ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ನೇಮಕಾತಿ-2026

ಶಿವಮೊಗ್ಗ ಪ್ರಧಾನ ಜಿಲ್ಲಾ & ಸತ್ರ ನ್ಯಾಯಾಲಯ  ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ  ಇರುವ  ಆದೇಶ ಜಾರಿಕಾರರು & ಜವಾನ  ಹುದ್ದೆಗಳಿಗೆ  ನೇರ ನೇಮಕಾತಿ ಮಾಡುವ ಸಲುವಾಗಿ ಆನಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.shivamogga.dist.court

ಹುದ್ದೆಗಳ ವಿವರ:-

  • ಒಟ್ಟು ಹುದ್ದೆಗಳು: 62
  • ಆದೇಶ ಜಾರಿಕಾರರು (Process Server): 06 ಹುದ್ದೆಗಳು
  • ಜವಾನ (Peon): 56 ಹುದ್ದೆಗಳು

ಉದ್ಯೋಗದ ಸ್ಥಳ:-

  • ಶಿವಮೊಗ್ಗ ಜಿಲ್ಲೆ & ಅದರ ಘಟಕ ನ್ಯಾಯಾಲಯಗಳಲ್ಲಿ

ವಿಧ್ಯಾರ್ಹತೆ:-

ಆದೇಶ ಜಾರಿಕಾರರು:

  • ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಕನ್ನಡ ಓದಲು ಹಾಗೂ ಬರೆಯಲು ತಿಳಿದಿರಬೇಕು.
  • ಚಾಲ್ತಿಯಲ್ಲಿರುವ ವಾಹನ ಚಾಲನಾ ಪರವಾನಗಿ (Driving Licence) ಹೊಂದಿರಬೇಕು.

ಜವಾನ:

  • ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಕನ್ನಡ ಓದಲು ಹಾಗೂ ಬರೆಯಲು ತಿಳಿದಿರಬೇಕು.

ತತ್ಸಮಾನ ವಿದ್ಯಾರ್ಹತೆ :-

ಕರ್ನಾಟಕ ಸರ್ಕಾರದ ಸುತ್ತೋಲೆ ಸಂಖ್ಯೆ:- ಸಿಆಸುಇ 81 ಸೇವೆನೆ 2017, ದಿನಾಂಕ 27.02.2018 ರಲ್ಲಿ ಈ ಕೆಳಕಂಡ ವಿದ್ಯಾರ್ಹತೆ/ ಕೋರ್ಸ್‌ಗಳನ್ನು ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯ ತತ್ಸಮಾನ ವಿದ್ಯಾರ್ಹತೆ/ ಕೋರ್ಸ್‌ಗಳೆಂದು ಸ್ಪಷ್ಟಪಡಿಸಲಾಗಿರುತ್ತದೆ.

  • ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ ಮಂಡಳಿಯು ನಡೆಸುವ ಕ್ಲಾಸ್ 10 ಪರೀಕ್ಷೆ.
  • ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 10 ಪರೀಕ್ಷೆ.
  • ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (NIOS) ವತಿಯಿಂದ ನಡೆಸುವ ಪ್ರೌಢ ಶಿಕ್ಷಣ ಮಟ್ಟದ ಕೋರ್ಸ್.
  • ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಪ್ರೌಢ ಶಿಕ್ಷಣ ಮಟ್ಟದ ಕೋರ್ಸ್. (ಕೆ.ಓ.ಎಸ್).

