ಕರ್ನಾಟಕ ರಾಜ್ಯ ಸರ್ಕಾರವು ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು, ಕಾರ್ಮಿಕ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ಇಲಾಖೆಯ ಉಳಿಕೆ ಮೂಲ ವೃಂದದಲ್ಲಿ (Residual Parent Cadre) ಖಾಲಿ ಇರುವ ಗ್ರೂಪ್-ಸಿ ವೃಂದದ ಒಟ್ಟು 188 ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಆನಲೈನ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.
ಹುದ್ದೆಗಳ ವಿವರ:-
- ಒಟ್ಟು ಹುದ್ದೆಗಳು:-188
- ಹುದ್ದೆಯ ಹೆಸರು:- 1. ಫಾರ್ಮಸಿ ಆಫೀಸರ್-98, & 2. ನರ್ಸಿಂಗ್ ಆಫೀಸರ್ (ಶುಶ್ರೂಷಾಧಿಕಾರಿ):- 90
ವೇತನ ಶ್ರೇಣಿ:-
- ನರ್ಸಿಂಗ್ ಆಫೀಸರ್(ಶುಶ್ರೂಷಾಧಿಕಾರಿ):- ರೂ. 54175-1375-58300-1500-64300-1650-74200-1900-85600-2300-99400 ಮತ್ತು ಅನ್ವಯವಾಗುವ ಭತ್ಯೆಗಳು
- ಫಾರ್ಮಸಿ ಆಫೀಸರ್: ರೂ. 44425-1125-47800-1250-52800-1375-58300-1500-64300-1650-74200-1900-83700. ಮತ್ತು ಅನ್ವಯವಾಗುವ ಭತ್ಯೆಗಳು
ಶೈಕ್ಷಣಿಕ ವಿದ್ಯಾರ್ಹತೆ:-
ಫಾರ್ಮಸಿ ಆಫೀಸರ್ :-
- Must possess Diploma in Pharmacy from an Institution recognized by the Government of Karnataka.
- Must have registered with Karnataka Pharmacy Council.
ನರ್ಸಿಂಗ್ ಆಫೀಸರ್ (ಶುಶ್ರೂಷಾಧಿಕಾರಿ) :-
- Must possess a Diploma in General Nursing issued by an authority authorized by the Government of Karnataka.
- Must have registered in the Karnataka Nursing Council.
ವಿಶೇಷ ಸೂಚನೆ:-
- ಮೇಲೆ ನಮೂದಿಸಿದಂತೆ ವಿದ್ಯಾರ್ಹತೆಯನ್ನು ಹೊಂದಿಲ್ಲದ ಅಭ್ಯರ್ಥಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರೆ, ನಂತರ ಪ್ರಾಧಿಕಾರಕ್ಕೆ ಅಥವಾ ನೇಮಕಾತಿ ಸಮಿತಿಗೆ ವಿದ್ಯಾರ್ಹತೆ ಹೊಂದಿರುವುದಿಲ್ಲವೆಂದು ಪತ್ತೆಯಾದಲ್ಲಿ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಯಾವುದೇ ಹಂತದಲ್ಲಾದರೂ ಹಾಗೂ ಅಭ್ಯರ್ಥಿಗಳಿಗೆ ಯಾವುದೇ ಮುನ್ಸೂಚನೆ ನೀಡದೆ ರದ್ದುಪಡಿಸಲಾಗುತ್ತದೆ.
- ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ನಿಗದಿತ ವಿದ್ಯಾರ್ಹತೆ ಪಡೆಯಲು ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುವುದಿಲ್ಲ, ಸದರಿ ಹುದ್ದೆಗಳಿಗೆ ನಿಗಧಿಪಡಿಸಿದ ವಿದ್ಯಾರ್ಹತೆಯನ್ನು ಹೊರತುಪಡಿಸಿ ಬೇರೆ ಯಾವ ವಿದ್ಯಾರ್ಹತೆಯನ್ನೂ ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದೊಳಗೆ ಎಲ್ಲಾ ಅಭ್ಯರ್ಥಿಗಳು ಪರೀಕ್ಷೆಯ ಅಂಕಪಟ್ಟಿ/ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ಹೊಂದಿರಬೇಕು.
