ತುಮಕೂರು ಪ್ರಧಾನ ಜಿಲ್ಲಾ & ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು ಗ್ರೇಡ್-III & ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ:-
- ಒಟ್ಟು ಹುದ್ದೆಗಳು: 24
- ಶೀಘ್ರಲಿಪಿಗಾರರು ಗ್ರೇಡ್-III (Stenographer Grade-III): 10 ಹುದ್ದೆಗಳು (7 ಹೊಸ ಹುದ್ದೆಗಳು + 3 ಬ್ಯಾಕಲಾಗ್ ಹುದ್ದೆಗಳು)
- ಬೆರಳಚ್ಚುಗಾರರು (Typist): 14 ಹುದ್ದೆಗಳು (13 ಹೊಸ ಹುದ್ದೆಗಳು + 1 ಬ್ಯಾಕಲಾಗ್ ಹುದ್ದೆಗಳು)
ಪ್ರಮುಖ ದಿನಾಂಕಗಳು:-
- ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕ:22 ಜುಲೈ 2026
- ಆನಲೈನ್ ಮುಖಾಂತರ ಅರ್ಜಿ ಸಲ್ಲಿಕೆ ಆರಂಭ:- 25 ಜುಲೈ 2026
- ಆನಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 24 ಜುಲೈ 2026
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ:- 24 ಜುಲೈ 2026
ವಿಧ್ಯಾರ್ಹತೆ:-
ಶೀಘ್ರಲಿಪಿಗಾರರು ಗ್ರೇಡ್-III:-
- ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ 3 ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ & ಆಂಗ್ಲ ಬೆರಳಚ್ಚು ಪ್ರೌಢದರ್ಜೆ ಪರೀಕ್ಷೆ (Senior Grade) ಶೀಘ್ರಲಿಪಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಪಾಸಾಗಿರಬೇಕು.
ಬೆರಳಚ್ಚುಗಾರರು:-
- ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ 3 ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ & ಆಂಗ್ಲ ಬೆರಳಚ್ಚು ಪ್ರೌಢದರ್ಜೆ ಪರೀಕ್ಷೆ (Senior Grade) ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಪಾಸಾಗಿರಬೇಕು.
- 12ನೇ ತರಗತಿಯ ಅಂಕಗಳು ಶ್ರೇಣಿಯಲ್ಲಿದ್ದರೆ (Grade) ಅದನ್ನು ಅಂಕಗಳಾಗಿ ಪರಿವರ್ತಿಸಿ ಗರಿಷ್ಠ ಅಂಕಗಳು ಮತ್ತು ಪಡೆದ ಅಂಕಗಳನ್ನು ನಮೂದಿಸಿದ ಅಂಕ ಪಟ್ಟಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಸಕ್ಷಮ ಪ್ರಾಧಿಕಾರದಿಂದ ಪಡೆದಿಟ್ಟುಕೊಂಡಿರಬೇಕು.
ವಯೋಮಿತಿ (Age Limit)
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಟ ವಯಸ್ಸು ಈ ಕೆಳಕಂಡಂತೆ ಇರಬೇಕು
- ಸಾಮಾನ್ಯ ವರ್ಗ-ಸಾಮಾನ್ಯ ವರ್ಗದ ಅಭ್ಯರ್ಥಿಗಳು 40 ವರ್ಷ ಮೀರಿರಬಾರದು.
- ಹಿಂದುಳಿದ ವರ್ಗಗಳು (2A, 2B, 3A, 3B):-ಅಭರ್ಥಿಗಳು 43 ವರ್ಷ ಮೀರಿರಬಾರದು
- ಪ್ರವರ್ಗ-1/Sc /St:-ಅಭರ್ಥಿಗಳು 45 ವರ್ಷ ಮೀರಿರಬಾರದು
ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಅರ್ಜಿ ಶುಲ್ಕ:-
- ಸಾಮಾನ್ಯ ವರ್ಗ, ಹಿಂದುಳಿದ ವರ್ಗಗಳು (2A, 2B, 3A, 3B):- 200/-
- ಪ್ರವರ್ಗ-1/Sc /St/Pwd:- ಶುಲ್ಕ ವಿನಾಯಿತಿ ಇರುತ್ತದೆ.
ವೇತನ ಶ್ರೇಣಿ:-
- ಶೀಘ್ರಲಿಪಿಗಾರರು ಗ್ರೇಡ್-III::- 44425-1125-47800-1250-52800-1375-58300-1500-64300- 1650-74200-1900-83700
- ಬೆರಳಚ್ಚುಗಾರರು :- 34100-800-35700-900-39300-1000-43300-1125-47800-1250- 52800-1375-58300-1500-64300-1650-67600
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮುಂಚೆ ಗಮನಿಸಬೇಕಾದ ಸೂಚನೆಗಳು:-
- ಅಭ್ಯರ್ಥಿಗಳು ವಿವಿಧ ವರ್ಗಗಳಿಗೆ ಒಂದೇ ಅರ್ಜಿಯನ್ನು ಸಲ್ಲಿಸಬೇಕು. ಸದರಿ ಅರ್ಜಿಯಲ್ಲಿ ಅಭ್ಯರ್ಥಿಗಳು ಕ್ಲೇಮು ಮಾಡುವ ತಮ್ಮ ಮೀಸಲಾತಿಗಳ ಬಗ್ಗೆ ನಮೂದಿಸಬೇಕು.
- ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸುವ ಪೂರ್ವದಲ್ಲಿ ಕೊಟ್ಟಿರುವ ಎಲ್ಲಾ ಸೂಚನೆಗಳನ್ನು ಗಮನಹಿರಿಸಿ ಕಟ್ಟುನಿಟ್ಟಾಗಿ ಅಧಿಸೂಚನೆಯನ್ನು ಓದಿಕೊಳ್ಳುವುದು ಮತ್ತು ಅರ್ಜಿಯು ತಪ್ಪಾಗದಂತೆ ನೋಡಿಕೊಳ್ಳುವುದು. ಸರಿಯಾದ ಮಾಹಿತಿ ನೀಡದಿರುವ ಹಾಗೂ ಅಪೂರ್ಣ ಮಾಹಿತಿಯುಳ್ಳ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ.
- ಆನಲೈನ ಮುಖಾಂತರ ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಬೇಕು.
- ಅಭ್ಯರ್ಥಿಗಳು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು ಹಾಗೂ ಮಿಂಚಂಚೆ (e-mail id) ಯನ್ನು ನಮೂದಿಸುವುದು ಕಡ್ಡಾಯವಾಗಿರುತ್ತದೆ ಮತ್ತು ಅರ್ಹ ಅಭ್ಯರ್ಥಿಗಳಿಗೆ sms ಮತ್ತು e-mail ಮುಖಾಂತರ ಮಾಹಿತಿ ನೀಡಲಾಗುತ್ತದೆ. ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.
- ಅರ್ಜಿ ಸಲ್ಲಿಸುವ ಸಮಯದಲ್ಲಿ ಅಭ್ಯರ್ಥಿಗಳು ಅರ್ಜಿಯಲ್ಲಿ ನಮೂದಿಸುವ ಜನ್ಮದಿನಾಂಕ, ವಿದ್ಯಾರ್ಹತೆ, ಮೀಸಲಾತಿ ಹಾಗೂ ವಯೋಮಿತಿ ಸಡಲಿಕೆ ಇತ್ಯಾದಿ ವಿವರಗಳನ್ನು ಮಾತ್ರ ಪರಿಗಣಿಸಲು ತೆಗೆದುಕೊಳ್ಳಲಾಗುತ್ತದೆ ಹಾಗೂ ಈ ಬಗ್ಗೆ ನಂತರದಲ್ಲಿ ಬದಲಾವಣೆ ಕುರಿತಂತೆ ಸಲ್ಲಿಸುವ ಯಾವುದೇ ಕೋರಿಕೆ ಪತ್ರಗಳನ್ನು ಪುರಸ್ಕರಿಸಲಾಗುವುದಿಲ್ಲ.
- ಅಭ್ಯರ್ಥಿಗಳು ತಮ್ಮ ಭಾವಚಿತ್ರ ಮತ್ತು ಸಹಿಯನ್ನು scan ಮಾಡಿ ಕಡ್ಡಾಯವಾಗಿ upload ಮಾಡುವುದು.
- ಅಭ್ಯರ್ಥಿಯು ಕಪ್ಪು ಬಾಲ್‌ಪಾಯಿಂಟ್ ಪೆನ್ನಿನಲ್ಲಿ ಬಿಳಿ ಹಾಳೆಯ ಮೇಲೆ ಸಹಿ ಮಾಡಿ (2.5 cm ಉದ್ದ5 cm ಅಗಲವುಳ್ಳದ್ದಾಗಿರಬೇಕು ಮತ್ತು 25 kb ಅಳತೆಯದ್ದಾಗಿರಬೇಕು ಹಾಗೂ ಅದು jpg ನಮೂನೆಯಲ್ಲಿರಬೇಕು) upload ಮಾಡಬೇಕು.
- ಅಭ್ಯರ್ಥಿಯು ಆನ್‌ಲೈನ್ ಅರ್ಜಿಯಲ್ಲಿ ಕೋರಲಾದ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ನಿಗದಿತ ಶುಲ್ಕ ಪಾವತಿಸಲು ಅರ್ಜಿಯಲ್ಲಿ ತಿಳಿಸಿರುವಂತೆ ಕ್ರಮ ಕೈಗೊಳ್ಳುವುದು. ತದನಂತರ ಅರ್ಜಿಯನ್ನು ಹಾಗೂ ಆನ್‌ಲೈನ್‌ನಲ್ಲಿ ಶುಲ್ಕವನ್ನು ಪಾವತಿಸಿದ ಪ್ರತಿಯನ್ನು download ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ತಮ್ಮ ಹತ್ತಿರ ಕಾಯ್ದಿರಿಸಿಕೊಳ್ಳತಬೇಕು ಹಾಗೂ ಅರ್ಹತಾ ಪರೀಕ್ಷೆಯ ಸಮಯದಲ್ಲಿ ಹಾಜರುಪಡಿಸಬೇಕಾಗುತ್ತದೆ.