ಹುದ್ದೆಗಳ ವರ್ಗೀಕರಣ:-

  • ಸರ್ಕಾರಿ ಆದೇಶ ಸಂಖ್ಯೆ: DPAR 08 SRS 1995, ದಿನಾಂಕ 20-6-1995.
  • ಅಂಗವಿಕಲ ಅಭ್ಯರ್ಥಿಗಳ ವರ್ಗೀಕರಣವನ್ನು ಸರ್ಕಾರಿ ಆದೇಶ ಸಂಖ್ಯೆ:ಸಿಆಸುಇ 149 ಸೇನೆನಿ 2020, ದಿನಾಂಕ09.2020 ರ ಪ್ರಕಾರ ಮಾಡಲಾಗಿದೆ.
  • ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 2 ಸೇಹಿಮ 2023 ದಿನಾಂಕ: 08.03.2023.
  • ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 1 ಸೇಹಿಮ 2026, ದಿನಾಂಕ: 27.02.2026.
  • ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 02 ಸೇಹಿಮ 2026, ದಿನಾಂಕ: 13.05.2026 ಹಾಗೂ, ದಿನಾಂಕ: 18.05.2026 ಮತ್ತು ದಿನಾಂಕ: 25.05.2026 ರ ತಿದ್ದುಪಡಿ ಮತ್ತು ಸೇರ್ಪಡೆ ಆದೇಶಗಳೊಂದಿಗೆ.

ವಯೋಮಿತಿ (Age Limit)

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಟ ವಯೋಮಿತಿ ಈ ಕೆಳಗಿನಂತೆ ಇರುತ್ತದೆ.

  • ಸಾಮಾನ್ಯ ವರ್ಗ : 40 ವರ್ಷಗಳು
  • ಪ್ರವರ್ಗ 2ಎ, 2 ಬಿ, 3 ಎ, 3 ಬಿ : 43 ವರ್ಷಗಳು
  • ಪರಿಶಿಷ್ಟ ಜಾತಿ : ಪರಿಶಿಷ್ಟ ಪಂಗಡ : ಪ್ರವರ್ಗ-1 : 45 ವರ್ಷಗಳು

ವಿಶೇಷ ಸೂಚನೆ:– ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 262 ಸೇನೆನಿ 2025, ದಿನಾಂಕ: 29.01.2026 ರನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one time measure) 5 ವರ್ಷಗಳ ಸಡಿಲಿಕೆ ನೀಡಲಾಗಿರುತ್ತದೆ.

ಪ್ರಮುಖ ದಿನಾಂಕಗಳು:-

  • ಅಧಿಸೂಚನೆ ಬಿಡುಗಡೆ ಮಾಡಿದ ದಿನಾಂಕ: 23 ಜುಲೈ 2026
  • ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭಿಸಿದ ದಿನಾಂಕ: 23 ಜುಲೈ 2026
  • ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24 ಅಗಸ್ಟ್ 2026
  • ಆನ್‌ಲೈನ್ ಮುಖಾಂತರ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 24 ಅಗಸ್ಟ್ 2026

ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಅರ್ಜಿ ಶುಲ್ಕ:-

  • ಸಾಮಾನ್ಯ ವರ್ಗ:- 200/-
  • ಹಿಂದುಳಿದ ವರ್ಗಗಳು (2A, 2B, 3A, 3B):- 150/-
  • ಪ್ರವರ್ಗ-1/Sc /St/Pwd:- ಶುಲ್ಕ ವಿನಾಯಿತಿ ಇರುತ್ತದೆ.

ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ ಸೂಚಿಸಿದಂತಹ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಲೆಕ್ಟ್ ಪೇಜ್ ನಲ್ಲಿ ನೆಟ್ ಅಥವಾ ಇಂಟರ್ನೆಟ್ ಬ್ಯಾಂಕಿಂಗ್ / ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್/ಯು.ಪಿ.ಐ ಮೂಲಕ ಆನ್ ಲೈನ್ ಶುಲ್ಕ ಸಂದಾಯ ಮಾಡಬಹುದಾಗಿದೆ.

