಂತಹ ಅಭ್ಯರ್ಥಿಗಳು ಪೂರ್ವಭಾವಿ ಪರೀಕ್ಷೆಗೆ ಪ್ರವೇಶ ಪಡೆಯಲು ಅರ್ಹರಾಗುತ್ತಾರೆ.
ವಿಶೇಷ ಸೂಚನೆ:-
- ಪೂರ್ವಭಾವಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ನಿಗದಿತ ವಿದ್ಯಾರ್ಹತೆಯ ಅಂತಿಮ ವರ್ಷದಲ್ಲಿ/ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಫಲಿತಾಂಶ ಒಂದು ವೇಳೆ ಪ್ರಕಟವಾಗಿರದಿದ್ದಲ್ಲಿ, ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಸಂಬಂಧಿಸಿದ ವಿದ್ಯಾರ್ಹತೆ ಪರೀಕ್ಷೆಯನ್ನು ಪಾಸ್ ಮಾಡಿರುವ ಬಗ್ಗೆ ಅಂತರ್ಜಾಲದಿಂದ ಡೌನ್ಲೋಡ್ ಮಾಡಿಕೊಂಡಿರುವ Result Sheet/ಅಂಕಪಟ್ಟಿಗಳನ್ನು ಕಂಟ್ರೋಲರ್/ರಿಜಿಸ್ಟ್ರಾರ್ರವರಿಂದ ದೃಢೀಕರಿಸಿ (Attested) ಒದಗಿಸತಕ್ಕದ್ದು. ತಪ್ಪಿದಲ್ಲಿ ವಿದ್ಯಾರ್ಹತೆ ಹಾಗೂ ಅಭ್ಯರ್ಥಿತ್ವವನ್ನು ತಿರಸ್ಕರಿಸಲಾಗುವುದು.
ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ:-
- ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಯೋಗವು ನಿಗದಿಪಡಿಸುವ ಯಾವುದೇ ಕೇಂದ್ರ ಸ್ಥಳದಲ್ಲಿ ನಡೆಸಲಾಗುವುದು.
ವಯೋಮಿತಿ:-
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಕೆಳಕಂಡ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು:
| ಕನಿಷ್ಠ | 21 ವರ್ಷಗಳು | |
| ಗರಿಷ್ಠ | ಸಾಮಾನ್ಯ ಅರ್ಹತೆಯಅಭ್ಯರ್ಥಿಗಳಿಗೆ | 40 ವರ್ಷಗಳು |
| ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ | 43 ವರ್ಷಗಳು | |
| ಪರಿಶಿಷ್ಟ ಜಾತಿ/ಪರಿಶಿಷ್ಟಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ | 45 ವರ್ಷಗಳು | |
- ಸರ್ಕಾರದ ಆದೇಶ ಸಂಖ್ಯೆ:ಸಿಸುಣ 262 ಸೇನೇನಿ 2025, ದಿನಾಂಕ: 29-01-2026ರನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one time measure) 05 ವರ್ಷಗಳ ಸಡಿಲಿ ನೀಡಲಾಗಿದೆ.