- ವಿದ್ಯಾರ್ಹತೆಗೆ ಸಂಬಂಧಿಸಿದ ಅಂಕಪಟ್ಟಿ/ಪ್ರಮಾಣ ಪತ್ರಗಳ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಮೂಲ ದಾಖಲೆಗಳ ಪರಿಶೀಲನೆಯ ಸಮಯದಲ್ಲಿ ನೇಮಕಾತಿ/ಆಯ್ಕೆ ಪ್ರಾಧಿಕಾರದ ಮುಂದೆ ಹಾಜರುಪಡಿಸಬೇಕು. ಒಂದು ವೇಳೆ ಹಾಜರುಪಡಿಸಲು ವಿಫಲರಾದಲ್ಲಿ, ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ರದ್ದುಪಡಿಸಲಾಗುತ್ತದೆ.
ಸೂಚನೆ: ಮೇಲ್ಕಂಡ ಹುದ್ದೆಗೆ ನಿಗದಿಪಡಿಸಿರುವ ವಿದ್ಯಾರ್ಹತೆ ಹೊರತುಪಡಿಸಿ, ಇತರೆ ವಿದ್ಯಾರ್ಹತೆಯಲ್ಲಿ ಅರ್ಜಿ ಸಲ್ಲಿಸಿ ಮುಂದಿನ ಪ್ರಕ್ರಿಯೆಯಲ್ಲಿ ಅನರ್ಹಗೊಂಡಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜವಾಬ್ದಾರಿಯಾಗಿರುವುದಿಲ್ಲ.
ವಯೋಮಿತಿ:-
ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977 ರಲ್ಲಿ ನಿರ್ದಿಷ್ಟಪಡಿಸಿದಂತೆ ಆನಲೈನ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ನಿಗಧಿಪಡಿಸಿದ ಕೋನೆಯ ದಿನಾಂಕದಂದು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 262 ಸೇನೆನಿ 2025 ದಿನಾಂಕ:29.01.2026 ರಲ್ಲಿ ಆದೇಸಿರುವಂತೆ ಒಂದು ಬಾರಿಗೆ ಅನ್ವಯವಾಗಿವಂತೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಿದ ಪ್ರಯುಕ್ತ, ಅದನ್ನು ವಯೋಮಿತಿಯಲ್ಲಿ ಪರಿಗಣಿಸಿದ ನಂತರ ಅಭ್ಯರ್ಥಿಗಳು ಈ ಕೆಳಗೆ ತೋರಿಸಿರುವಂತೆ ಗರಿಷ್ಠ ಮಯೋಮಿತಿಯನ್ನು ಮೀರಿರಬಾರದು.
- ಸಾಮಾನ್ಯ ಅಭ್ಯರ್ಥಿಗಳು-18 ರಿಂದ 40 ವರ್ಷಗಳು
- ಪ್ರವರ್ಗ 2ಎ,2ಬಿ,3ಎ,3ಬಿ- 18 ರಿಂದ 43 ವರ್ಷಗಳು
- ಎಸ್.ಸ್ಸಿ/ಎಸ್.ಟಿ/ ಪ್ರವರ್ಗ-18 ರಿಂದ 45 ವರ್ಷಗಳು
ಮುಂದುವರೆದು, ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977 ರಲ್ಲಿ ನಿರ್ದಿಷ್ಟಪಡಿಸಿರುವಂತೆ ಈ ಕೆಳಗಿನ ಸಂದರ್ಭದಲ್ಲಿ ಸದರಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಕೆಳಗಿನ ಕೋಷ್ಟಕದಲ್ಲಿ ತೋರಿಸಿರುವ ಮಟ್ಟಿಗೆ ಹೆಚ್ಚಿಸಲಾಗುತ್ತದೆ.
| ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಅಥವಾ ಸ್ಥಳೀಯ ಪ್ರಾಧಿಕಾರದಲ್ಲಿ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಯಾದ ಮತ್ತು ಕರ್ನಾಟಕ ರಾಜ್ಯ ಸರ್ಕಾರದ ಸ್ವಾಮ್ಯ ಅಥವಾ ನಿಯಂತ್ರಣದಲ್ಲಿರುವ ನಿಗಮದಲ್ಲಿ ಹುದ್ದೆ ಹೊಂದಿರುವ ಅಥವಾ ಹಿಂದೆ ಹೊಂದಿದ ಅಭ್ಯರ್ಥಿಗಳಿಗೆ | ಸೇವೆ ಸಲ್ಲಿಸಿರುವಷ್ಟು ವರ್ಷಗಳು ಅಥವಾ 10 ವರ್ಷಗಳ ಅವಧಿ ಅದರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳು |
| ಮಾಜಿ ಸೈನಿಕರಾಗಿದ್ದಲ್ಲಿ | ಮಾಜಿ ಸೈನಿಕ ಅಭ್ಯರ್ಥಿಯು ಸೈನ್ಯ ಯೋಜನೆ, ಸೇವೆಯಿಂದ ತೆಗೆದು ಹಾಕಿದ ಹಾಗೂ ಸೇವಾ ನಿವೃತ್ತಿಯಿಂದ ಬಿಡುಗಡೆಯಾದ ಮಾಜಿ ಯೋಧರಾಗಿದ್ದಲ್ಲಿ “ಅವರು ಸೇವೆ ಸಲ್ಲಿಸಿದ ಅವಧಿ”ಯ ಜೊತೆಗೆ ಹೆಚ್ಚುವರಿ 03 ವರ್ಷಗಳ ರಿಯಾಯಿತಿಯನ್ನು ನೀಡಲಾಗುವುದು. “ಮಾಜಿ ಯೋಧ” ಎಂಬ ಶಬ್ದವು ಚಾಲನೆಯಲ್ಲಿರುವ ಸಂಬಂಧಿಸಿದ ನಿಯಮಾವಳಿಗಳಲ್ಲಿನ ಪರಿಭಾಷೆಯ ಅರ್ಥ ಹೊಂದಿದೆ |
| National Cadet Corps ನಲ್ಲಿ ಪೂರ್ಣಕಾಲಿಕ ಪರಿವೀಕ್ಷಕರಾಗಿ ಸೇವೆ ಸಲ್ಲಿಸಿ ಬಿಡುಗಡೆಯಾಗಿರುವ ವ್ಯಕ್ತಿಗಳಿಗೆ | ಕೆಡೆಟ್ ಪರಿವೀಕ್ಷಕರಾಗಿ ಸೇವೆ ಸಲ್ಲಿಸಿದಷ್ಟು ವರ್ಷಗಳು |
| ರಾಜ್ಯ ಸರ್ಕಾರದಿಂದ ಪುರಸ್ಕೃತವಾದ ಗ್ರಾಮೀಣ ಜೈದ್ಮೀಕರಣ ಯೋಜನೆಯ ಮೇರೆಗೆ ನೇಮಗೊಂಡು ಗ್ರಾಮ ಸಮೂಹ ಪರಿವೀಕ್ಷಕರಾಗಿ ಈಗ ಕೆಲಸ ಮಾಡುತ್ತಿದ್ದರೆ ಅಥವಾ ಹಿಂದೆ ಇದ್ದ ಅಭ್ಯರ್ಥಿಗಳಿಗೆ | ಗ್ರಾಮ ಸಮೂಹ ಪರಿವೀಕ್ಷಕರಾಗಿ ಸೇವೆ ಸಲ್ಲಿಸಿದಷ್ಟು ವರ್ಷಗಳು |
| ವಿಶೇಷಚೇತನ ಅಭ್ಯರ್ಥಿಗಳಿಗೆ | 10 ವರ್ಷಗಳು |
| ಕರ್ನಾಟಕ ರಾಜ್ಯದಲ್ಲಿರುವ ಭಾರತ ಸರ್ಕಾರದ ಜನಗಣತಿ ಸಂಸ್ದೆಯಲ್ಲಿ ಈಗ ಹುದ್ದೆಯನ್ನು ಹೊಂದಿದ್ದರೆ ಅಥವಾ ಹಿಂದೆ ಹೊಂದಿದ ಅಭ್ಯರ್ಥಿಗಳಿಗೆ | ಸೇವೆ ಸಲ್ಲಿಸಿರುವ ವರ್ಷಗಳು ಅಥವಾ 5 ವರ್ಷಗಳ ಅವಧಿ ಅದರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳು. |