ವೇತನ ಶ್ರೇಣಿ:-

  • ಆದೇಶ ಜಾರಿಕಾರರು ಹುದ್ದೆ:-31775-725-32500-800-35700-900-39300-1000-43300-1125-47800-1250-52800-1375-58300-1500-61300 & ಇತರೆ ಭತ್ಯೆಗಳು
  • ಜವಾನ :- 27000-650-29600-725-32500-800-35700-900-39300-1000-43300-1125-46675 & ಇತರೆ ಭತ್ಯೆಗಳು

ಪರಿವೀಕ್ಷಣಾ ಅವಧಿ:-

  • ಆದೇಶ ಜಾರಿಕಾರರು:-ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸಿವಿಲ್ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977 ರ ಪ್ರಕಾರ ಎರಡು ವರ್ಷಗಳ ಅವಧಿಗೆ ಅಥವಾ ಅಗತ್ಯವಿದ್ದರೆ ವಿಸ್ತರಿಸಬಹುದಾದ ಅವಧಿಗೆ ಪರಿವೀಕ್ಷಣಾರ್ಥಿಗಳಾಗಿರುತ್ತಾರೆ.
  • ಜವಾನ:-ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸಿವಿಲ್ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977 ರ ಪ್ರಕಾರ ಎರಡು ವರ್ಷಗಳ ಅವಧಿಗೆ ಅಥವಾ ಅಗತ್ಯವಿದ್ದರೆ ವಿಸ್ತರಿಸಬಹುದಾದ ಅವಧಿಗೆ ಪರಿವೀಕ್ಷಣಾರ್ಥಿಗಳಾಗಿರುತ್ತಾರೆ.

ಪಿಂಚಣಿ ಸೌಲಭ್ಯ:-

  • ಸರ್ಕಾರದ ಆದೇಶ ಸಂಖ್ಯೆ:-ಎಫ್.ಡಿ (ಎಸ್.ಪಿ.ಎಲ್)/04ಪಿ/ಇ/ಟಿ/2005, ದಿನಾಂಕ:31.03.2006 ಮತ್ತು ಅದಕ್ಕೆ ಸಂಭಂದಿಸಿದ ಆದೇಶಗಳನುಸಾರ,
  • ಸರ್ಕಾರದ ಆದೇಶ ಸಂಖ್ಯೆ:-ಆಇ 34 ಪಿಇಎನ್ 2018 ಬೆಂಗಳೂರು ದಿನಾಂಕ:23.06.2018 ರಂತೆ ಮತ್ತು ಅದಕ್ಕೆ ಸಂಭಂದಿಸಿದ ಆದೇಶಗಳ ಅನ್ವಯ

ಆಯ್ಕೆ ವಿಧಾನ :-

ಅಭ್ಯರ್ಥಿಗಳ ಆಯ್ಕೆಯು ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮ, 1977 ಹಾಗೂ ಕರ್ನಾಟಕ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರೆ ಹುದ್ದೆಗಳು) (ನೇಮಕಾತಿ) ನಿಯಮ 1982, ಹಾಗೂ ಕರ್ನಾಟಕ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರೆ ಹುದ್ದೆಗಳು) (ನೇಮಕಾತಿ) (ತಿದ್ದುಪಡಿ) ನಿಯಮ 2007 ಹಾಗೂ 2021 ರ ಪ್ರಕಾರ.

  • ಆದೇಶ ಜಾರಿಕಾರರು :-ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1  ಹುದ್ದೆಗೆ 25  ಅಭ್ಯರ್ಥಿಗಳಂತೆ (1:25 ಅನುಪಾತದಲ್ಲಿ) ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನವನ್ನು ಏರ್ಪಡಿಸಿ, ಸಂದರ್ಶನದಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡುವರು (ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ)
  • ಜವಾನ :-ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ (1:10 ಅನುಪಾತದಲ್ಲಿ) ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನವನ್ನು ಏರ್ಪಡಿಸಿ, ಸಂದರ್ಶನದಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡುವರು (ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ)
  • ಕನ್ನಡ ಓದಲು ಮತ್ತು ಬರೆಯಲು ಅಭ್ಯರ್ಥಿ ಹೊಂದಿರುವ ಸಾಮರ್ಥ್ಯ ಮತ್ತು ಸಾಮಾನ್ಯ ಜ್ಞಾನದ ಬಗ್ಗೆ ಸಂದರ್ಶನ ಇರುತ್ತದೆ.
ವಿಶೇಷ ಸೂಚನೆ:-ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ನೇಮಕಾತಿ (ಆದೇಶ ಜಾರಿಕಾರರು & ಜವಾನ) ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಹೊರಡಿಸಲಾಗುವ ನೇಮಕಾತಿ ಆದೇಶವು ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯದ W.P.No.200448/2025, 17968/2025 ಹಾಗೂ 3145/2023 ರ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ.