- ಈ ಕೆಳಗಿನ ಸಂದರ್ಭಗಳಲ್ಲಿ ವಯೋಮಿತಿಯ ಸಡಿಲಿಕೆಯನ್ನು ಕೆಳಗೆ ನೀಡಿದಂತೆ ಮೇರೆಗೆ ಸಡಿಲಿಸಲಾಗುವುದು:
| ಮಾಜಿ ಸೈನಿಕರಿಗೆ | ಸೇವೆ ಸಲ್ಲಿಸಿರುವಷ್ಟು ವರ್ಷಗಳಿಗೆ ಮೂರು ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷಗಳು |
| ಅಂಗವಿಕಲ ಅಭ್ಯರ್ಥಿಗಳಿಗೆ | 10 ವರ್ಷಗಳು |
| ವಿಧವೆಯರಿಗೆ, (ಪ್ರವರ್ಗವಾರು ಗರಿಷ್ಠ ವಯೋಮಿತಿಯನ್ನು ಮೀರಿರಬಾರದು ಎಂದು ವಾದಿಸಲಾಗದುಯೋಜನೆಯಡಿ ವಿಧವೆಯಾದ ಮಹಿಳಾ ಅಭ್ಯರ್ಥಿಗಳಿಗೆ ಸಡಿಲಿಕೆಯನ್ನು ಕೋರಲು ಅವಕಾಶ ನೀಡಲಾಗುವುದು) | 10 ವರ್ಷಗಳು |
ಸ್ಪರ್ಧಾತ್ಮಕ ಪರೀಕ್ಷಾ ವಿಧಾನ:-
ಈ ಸ್ಪರ್ಧಾತ್ಮಕ ಪರೀಕ್ಷೆಯು ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ಸ್ಗಳ ನೇಮಕಾತಿ (ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ) ನಿಯಮ 1997ರ ಶೆಡ್ಯೂಲ್ 2 ರಲ್ಲಿ ತಿಳಿಸಿರುವಂತೆ ಎರಡು ಹಂತಗಳನ್ನು ಒಳಗೊಂಡಿರುತ್ತದೆ:
- ಪೂರ್ವಭಾವಿ ಪರೀಕ್ಷೆಯನ್ನು (Preliminary Examination) ಮುಖ್ಯ ಪರೀಕ್ಷೆಗೆ (Main Examination) ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ನಡೆಸಲಾಗುವುದು ಮತ್ತು ಮುಖ್ಯ ಪರೀಕ್ಷೆಯನ್ನು ಮತ್ತು ವ್ಯಕ್ತಿತ್ವ ಪರೀಕ್ಷೆಯನ್ನು ವಿವಿಧ ಸೇವೆಗಳು ಮತ್ತು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ನಡೆಸಲಾಗುತ್ತದೆ.
- ಹೆಚ್ಚಿನ ವಿವರಗಳಿಗೆ ನಿಯಮಗಳನ್ನು ನೋಡಲು ಸೂಚಿಸಿದೆ. ಈ ನಿಯಮಗಳು ಕರ್ನಾಟಕ ಲೋಕಸೇವಾ ಆಯೋಗದ ವೆಬ್ಸೈಟ್ http://kpsc.kar.nic.inನಲ್ಲಿ ಲಭ್ಯವಿರುತ್ತವೆ.
ಪೂರ್ವಭಾವಿ ಪರೀಕ್ಷೆ:-
ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ) (9ನೇ ತಿದ್ದುಪಡಿ) ನಿಯಮಗಳು, 2011 ರಂತೆ ಪೂರ್ವಭಾವಿ ಪರೀಕ್ಷೆಯು ವಸ್ತುನಿಷ್ಠ (ಬಹು ಆಯ್ಕೆ) ಮಾದರಿಯ ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ. “As per Karnataka Recruitment of Gazetted Probationers (Appointment by Competitive Examinations) (9th Amendment) Rules, 2011 (A) Preliminary Examination – The Preliminary Examination shall consist of two papers of objective type (multiple choice)”
- ಪ್ರತಿ ಪ್ರಶ್ನೆಗೆ ಎರಡು ಅಂಕಗಳಂತೆ ಪ್ರತಿ ಪತ್ರಿಕೆಯು 100 ಪ್ರಶ್ನೆಗಳನ್ನೊಳಗೊಂಡಿರುತ್ತದೆ