| ವಿಧವೆಯಾಗಿದ್ದಲ್ಲಿ (ಅಭ್ಯರ್ಥಿಯು ಸಕ್ಷಮ ಪ್ರಾಧಿಕಾರದಿಂದ ನಾನು ವಿಧವೆಯೆಂದು ಹಾಗೂ ಮರು ಮದುವೆಯಾಗಿರುವುದಿಲ್ಲವೆಂಬ ಪ್ರಮಾಣ ಪತ್ರವನ್ನು ಪಡೆದಿಟ್ಟುಕೊಂಡು ಸಕ್ಷಮ ಪ್ರಾಧಿಕಾರ ಸೂಚಿಸಿದಾಗ ಅದರ ಮೂಲ ಪ್ರತಿಯನ್ನು ಪರಿಶೀಲನೆಗೆ ಹಾಜರುಪಡಿಸಬೇಕು) | 10 ವರ್ಷಗಳು |
| ಜೀತ ಕಾರ್ಮಿಕರಾಗಿದ್ದ ಪಕ್ಷದಲ್ಲಿ ಸದರಿ ಅಧಿನಿಯಮ ಅಥವಾ 1957 ರ ಕರ್ನಾಟಕ ಜೀತ ಕಾರ್ಮಿಕ ಪದ್ಧತಿ (ರದ್ದಿಯಾತಿ) ಆದೇಶದ ಮೇರೆಗೆ ಜೀತ ಸಾಲವನ್ನು ಸಂದಾಯ ಮಾಡುವ ಹೊಣೆಯಿಂದ ಬಿಡುಗಡೆಯಾಗಿದ್ದಾರೆಂದು ಪ್ರಮಾಣ ಪತ್ರವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ರಿಂದ ಪಡೆದಿಟ್ಟುಕೊಂಡು, ಸೂಚಿಸಿದಾಗ ಅದರ ಮೂಲ ಪ್ರತಿಯನ್ನು ಪರಿಶೀಲನೆಗೆ ಹಾಜರುಪಡಿಸಬೇಕು. | 10 ವರ್ಷಗಳು |
ಉದ್ಯೋಗದ ಸ್ಥಳ:- ಕರ್ನಾಟಕ
ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಅರ್ಜಿ ಶುಲ್ಕ:-
- ಸಾಮಾನ್ಯ ವರ್ಗ & ಇತರೆ ಹಿಂದುಳಿದ ವರ್ಗಗಳು (2A, 2B, 3A, 3B):- 750/-
- ಪ್ರವರ್ಗ-1/Sc /St/Ex-Army/ತೃತೀಯ ಲಿಂಗಿಗಳಿಗೆ:- 500/-
- ವಿಶೇಷ ಚೇತನ ಅಭ್ಯರ್ಥಿಗಳಿಗೆ:- 250/-
ಪ್ರಮುಖ ದಿನಾಂಕಗಳು:-
- ಅಧಿಸೂಚನೆ ಬಿಡುಗಡೆ ಮಾಡಿದ ದಿನಾಂಕ: 07 ಅಗಸ್ಟ್ 2026
- ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭಿಸಿದ ದಿನಾಂಕ: 07 ಅಗಸ್ಟ್ 2026
- ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಅಗಸ್ಟ್ 2026
- ಆನ್ಲೈನ್ ಮುಖಾಂತರ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 31 ಅಗಸ್ಟ್ 2026
ಖಾಯಂಪೂರ್ವ ಅವಧಿ:-
- ನೇರ ನೇಮಕಾತಿ ಮೂಲಕ ಆಯ್ಕೆಗೊಂಡ ಅಭ್ಯರ್ಥಿಗಳು ಸೇವೆಗೆ ಸೇರಿದ ದಿನಾಂಕದಿಂದ ಎರಡು ವರ್ಷಗಳ ಕಾಲ ಖಾಯಂಪೂರ್ವ ಅವಧಿಯಲ್ಲಿರುತ್ತಾರೆ.