 

ಆನಲೈನ್ ಮುಖಾಂತರ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಗಮನಿಸಬೇಕಾದ ಸೂಚನೆಗಳು:-

  1. ಅಭ್ಯರ್ಥಿಗಳು ಅರ್ಜಿಯನ್ನು ON-LINE ಮೂಲಕ ಸಲ್ಲಿಸುವ ಮೊದಲು ಅಧಿಸೂಚನೆಯಲ್ಲಿ ಕೊಟ್ಟಿರುವ ಎಲ್ಲಾ ಸೂಚನೆಗಳನ್ನು ಗಮನವಿಟ್ಟು ಓದಿಕೊಳ್ಳಬೇಕು ಮತ್ತು ತಪ್ಪಾಗದಂತೆ ನೋಡಿಕೊಳ್ಳುವುದು. ಸರಿಯಾದ ಮಾಹಿತಿ ನೀಡದೇ ಇರುವ ಮತ್ತು ಅಪೂರ್ಣ ಮಾಹಿತಿಯನ್ನು ನೀಡಿದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
  2. ಅಭ್ಯರ್ಥಿಗಳು ವಿವಿಧ ವರ್ಗಗಳಿಗೆ ಒಂದೇ ಅರ್ಜಿಯನ್ನು ಸಲ್ಲಿಸಬೇಕು. ಸದರಿ ಅರ್ಜಿಯಲ್ಲಿಯೇ ತಾವು ಕ್ಲೇಮು ಮಾಡುವ ತಮ್ಮ ಮೀಸಲಾತಿಗಳ ಬಗ್ಗೆ ನಮೂದಿಸಬೇಕು.
  3. ಅಭ್ಯರ್ಥಿಗಳು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು ಹಾಗೂ ಇ-ಮೇಲ್ ಐಡಿಯನ್ನು ಹೊಂದಿದ್ದಲ್ಲಿ ನಮೂದಿಸುವುದು. ಒಂದು ವೇಳೆ SMS ಅಥವಾ ಇ-ಮೇಲ್ ಮುಖಾಂತರ ಅಭ್ಯರ್ಥಿಗಳಿಗೆ ಸಂದೇಶ ತಲುಪದಿದ್ದಲ್ಲಿ ನೇಮಕಾತಿ ಪ್ರಾಧಿಕಾರವು ಹೊಣೆಯಾಗುವುದಿಲ್ಲ.
  4. ಅಭ್ಯರ್ಥಿಯು ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಲು ಈ ಕೆಳಕಂಡ ನಿರ್ದೇಶನಗಳನ್ನು ಪಾಲಿಸತಕ್ಕದ್ದು.

ಅ) ಬಣ್ಣದ ಭಾವಚಿತ್ರವು ಇತ್ತೀಚಿನದಾಗಿದ್ದು, ಅಳತೆಯಲ್ಲಿ 5 cm ಉದ್ದ x 3.6 cm ಅಗಲವುಳ್ಳದ್ದಾಗಿರಬೇಕು ಮತ್ತು 50 kb ಅಳತೆಯದ್ದಾಗಿರಬೇಕು ಹಾಗೂ ಅದು .jpg ನಮೂನೆಯಲ್ಲಿರಬೇಕು. ಭಾವಚಿತ್ರದ ಹಿನ್ನೆಲೆಯು ಬಿಳಿ ಬಣ್ಣದ್ದಾಗಿರಬೇಕು.