- ಪ್ರತಿ ಪತ್ರಿಕೆಯು ಗರಿಷ್ಠ 200 ಅಂಕಗಳು ಮತ್ತು ಎರಡು ಗಂಟೆಗಳ ಕಾಲಾವಧಿಯದ್ದಾಗಿದ್ದು (ಎರಡು ಪತ್ರಿಕೆಗಳಿಗೆ ಒಟ್ಟು 400 ಅಂಕಗಳು)
ಮುಖ್ಯ ಪರೀಕ್ಷೆ:-
- ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ಸ್ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ) (9ನೇ ತಿದ್ದುಪಡಿ) ನಿಯಮಗಳು, 2014, ಅಧಿಸೂಚನೆ ಸಂಖ್ಯೆ:ಡಿಪಿಎಲ್ಆರ್ 235 ಎಸ್ ಎರ್ ಆರ್ 2013, ದಿನಾಂಕ: 24-11-2014ರಂತೆ ಮತ್ತು ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ಸ್ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ) (ತಿದ್ದುಪಡಿ) ನಿಯಮಗಳು, 2020, ಅಧಿಸೂಚನೆ ಸಂಖ್ಯೆ: ಡಿಪಿಎಲ್ಆರ್ 151 ಸೇಲೋಸೇ 2014, ದಿನಾಂಕ:04-06-2020ರಂತೆ ಮುಖ್ಯ ಪರೀಕ್ಷೆಯು ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆಯನ್ನು ಒಳಗೊಂಡಿರುತ್ತದೆ [Karnataka Recruitment of Gazetted Probationers (Appointment by Competitive Examinations) (11th Amendment) Rules, 2014, Notification No. DPAR 235 SRR 2013, dated 24-11-2014 and Karnataka Recruitment of Gazetted Probationers (Appointment by Competitive Examinations) (Amendment) Rules, 2020, Notification No. DPAR 151 SeLoSe 2014, dated:04-06-2020 the Main Examination shall consist of written examination and personality test” ಮತ್ತು ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ಸ್ಗಳ ನೇಮಕಾತಿ (ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ) (ತಿದ್ದುಪಡಿ) ನಿಯಮಗಳು 2022, ಅಧಿಸೂಚನೆ ಸಂಖ್ಯೆ:ಡಿಪಿಎಲ್ಆರ್ 20 ಎಸ್ಎಸ್ ಸಿ 2022, ದಿನಾಂಕ:12-04-2022].
ವ್ಯಕ್ತಿತ್ವ ಪರೀಕ್ಷೆ:-
- ವ್ಯಕ್ತಿತ್ವ ಪರೀಕ್ಷೆಯು ಅಭ್ಯರ್ಥಿಗಳ ವೈಯಕ್ತಿಕ ಗುಣಮಟ್ಟ, ಮತ್ತು ಸಿವಿಲ್ ಸೇವೆಗಳಿಗೆ ಸೂಕ್ತರೇ ಎಂಬ ಬಗ್ಗೆ, ಅಂದರೆ ನಾಯಕತ್ವದ ಗುಣ, ತೀರ್ಮಾನ ತೆಗೆದುಕೊಳ್ಳುವ ವಿವಿಧ & ಆಳವಾದ ಆಸಕ್ತಿ ಒಂದು ಗುಂಪಿನಲ್ಲಿ ಕೆಲಸ ಮಾಡುವ ಸಾಮರ್ಥ್ಯ ಮತ್ತು ಪ್ರೇರಣಾ ಕೌಶಲ್ಯ ಹಾಗೂ ತಾರ್ಕಿಕ ಯೋಚನಾ ಸಾಮರ್ಥ್ಯಗಳ ಬಗೆ, ನಿರ್ಧರಿಸುತ್ತದೆ.
- ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ಗಳ ನೇಮಕಾತಿ (ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ) (ತಿದ್ದುಪಡಿ) ನಿಯಮಗಳು 2019ರಂತೆ ಆಯೋಗವು ಗ್ರೂಪ್ ಎ & ಬಿ ಸೇವೆಗಳ ಖಾಲಿ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ 1:30 ಅನುಪಾತದಲ್ಲಿ, ಅಭ್ಯರ್ಥಿಗಳನ್ನು ವ್ಯಕ್ತಿತ್ವ ಪರೀಕ್ಷೆಗೆ ಕರೆಯಲಾಗುತ್ತದೆ ಆಯೋಗವು, ಅಭ್ಯರ್ಥಿಗಳು ಮುಖ್ಯಪರೀಕ್ಷೆಯಲ್ಲಿ ಪಡೆದ ಒಟ್ಟು ಅಂಕಗಳ ಜೇಷ್ಠತೆ (merit) ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿಯನ್ವಯ ಲಭ್ಯವಿರುವ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ , ಇತರೆ ಹಿಂದುಳಿದ ವರ್ಗಗಳಿಗೆ ಮೀಸಲಿರಿಸಿದ ರಿಕ್ತ ಸ್ಥಾನಗಳಿಗನುಗುಣವಾಗಿ ಅಭ್ಯರ್ಥಿಗಳನ್ನು ವ್ಯಕ್ತಿತ್ವ ಪರೀಕ್ಷೆಗೆ ಕರೆಯಲಾಗುತ್ತದೆ .ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ಗಳ ನೇಮಕಾತಿ (ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ) (ತಿದ್ದುಪಡಿ) ನಿಯಮಗಳು 2022, ಅಧಿಸೂಚನೆ ಸಂಖ್ಯೆ:ಡಿಪಿಎಆರ್ 20 ಎಸ್ಎಸ್ ಸಿ 2022, ದಿನಾಂಕ: 12-04-2022 ರಂತೆ ವ್ಯಕ್ತಿತ್ವ ಪರೀಕ್ಷೆಯು ಸಹ, 25 ಅಂಕಗಳನ್ನು ಒಳಗೊಂಡಿರುತ್ತದೆ.
ಪ್ರಮುಖ ಸೂಚನೆಗಳು:-
ಈ ಕೆಳಕಂಡ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಕಡ್ಡಾಯವಾಗಿ ಪಡೆದಿಟ್ಟುಕೊಂಡು ಅರ್ಜಿಯೊಂದಿಗೆ ಅಪ್ಲೋಡ್ ಮಾಡಬೇಕು ತಪ್ಪಿದಲ್ಲಿ ಅವರ ಮೀಸಲಾತಿ/ಅಭ್ಯರ್ಥಿತ್ವವನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಮೂಲ ದಾಖಲಾತಿ ಪರಿಶೀಲನೆ ಸಮಯದಲ್ಲಿ ಇದೇ ಪ್ರಮಾಣ ಪತ್ರಗಳ ಮೂಲ ಪ್ರತಗಳನ್ನು ಪರಿಶೀಲನೆಗೆ ಹಾಜರುಪಡಿಸತಕ್ಕದ್ದು
- ಹುದ್ದೆಗೆ ನಿಗದಿಪಡಿಸಲಾದ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಪಡೆದಿರುವ ಬಗ್ಗೆ ಪ್ರಮಾಣ ಪತ್ರಗಳು/ಎಲ್ಲಾ ವರ್ಷಗಳ ಅಂಕಪಟ್ಟಿಗಳು/ಪದವಿಯ ಘಟಿಕೋತ್ಸವ ಪ್ರಮಾಣ ಪತ್ರ.
- ಜನ್ಮ ದಿನಾಂಕವನ್ನು ನಮೂದಿಸಿರುವ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯ ಅಂಕಪಟ್ಟಿ/ ಎಸ್.ಎಸ್.ಎಲ್.ಸಿ ವರ್ಗಾವಣೆಣಯ ಪ್ರಮಾಣ ಪತ್ರ /ಜನ್ಮ ದಿನಾಂಕವನ್ನು ತೋರಿಸುವ ಸಂಚಿತ ದಾಖಲೆಯ ಉದ್ಧೃತ ಭಾಗ (Extract of cumulative record).