ಪಿಂಚಣಿ ಸೌಲಭ್ಯ:-
- ಕಾರ್ಮಿಕ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ಇಲಾಖೆಯ ನರ್ಸಿಂಗ್ ಆಫೀಸರ್ (ಶುಶ್ರೂಷಾಧಿಕಾರಿ) ಮತ್ತು ಫಾರ್ಮಸಿ ಆಫೀಸರ್ ಹುದ್ದೆಗಳಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್.ಪಿ.ಎಸ್). ಅನ್ವಯವಾಗುತ್ತದೆ.
ಲಿಖಿತ ಪರೀಕ್ಷಾ ವಿಧಾನ:-
- ಸದರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆನ್ಲೈನ್ (CBT) ಅಥವಾ ಆಫ್ಲೈನ್-ಓಎಂಆರ್ ಮಾದರಿ (Offline-OMR type) ಯಲ್ಲಿ ನಡೆಸಲಾಗುತ್ತದೆ.
- ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗುವ ಪರೀಕ್ಷಾ ಕೇಂದ್ರದ ವಿವರಗಳನ್ನು ನಂತರದಲ್ಲಿ ತಿಳಿಸುವರು. (ಪರೀಕ್ಷಾ ಕೇಂದ್ರವನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲು ಅವಕಾಶ ನೀಡಲಾಗುವುದಿಲ್ಲ).
ಪ್ರಶ್ನೆಪತ್ರಿಕೆ & ಪಠ್ಯಕ್ರಮ:-
- ಲಿಖಿತ ಪರೀಕ್ಷೆಯು ಪತ್ರಿಕೆ-1 & ಪತ್ರಿಕೆ-2 ನ್ನು ಒಳಗೊಂಡಿದ್ದು, ಪತ್ರಿಕೆ-1 ಸಾಮಾನ್ಯ ಜ್ಞಾನ ಇದ್ದು, ಸದರಿ ಪತ್ರಿಕೆಯು 100 ಪ್ರಶ್ನೆ & 100 ಅಂಕಗಳನ್ನು ಒಳಗೊಂಡಿದ್ದು, ಸದರಿ ಪ್ರಶ್ನೆಗಳಿಗೆ 2 ಗಂಟೆಯ ಅವಧಿಯೊಳಗೆ ಉತ್ತರಗಳನ್ನು ನೀಡಬೇಕಾಗುತ್ತದೆ.
- ಪತ್ರಿಕೆ-2 ನಿರ್ದಿಷ್ಟ ಪತ್ರಿಕೆಯಾಗಿದ್ದು, ಸದರಿ ಪತ್ರಿಕೆಯು 100 ಪ್ರಶ್ನೆ & 100 ಅಂಕಗಳನ್ನು ಒಳಗೊಂಡಿದ್ದು, ಸದರಿ ಪ್ರಶ್ನೆಗಳಿಗೆ 2 ಗಂಟೆಯ ಅವಧಿಯೊಳಗೆ ಉತ್ತರಗಳನ್ನು ನೀಡತಕ್ಕದ್ದು.
ವಿಶೇಷ ಸೂಚನೆ:- ಸ್ಫರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಯು ಕನಿಷ್ಠ ಶೇ.35 ರಷ್ಟು ಅಂಕಗಳನ್ನು ಪಡೆಯುವುದು ಕಡ್ಡಾಯವಾಗಿದ್ದು, ಕನಿಷ್ಠ ಅಂಕಗಳನ್ನು ಪಡೆಯದ ಅಭ್ಯರ್ಥಿಗಳು ಆಯ್ಕೆ ಪ್ರಕ್ಯಿಯೆಗೆ ಅನರ್ಹರಾಗುತ್ತಾರೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಹೊಂದಿರಬೇಕಾದ ಅರ್ಹತಾ ಷರತ್ತುಗಳು:-
- ಅಭ್ಯರ್ಥಿಯು ಭಾರತೀಯ ನಾಗರಿಕನಾಗಿರಬೇಕು.
- ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿ ಮತ್ತು ಈಗಾಗಲೇ ಇನ್ನೊಬ್ಬ ಹೆಂಡತಿ ಇರುವ ವ್ಯಕ್ತಿಯನ್ನು ಮದುವೆಯಾಗಿರುವ ಮಹಿಳಾ ಅಭ್ಯರ್ಥಿಯು ಸರ್ಕಾರದಿಂದ ಪೂರ್ವ ಅನುಮತಿಯನ್ನು ಪಡೆಯದೆ ನೇಮಕಾತಿಗೆ ಅರ್ಹರಾಗುವುದಿಲ್ಲ.
- ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ನೇಮಕಾತಿಯ ಕರ್ತವ್ಯಗಳ ದಕ್ಷ ನಿರ್ವಹಣೆಗೆ ಅತಂಕವನ್ನುಂಟು ಮಾಡುವ ಸಂಭವ ಇರುವ ಯಾವುದೇ ದೈಹಿಕ ನ್ಯೂನತೆಯಿಂದ ಇರಬಾರದು.
- ದೈಹಿಕ ಅನರ್ಹರಾಗಿದ್ದಾರೆಂಬುದಾಗಿ ವೈದ್ಯಕೀಯ ಮಂಡಳಿಯ ವರದಿಯ ಮೇಲೆ ಅನರ್ಹರೆಂದುದಾಗಿ ತಿರಸ್ಕರಿಸುವ ಪೂರ್ಣ ವಿವೇಚನೆಯನ್ನು ರಾಜ್ಯ ಸರ್ಕಾರವು ಕಾಯ್ದಿರಿಸಿಕೊಂಡಿರುತ್ತದೆ ಮತ್ತು ರಾಜ್ಯ ಸರ್ಕಾರದ ವಿವೇಚನೆಯು ಯಾವುದೇ ವಿಧದಲ್ಲೂ ಈ ನಿಯಮಗಳ ಮೂಲಕ ಸೀಮಿತವಾಗಿರುವುದಿಲ್ಲ.
- ಕೇಂದ್ರ ಅಥವಾ ಕರ್ನಾಟಕ ರಾಜ್ಯ ಅಥವಾ ಇತರೆ ರಾಜ್ಯದ ಲೋಕಸೇವಾ ಆಯೋಗ ಅಥವಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಥವಾ ಯಾವುದೇ ವಿಶ್ವವಿದ್ಯಾನಿಲಯಗಳಿಂದ ನಡೆಸಲಾಗುವ ಪರೀಕ್ಷೆಗಳಿಂದ ಅಥವಾ ನೇಮಕಾತಿಗಳಿಂದ ಕಾಯಂ ಆಗಿ ಡಿಬಾರ್ ಆದ ವ್ಯಕ್ತಿಗಳು ನೇಮಕಾತಿಗೆ ಅರ್ಹರಾಗಿರುವುದಿಲ್ಲ.
- ಯಾವುದೇ ನೈತಿಕ ಪರಿಭಾಷೆಗೆ ಶಿಕ್ಷೆಗೆ ಒಳಪಟ್ಟ ವ್ಯಕ್ತಿ ಅಥವಾ ಕೇಂದ್ರ ಅಥವಾ ಕರ್ನಾಟಕ ರಾಜ್ಯ ಅಥವಾ ಇತರೆ ರಾಜ್ಯದ ಲೋಕಸೇವಾ ಆಯೋಗ ಅಥವಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಥವಾ ಯಾವುದೇ ವಿಶ್ವವಿದ್ಯಾನಿಲಯಗಳಿಂದ ನಡೆಸಲಾಗುವ ಪರೀಕ್ಷೆಗಳಿಂದ ಅಥವಾ ನೇಮಕಾತಿಗಳಿಂದ ತಾತ್ಕಾಲಿಕವಾಗಿ ಡಿಬಾರ್ ಆದ ಅಥವಾ ಅನರ್ಹಗೊಂಡ ವ್ಯಕ್ತಿಯು ಸರ್ಕಾರವು ಎಲ್ಲಾ ಸಂದರ್ಭಗಳನ್ನು ಮರುಪರಿಶೀಲಿಸಿ ಅವರು ನೇಮಕಾತಿಗೆ ಅರ್ಹರೆಂದು ಪರಿಗಣಿಸುವವರೆಗೂ ನೇಮಕಾತಿಗೆ ಅರ್ಹರಾಗಿರುವುದಿಲ್ಲ.
- ನಿಗದಿತ ಶೈಕ್ಷಣಿಕ ಅರ್ಹತೆಯ ಜೊತೆಗೆ ಈ ಮೇಲ್ಕಂಡ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತಾರೆ.
ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ:-
- ಅಭ್ಯರ್ಥಿಯು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಥವಾ ರಾಜ್ಯ ಸರ್ಕಾರವು ಅದರ ಸಮಾನವೆಂದು ಘೋಷಿಸಿದ ಯಾವುದೇ ಪರೀಕ್ಷೆಯಲ್ಲಿ ಅಥವಾ ಎಸ್.ಎಸ್.ಎಲ್.ಸಿ.ಗಿಂತ ಉನ್ನತ ಮಟ್ಟದ ಪರೀಕ್ಷೆಗಳಲ್ಲಿ ಕನ್ನಡ ವಿಷಯವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಅಭ್ಯಾಸ ಮಾಡಿರುವ ಅಭ್ಯರ್ಥಿಗಳು ಇಂತಹ ಪರೀಕ್ಷೆಗಳನ್ನು ಪಾಸು ಮಾಡಿದ್ದರೆ ಅಥವಾ KPSC/KEA ಈ ಹಿಂದೆ ನಡೆಸಿದ ಕನ್ನಡ ಭಾಷೆಯ ಪರೀಕ್ಷೆಯಲ್ಲಿ (ಕಡ್ಡಾಯ ಕನ್ನಡ ಪರೀಕ್ಷೆ) ಉತ್ತೀರ್ಣರಾಗಿದ್ದರೆ, ಅಂತಹ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯಿಂದ ವಿನಾಯಿತಿ ಹೊಂದುತ್ತಾರೆ.
- ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯು ಬಹು ಆಯ್ಕೆ ಮಾದರಿ ಪರೀಕ್ಷೆಯಾಗಿದ್ದು, ಗರಿಷ್ಠ 150 ಅಂಕಗಳನ್ನು ಒಳಗೊಂಡಿರುತ್ತದೆ ಮತ್ತು ಅಭ್ಯರ್ಥಿಗಳು ಇದರಲ್ಲಿ ಕನಿಷ್ಠ 50 ಅಂಕಗಳನ್ನು ಪಡೆದು ಪಾಸಾಗುವುದು ಕಡ್ಡಾಯ, ಸದರಿ ಪರೀಕ್ಷೆಗೆ ಗೈರು ಹಾಜರಾದ ಅಥವಾ ಕನಿಷ್ಠ 50 ಅಂಕಗಳನ್ನು ಗಳಿಸದ ಅಭ್ಯರ್ಥಿಗಳು ಆಯ್ಕೆ ಪ್ರಕ್ರಿಯೆಗೆ ಅನರ್ಹರಾಗುವರು.
ಋಣಾತ್ಮಕ ಮೌಲ್ಯಮಾಪನ (Negative Valuation):-
- ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆಪತ್ರಿಕೆಯು ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿದ್ದು, ಪ್ರಶ್ನೆ ಪತ್ರಿಕೆಗಳಲ್ಲಿನ ಪ್ರತಿಯೊಂದು ಪ್ರಶ್ನೆಗೂ 04 ಪರ್ಯಾಯ ಉತ್ತರಗಳಿದ್ದು, ಅಭ್ಯರ್ಥಿಯು ಯಾವುದಾದರೂ ಒಂದು ಸರಿ ಉತ್ತರವನ್ನು ಮಾತ್ರ ಆಯ್ಕೆ ಮಾಡಬೇಕು. ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶದಷ್ಟು 25 ಅಂಕಗಳನ್ನು ಕಳೆಯಲಾಗುತ್ತದೆ.
- ಒ.ಎಂ.ಆರ್ ಉತ್ತರ ಪತ್ರಿಕೆಯಲ್ಲಿ 5ನೇ ಆಯ್ಕೆ/ವೃತ್ತವನ್ನು ನೀಡಿದ್ದು, ಉತ್ತರಿಸದೇ ಇರುವ ಪ್ರಶ್ನೆಗಳಿಗೆ 5ನೇ ಆಯ್ಕೆ/ವೃತ್ತವನ್ನು ಶೇಡ ಮಾಡಲು ಕೋನೆಯ ಬೆಲ ಆದ ನಂತರ ಹೆಚ್ಚುವರಿ 5 ನಿಮಿಷಗಳನ್ನು ನೀಡುತ್ತಾರೆ, ಯಾವುದೇ ಆಯ್ಕೆಯನ್ನು / ಉತ್ತರವನ್ನು ಶೇಡ್ ಮಾಡಿಲ್ಲದಿದ್ದರೆ, ಪ್ರತಿ ಪ್ರಶ್ನೆಗೆ 25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.
ಆನಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-
- 10 ನೇ ತರಗತಿ ಅಂಕಪಟ್ಟಿ
- ಹುದ್ದೆಗೆ ಸಂಭಂದಪಟ್ಟ ದಾಖಲಾತಿಗಳು
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ
- ಮೀಸಲಾತಿ ಪ್ರಮಾಣ ಪತ್ರಗಳು (ಕನ್ನಡ/ಗ್ರಾಮೀಣ/ಮುಳುಗಡೆ/ಇತರೆ)
- ಮೊಬೈಲ್ ಸಂಖ್ಯೆ & ಇ–ಮೇಲ್ ಐಡಿ
- ಇತ್ತೀಚಿನ ಭಾವಚಿತ್ರ & ಕಪ್ಪು ಬಣ್ಣದ ಸಹಿ ಪ್ರಶ್ನೆ
ನರ್ಸಿಂಗ್ ಆಫೀಸರ್(ಶುಶ್ರೂಷಾಧಿಕಾರಿ) & ಫಾರ್ಮಸಿ ಆಫೀಸರ್ ಹುದ್ದೆಗಳ ಅಧಿಸೂಚನೆಯನ್ನು ಒದಲು ಇಲ್ಲಿ ಕ್ಲಿಕ ಮಾಡಿ :- https://cetonline.karnataka.gov.in/keawebentry456/nurrpc2026/NUR_REC_1_RPC_07082026kannada.pdf
ಆನಲೈನ ಮುಖಾಂತರ ನರ್ಸಿಂಗ್ ಆಫೀಸರ್(ಶುಶ್ರೂಷಾಧಿಕಾರಿ) & ಫಾರ್ಮಸಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ ಮಾಡಿ.https://cetonline.karnataka.gov.in/RECT-app_nur_phar/login
ನರ್ಸಿಂಗ್ ಆಫೀಸರ್ (ಶುಶ್ರೂಷಾಧಿಕಾರಿ) & ಫಾರ್ಮಸಿ ಆಫೀಸರ್ ಹುದ್ದೆಗಳ ವರ್ಗೀಕರಣದ ಮಾಹಿತಿಗಾಗಿ ಇಲ್ಲಿ ಕ್ಲಿಕ ಮಾಡಿ https://cetonline.karnataka.gov.in/keawebentry456/nurrpc2026/NUR_REC_2_RPC_07082026kannada.pdf
ನರ್ಸಿಂಗ್ ಆಫೀಸರ್ (ಶುಶ್ರೂಷಾಧಿಕಾರಿ) ಹುದ್ದೆಯ ಪಠ್ಯಕ್ರಮದ ಮಾಹಿತಿಗಾಗಿ ಇಲ್ಲಿ ಕ್ಲಿಕ ಮಾಡಿhttps://cetonline.karnataka.gov.in/keawebentry456/nurrpc2026/NUR_REC_3_KK_RPC_NUR_SYB_07082026kannada.pdf
ಫಾರ್ಮಸಿ ಆಫೀಸರ್ ಹುದ್ದೆಯ ಪಠ್ಯಕ್ರಮದ ಮಾಹಿತಿಗಾಗಿ ಇಲ್ಲಿ ಕ್ಲಿಕ ಮಾಡಿhttps://cetonline.karnataka.gov.in/keawebentry456/nurrpc2026/NUR_REC_4_KK_RPC_PSY_SYB_07082026kannada.pdf
ಜಾತಿ ಪ್ರಮಾಣ ಪತ್ರಗಳ & ಮೀಸಲಾತಿ ಪ್ರಮಾಣ ಪತ್ರಗಳ ನಮೂನೆಗಳಿಗಾಗಿ ಇಲ್ಲಿ ಕ್ಲಿಕ ಮಾಡಿhttps://cetonline.karnataka.gov.in/keawebentry456/hortrpc2026/HORT_Certificate_formats_performakannada_05082026english.pdf