ಆ) ಭಾವಚಿತ್ರವನ್ನು ಸ್ಕ್ಯಾನ್ ಮಾಡಿ ಅರ್ಜಿಗೆ ಅಪ್‌ಲೋಡ್ ಮಾಡಬೇಕು (ಯಾವುದೇ ಕಾರಣಕ್ಕೂ ಭಾವಚಿತ್ರದ ಮೇಲೆ ಸಹಿ ಮಾಡಬಾರದು)

ಇ) ಅಭ್ಯರ್ಥಿಯು ಕಪ್ಪು ಬಾಲ್‌ಪಾಯಿಂಟ್ ಪೆನ್ನಿನಲ್ಲಿ ಬಿಳಿ ಹಾಳೆಯ ಮೇಲೆ ಸಹಿ ಮಾಡಿ (2.5 cm ಉದ್ದ x 7.5 cm ಅಗಲವುಳ್ಳದ್ದಾಗಿರಬೇಕು ಮತ್ತು 26 kb ಅಳತೆಯದ್ದಾಗಿರಬೇಕು ಹಾಗೂ ಅದು jpg ನಮೂನೆಯಲ್ಲಿರಬೇಕು.) ಅಪ್‌ಲೋಡ್ ಮಾಡಬೇಕು

  1. ಅಭ್ಯರ್ಥಿಯು, ಆನ್ ಲೈನ್ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಅಥವಾ ತತ್ಸಮಾನ ಪರೀಕ್ಷೆಯ ಅಂಕಪಟ್ಟಿಯನ್ನು ಪಿಡಿಎಫ್ ನಮೂನೆಯಲ್ಲಿ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು ಹಾಗೂ ಅಪ್ಲೋಡ್ ಮಾಡಿದ ಪ್ರತಿಯು ಸ್ಪಷ್ಟವಾಗಿರಬೇಕು.
  2. ತದನಂತರ ಅಭ್ಯರ್ಥಿಯು Online ಅರ್ಜಿಯಲ್ಲಿ ಕೋರಲಾದ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ನಿಗದಿತ ಶುಲ್ಕ ಪಾವತಿಸಲು ಅರ್ಜಿಯಲ್ಲಿ ತಿಳಿಸಿರುವಂತೆ ಕ್ರಮ ಕೈಗೊಳ್ಳುವುದು. ತದನಂತರ ಅರ್ಜಿಯನ್ನು ಹಾಗೂ ಆನ್ ಲೈನ್ ನಲ್ಲಿ ಶುಲ್ಕವನ್ನು ತುಂಬಿದ ಪ್ರತಿಯನ್ನು Down load ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ತಮ್ಮ ಹತ್ತಿರ ಇಟ್ಟುಕೊಳ್ಳಬೇಕು ಹಾಗೂ ಸಂದರ್ಶನದ ಸಮಯದಲ್ಲಿ ಹಾಜರುಪಡಿಸಬೇಕು
  3. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೂ ವಿಳಂಬ ಮಾಡದೇ ಮುಂಚಿತವಾಗಿ ಅರ್ಜಿಗಳನ್ನು ಸಲ್ಲಿಸಬೇಕು. ಒಮ್ಮೆ ಶುಲ್ಕವನ್ನು ಆನ್ ಲೈನ್ ಮೂಲಕ SBI e-pay ನಲ್ಲಿ ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿ ಹಿಂತಿರುಗಿಸಲಾಗುವುದಿಲ್ಲ.
  4. ಶಿವಮೊಗ್ಗ ನ್ಯಾಯಾಲಯದ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿಯನ್ನು ಆನ್ ಲೈನ್ ಮೂಲಕ ನೋಂದಾಯಿಸಲು/ಸಲ್ಲಿಸಲು ಹಾಗೂ ಶುಲ್ಕವನ್ನು ಪಾವತಿಸಲು ದಿನಾಂಕ:08.2026 ರ ರಾತ್ರಿ 11.59 ರವರೆಗೆ ಅವಕಾಶವಿರುತ್ತದೆ.