- ಸೈನಿಕ ಸೇವೆಯಿಂದ ಬಿಡುಗಡೆಯಾದ/ ಮುಕ್ತಿ ಹೊಂದಿದ ಬಗೆಗಿನ ಪ್ರಮಾಣ ಪತ್ರ (ಪೂರ್ಣವಾಗಿ) (Discharge certificate) ಮತ್ತು ಪೆನ್ಷನ್ ಪಡೆಯುತ್ತಿರುವ ದಾಖಲೆಯ ಪ್ರತಿ/ ಮಾಜಿ ಸೈನಿಕರ ಅವಲಂಬಿತರಾಗಿದ್ದಲ್ಲಿ, ಮಾಜಿ ಸೈನಿಕರು ಸೇವೆಯಲ್ಲಿರುವಾಗ ಯುದ್ಧ/ಯುದ್ಧದಂತಹ ಕಾರ್ಯಾಚರಣೆಯಲ್ಲಿ ಮಡಿದ ಅಥವಾ ಅಂಗವಿಕಲತೆ ಹೊಂದಿದ ಬಗ್ಗೆ ಪ್ರಮಾಣ ಪತ್ರ (Dependent certificate) (ಮಾಜಿ ಸೈನಿಕ ಮೀಸಲಾತಿ ಕೋರಿದ್ದಲ್ಲಿ).
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2ಎ, 2ಬಿ, 3ಎ, 3ಬಿ ಮೀಸಲಾತಿ ಅಭ್ಯರ್ಥಿಗಳು ನಮೂನೆ ಡಿ/ಇ/ಎಫ್ ನಲ್ಲಿ ತಹಶೀಲ್ದಾರ್ ರಿಂದ ಪಡೆದ ಪ್ರಮಾಣ ಪತ್ರ.(ಮೀಸಲಾತಿ ಕೋರಿದ್ದಲ್ಲಿ)
- ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು ಗ್ರಾಮೀಣ ಮೀಸಲಾತಿ ಪ್ರಮಾಣ ಪತ್ರ ನಮೂನೆ-1 ಮತ್ತು 2ರಲ್ಲಿ /ಇತರೆ ಅಭ್ಯರ್ಥಿಗಳು ನಮೂನೆ- 2ರಲ್ಲಿ (ಮೀಸಲಾತಿ ಕೋರಿದ್ದಲ್ಲಿ)
- ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ)
- ಅಂಗವಿಕಲ ಮೀಸಲಾತಿ ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ) ಅನುಬಂಧ 2, 3 & 4
- ಹೈದರಾಬಾದ್-ಕರ್ನಾಟಕ ಪ್ರದೇಶದ ಸ್ಥಳೀಯ ಮೀಸಲಾತಿ ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ)
- ತೃತೀಯ ಲಿಂಗದ ಅಭ್ಯರ್ಥಿಗಳ ಮೀಸಲಾತಿ ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ)
- ಫೋಟೋ ಮತ್ತು ಸಹಿಯನ್ನು /ದಾಖಲೆಗಳನ್ನು ಅಪ್ಲೋಡ್ ಮಾಡದೆ ಇರುವುದು, ಅಪೂರ್ಣವಾಗಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿದರೂ ಹಾಗೂ ಶುಲ್ಕ ಸಂದಾಯ ಮಾಡದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
- ಅಭ್ಯರ್ಥಿಗಳು ತಮ್ಮ ಮಾಹಿತಿಗಾಗಿ ಭರ್ತಿ ಮಾಡಿದ ಸಲ್ಲಿಸಿದ ಅರ್ಜಿಯ ಒಂದು ಫೋಟೋ ಪ್ರತಿಯನ್ನು ಕಡ್ಡಾಯವಾಗಿ ತಮ್ಮೊಂದಿಗೆ ಇಟ್ಟುಕೊಳ್ಳಬೇಕು.