  5. ಅರ್ಹ ಅಭ್ಯರ್ಥಿಗಳಿಗೆ SMS & E-Mail ಮುಖಾಂತರ ಮಾಹಿತಿ ನೀಡಲಾಗುವುದು. ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ನ್ಯಾಯಾಲಯದ ವೆಬ್ ಸೈಟ್ ನಲ್ಲಿ ಪ್ರಕಟಿಸಿದ ನಂತರ ಸದರಿ ಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
  6. ಆನ್ ಲೈನ್ ಹೊರತುಪಡಿಸಿ ಇತರೆ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
  7. ಅಭ್ಯರ್ಥಿಗಳು ಯಾವುದೇ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ ಅಥವಾ ಸಾರ್ವಜನಿಕ ಉದ್ದಿಮೆಗಳಲ್ಲಿ ಉದ್ಯೋಗ ಹೊಂದಿದ್ದರೆ, ಅಂತಹ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿಯನ್ನು ಭರ್ತಿಮಾಡುವ ಸಂದರ್ಭದಲ್ಲಿ ‘ಹೌದು’ ಅಥವಾ ‘ಇಲ್ಲ’ ಎಂಬುದನ್ನು ನಿಗದಿತ ಕಾಲಂನಲ್ಲಿ ನಮೂದಿಸತಕ್ಕದ್ದು ಮತ್ತು ಅವರು ಆಯ್ಕೆಯಾದ ಸಂದರ್ಭದಲ್ಲಿ, ಕರ್ನಾಟಕ ಸಿವಿಲ್ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು 1977 ರ ತಿದ್ದುಪಡಿಯಾದ ನಿಯಮ 11 ರ ಪ್ರಕಾರ ಅವರು ಕರ್ತವ್ಯ ನಿರ್ವಹಿಸುತ್ತಿರುವ ಸಂಬಂಧಿತ ಇಲಾಖೆಯಿಂದ “ನಿರಕ್ಷೇಪಣಾ ಪತ್ರ” ವನ್ನು ಹಾಜರುಪಡಿಸತಕ್ಕದ್ದು .
  8. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1/2ಎ/2ಬಿ/3ಎ/3ಬಿ ಅಡಿಯಲ್ಲಿ ಮೀಸಲಾತಿಯನ್ನು ಕ್ಲೇಮು ಮಾಡುವ ಅಭ್ಯರ್ಥಿಗಳು, ಕರ್ನಾಟಕ ಸರ್ಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಮತ್ತು ಸಕ್ಷಮ ಪ್ರಾಧಿಕಾರವು ನೀಡಿದ ಪ್ರಮಾಣಪತ್ರವನ್ನು ಹೊಂದಿರಬೇಕು.
  9. ಗ್ರಾಮೀಣ, ಅಂಗವಿಕಲ, ಕನ್ನಡ ಮಾಧ್ಯಮ, ಯೋಜನಾ ನಿರಾಶ್ರಿತ, ಮಾಜಿ ಸೈನಿಕ ಹಾಗೂ ತೃತೀಯ ಲಿಂಗಿ ಅಭ್ಯರ್ಥಿಗಳ ಅಡಿಯಲ್ಲಿ ಮೀಸಲಾತಿಯನ್ನು ಕ್ಲೇಮು ಮಾಡುವ ಅಭ್ಯರ್ಥಿಗಳು ಸಕ್ಷಮ ಪ್ರಾಧಿಕಾರಗಳು ನೀಡಿದ ಪ್ರಮಾಣಪತ್ರಗಳನ್ನು ಹೊಂದಿರಬೇಕು. ಗ್ರಾಮೀಣ ಪ್ರವರ್ಗದ ಅಡಿಯಲ್ಲಿ ಮೀಸಲಾತಿಯನ್ನು ಕ್ಲೇಮು ಮಾಡುವ ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು ಕೆನೆಪದರ ಪ್ರಮಾಣಪತ್ರವನ್ನು (Creamy Layer Certificate) ಸಲ್ಲಿಸತಕ್ಕದ್ದು.
  10. ಮೇಲ್ಕಂಡ ಕ್ರಮ ಸಂಖ್ಯೆ 12 ಹಾಗೂ 13 ರ ಅಡಿಯಲ್ಲಿ ಪ್ರಯೋಜನಗಳನ್ನು ಕ್ಲೇಮು ಮಾಡುವ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಂದು ಅಥವಾ ಅದಕ್ಕಿಂತ ಮುಂಚೆ ಸಕ್ಷಮ ಪ್ರಾಧಿಕಾರಿಗಳು ನೀಡಿದ ಸಂಬಂಧಪಟ್ಟ ಪ್ರಮಾಣಪತ್ರಗಳನ್ನು ಹೊಂದಿರತಕ್ಕದ್ದು.
  11. ವಿಕಲಚೇತನರು/ಮಾಜಿ ಸೈನಿಕರು/ವಿಧವೆಯರು, ವಯೋಮಿತಿ ಸಡಿಲಿಕೆಗಾಗಿ ಸಕ್ಷಮ ಪ್ರಾಧಿಕಾರಗಳು ನೀಡಿದ ಪ್ರಮಾಣಪತ್ರಗಳನ್ನು ಹೊಂದಿರಬೇಕು.
  12. ಮೌಖಿಕ ಪರೀಕ್ಷೆಯ ಸಮಯದಲ್ಲಿ ದಾಖಲೆಗಳ ಪರಿಶೀಲನೆಗಾಗಿ ಕರೆಯಲ್ಪಡುವ ಅಭ್ಯರ್ಥಿಗಳು, ಶೈಕ್ಷಣಿಕ ವಿದ್ಯಾರ್ಹತೆ, ಜನ್ಮ ದಿನಾಂಕವನ್ನು ತೋರಿಸಲು ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಮೀಸಲಾತಿಗೆ ಸಂಬಂಧಿಸಿದಂತೆ ಕ್ಲೇಮು ಮಾಡಿದ ಮೀಸಲಾತಿಗಳು, ಇವುಗಳಿಗೆ ಸಂಬಂಧಿಸಿದಂತೆ ಅಗತ್ಯ ಮೂಲ ದಾಖಲೆಗಳನ್ನು ಪರಿಶೀಲನೆಗಾಗಿ ಸಲ್ಲಿಸಬೇಕು, ಪರಿಶೀಲನೆ ಸಮಯದಲ್ಲಿ ಅರ್ಜಿದಾರರು ಅರ್ಜಿಯಲ್ಲಿ ಒದಗಿಸಿರುವ ಮಾಹಿತಿಯು ಸುಳ್ಳೆಂದು ಕಂಡುಬಂದಲ್ಲಿ, ಆಗ ಅವರ ಅಭ್ಯರ್ಥಿತನವು ತಿರಸ್ಕೃತವಾಗುತ್ತದೆ ಹಾಗೂ ಅವರು ಸುಳ್ಳು ಮಾಹಿತಿ ನೀಡಿದ್ದಕ್ಕಾಗಿ ಕ್ರಿಮಿನಲ್ ಪ್ರಾಸಿಕ್ಯೂಷನ್ ಗೂ ಸಹಾ ಗುರಿಯಾಗಬೇಕಾಗುತ್ತದೆ.
  13. ಅಭ್ಯರ್ಥಿಗಳು ತಮ್ಮ 10 ನೇ ತರಗತಿಯ ಅಂಕಪಟ್ಟಿಯಲ್ಲಿ ಅಂಕಗಳು ಶ್ರೇಣಿಯಲ್ಲಿದ್ದರೆ ಅಥವಾ CGPA ಆಗಿದ್ದರೆ, ಸಂಬಂಧಪಟ್ಟ ಪ್ರಾಧಿಕಾರದಿಂದ ಅಂಕಗಳಾಗಿ ಪರಿವರ್ತಿಸಿದ ಅಂಕಪಟ್ಟಿಯನ್ನು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಂದು ಅಥವಾ ಅದಕ್ಕಿಂತ ಮುಂಚೆಯೇ ಪಡೆದು, ಗರಿಷ್ಠ ಅಂಕಗಳು, ಪಡೆದ ಅಂಕಗಳು ಮತ್ತು ಒಟ್ಟು ಶೇಕಡಾವಾರನ್ನು ಕಡ್ಡಾಯವಾಗಿ ನಿಗದಿತ ಕಾಲಂನಲ್ಲಿ ನಮೂದಿಸಬೇಕಾಗುತ್ತದೆ.
  14. ಅಭ್ಯರ್ಥಿಯು ನೇಮಕಾತಿ ಸಂಬಂಧದಲ್ಲಿ ಯಾವುದೇ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅವಲಂಬಿಸಿರುವುದು ಕಂಡುಬಂದಲ್ಲಿ ಅಂತಹವರನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.

ಆನಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-

  • 10 ನೇ ತರಗತಿ ಅಂಕಪಟ್ಟಿ
  • ವಾಹನ ಚಾಲನಾ ಪ್ರಮಾಣ ಪತ್ರ (ಆದೇಶ ಜಾರಿಕಾರರು ಹುದ್ದೆಗೆ ಮಾತ್ರ)
  • ಜಾತಿ ಪ್ರಮಾಣ ಪತ್ರ
  • ಮೀಸಲಾತಿ ಪ್ರಮಾಣ ಪತ್ರಗಳು (ಕನ್ನಡ/ಗ್ರಾಮೀಣ/ಮುಳುಗಡೆ)
  • ಅಂಗವೀಕಲ್ ಪ್ರಮಾಣ ಪತ್ರ (ಅಂಗವೀಕಲ ಅಭ್ಯರ್ಥಿಗಳಿಗೆ ಮಾತ್ರ)
  • ಮೊಬೈಲ್ ಸಂಖ್ಯೆ & ಇ-ಮೇಲ್ ಐಡಿ
  • ಇತ್ತೀಚಿನ White Background ಭಾವಚಿತ್ರ & ಸಹಿ

ಆದೇಶ ಜಾರಿಕಾರರು ಹುದ್ದೆಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ ಮಾಡಿhttps://cdnbbsr.s3waas.gov.in/s3ec0321c5bba1dd6aed9ab48c2b34c1a0/uploads/2026/07/2026072096.pdf

 

ಜವಾನ ಹುದ್ದೆಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ ಮಾಡಿhttps://cdnbbsr.s3waas.gov.in/s3ec0321c5bba1dd6aed9ab48c2b34c1a0/uploads/2026/07/2026072069.pdf

 

ಆದೇಶ ಜಾರಿಕಾರರು ಹುದ್ದೆಗೆ ಆನಲೈನ ಮುಖಾಂತರ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ ಮಾಡಿ https://judiciary.karnataka.gov.in/recruitment/district/shm/prs/home.php

ಜವಾನ ಹುದ್ದೆಗೆ ಆನಲೈನ ಮುಖಾಂತರ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ ಮಾಡಿ https://judiciary.karnataka.gov.in/recruitment/district/shm/gdp/home.php

Leave a Comment

Your email address will not be published. Required fields are marked *

Scroll to Top