- ಸದರಿ ನೇಮಕಾತಿ ಸಂಬಂಧ ನಿಗದಿಪಡಿಸಿದ ವಯೋಮಿತಿ, ವಿದ್ಯಾರ್ಹತೆ, ಮೀಸಲಾತಿ ಇತ್ಯಾದಿಗಳಿಗೆಗುಣವಾಗಿ ಅರ್ಜಿಯಲ್ಲಿ ಸರಿಯಾದ ಮಾಹಿತಿ ನೀಡುವುದು ಅಭ್ಯರ್ಥಿಗಳ ಜವಾಬ್ದಾರಿಯಾಗಿರುತ್ತದೆ. ತಪ್ಪು ಮಾಹಿತಿ ನೀಡಿದರೆ ಅಂತಹ ಅಭ್ಯರ್ಥಿಗಳನ್ನು ಆಯೋಗವು ನಡೆಸುವ ಯಾವುದೇ ನೇಮಕಾತಿ/ಪರೀಕ್ಷೆಗಳಿಂದ 03 ವರ್ಷಕ್ಕೆ ಡಿಬಾರ್ ಮಾಡಲಾಗುವುದು. ಆದುದರಿಂದ, ಅರ್ಜಿ ಸಲ್ಲಿಸುವ ಮುನ್ನ ಅವರು ನೀಡಿರುವ ಎಲ್ಲಾ ಮಾಹಿತಿಯು ಸರಿಯಾಗಿದೆ ಎಂದು ಖಚಿತಪಡಿಸಿಕೊಂಡು ದೃಢೀಕರಣ ನೀಡುವಾಗ ಎಚ್ಚರವಹಿಸಬೇಕು.
ಉದ್ಯೋಗದ ಸ್ಥಳ:-
- ಕರ್ನಾಟಕದಾದ್ಯಂತ
ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಅರ್ಜಿ ಶುಲ್ಕ:-
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ:-600/-
- ಹಿಂದುಳಿದ ವರ್ಗಗಳು (2A, 2B, 3A, 3B):- 300/-
- ಮಾಜಿ ಸೈನಿಕರಿಗೆ :- 50/-
- ಪ್ರವರ್ಗ-1/Sc /St/ಅಂಗವಿಕಲರಿಗೆ:- ಶುಲ್ಕ ವಿನಾಯಿತಿ ಇರುತ್ತದೆ.
ಆನಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-
- 10 ನೇ ತರಗತಿ ಅಂಕಪಟ್ಟಿ
- ಆಧಾರ ಕಾರ್ಡ
- ಪದವಿಯ ಎಲ್ಲ ಸೆಮಿಸ್ಟರನ ಅಂಕಪಟ್ಟಿಗಳು & ಪಾಸಿಂಗ/ಘಟಿಕೋತ್ಸವ ಪ್ರಮಾಣ ಪತ್ರಗಳು
- ಜಾತಿ ಪ್ರಮಾಣ ಪತ್ರ
- ಮೀಸಲಾತಿ ಪ್ರಮಾಣ ಪತ್ರಗಳು (ಕನ್ನಡ/ಗ್ರಾಮೀಣ/ಮುಳುಗಡೆ/ಇತರೆ)
- ಮೊಬೈಲ್ ಸಂಖ್ಯೆ & ಇ–ಮೇಲ್ ಐಡಿ
- ಇತ್ತೀಚಿನ ಭಾವಚಿತ್ರ & ಕಪ್ಪು ಬಣ್ಣದ ಸಹಿ
ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ ಮಾಡಿhttps://kpsconline.karnataka.gov.in/Common/Before_Login_File_Download_View?file_path=/Documents/KPSC_Documents/KPSC_Published_Notification_Documents/32_202607311823321999_a9c127d9-c894-4b95-b07c-9243867505c6_KPSC_Notification.pdf
ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ ಮಾಡಿhttps://kpsconline.karnataka.gov.in/Login/Login