- ಬಣ್ಣದ ಭಾವಚಿತ್ರವು ಇತ್ತೀಚಿನದಾಗಿದ್ದು ಅಳತೆಯಲ್ಲಿ 5cm ಉದ್ದ X 3.6cm ಅಗಲ ಉಳ್ಳದ್ದಾಗಿರಬೇಕು ಮತ್ತು 50kb ಅಳತೆಯದ್ದಾಗಿರಬೇಕು ಹಾಗೂ ಅದು .jpg ನಮೂನೆಯಲ್ಲಿರಬೇಕು. ಬಿಳಿ ಬಣ್ಣದ ಪರದೆಯ ಹಿನ್ನೆಲೆಯಿರುವ ಭಾವಚಿತ್ರವಾಗಿರಬೇಕು. (White background screen).
- ಭಾವಚಿತ್ರವನ್ನು ಸ್ಕ್ಯಾನ್ ಮಾಡಿ ಅರ್ಜಿಗೆ ಅಪ್‌ಲೋಡ್ ಮಾಡಬೇಕು. (ಯಾವುದೇ ಕಾರಣಕ್ಕೂ ಭಾವಚಿತ್ರದ ಮೇಲೆ ಸಹಿ ಮಾಡಬಾರದು).
- ಅಭ್ಯರ್ಥಿಯು ಕಪ್ಪು ಬಾಲ್ ಪಾಯಿಂಟ್ ಪೆನ್ನಿನಲ್ಲಿ ಬಿಳಿಯ ಹಾಳೆಯ ಮೇಲೆ ಸಹಿ ಮಾಡಿ ಅಪ್‌ಲೋಡ್ ಮಾಡಬೇಕು. (2.5cm ಉದ್ದ X 7.5cm ಅಗಲ ಉಳ್ಳದ್ದಾಗಿರಬೇಕು ಮತ್ತು 26kb ಅಳತೆಯದ್ದಾಗಿರಬೇಕು ಹಾಗೂ ಅದು .jpg ನಮೂನೆಯಲ್ಲಿರಬೇಕು.
- ಅಭ್ಯರ್ಥಿಯು ಆನ್‌ಲೈನ್ ಅರ್ಜಿಯಲ್ಲಿ ಕೋರಲಾದ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ನಿಗದಿತ ಶುಲ್ಕ ಪಾವತಿಸಲು ಅಧಿಸೂಚನೆಯಲ್ಲಿ ತಿಳಿಸಿರುವಂತೆ ಕ್ರಮ ಕೈಗೊಳ್ಳುವುದು. ತದನಂತರ ಅರ್ಜಿಯನ್ನು ಹಾಗೂ ಶುಲ್ಕವನ್ನು ತುಂಬಿದ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ತಮ್ಮ ಹತ್ತಿರ ಕಾಯ್ದಿರಿಸಿಕೊಳ್ಳತಕ್ಕದ್ದು ಹಾಗೂ ಕೌಶಲ ಪರೀಕ್ಷೆಯ/ ಸಂದರ್ಶನದ ಸಮಯದಲ್ಲಿ ಹಾಜರುಪಡಿಸತಕ್ಕದ್ದು.
- ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೂ ವಿಳಂಬ ಮಾಡದೇ ಮುಂಚಿತವಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು. ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲೂ ಹಿಂದಿರುಗಿಸಲಾಗುವುದಿಲ್ಲ ಹಾಗೂ ಯಾವುದೇ ಇತರೇ ನೇಮಕಾತಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ.
- ತುಮಕುರು ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಲು ದಿನಾಂಕ 24/8/2026ರ ರಾತ್ರಿ59 ರವರೆಗೆ ಅವಕಾಶವಿರುತ್ತದೆ.
- ಕೌಶಲ ಪರೀಕ್ಷೆಯ ವೇಳಾಪಟ್ಟಿ ಹಾಗೂ ಸಂದರ್ಶನದ ವೇಳಾಪಟ್ಟಿಯನ್ನು ತುಮಕೂರು ನ್ಯಾಯಾಲಯದ ವೆಬ್‌ಸೈಟ್ https://tumakuru.dcourts.gov.in/ ನಲ್ಲಿ ಪ್ರಕಟಿಸಲಾಗುತ್ತದೆ. ಕೌಶಲ ಪರೀಕ್ಷೆಗೆ ಮತ್ತು ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಕೌಶಲ ಪರೀಕ್ಷೆಗೆ ಮತ್ತು ಸಂದರ್ಶನಕ್ಕೆ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ರವಾನಿಸಲಾಗುವುದಿಲ್ಲ. ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಒಂದು ಮೂಲ ಗುರುತಿನ ಚೀಟಿಯೊಂದಿಗೆ (Voter ID/ Aadhar Card/ Driving License/ PAN Card) ಕೌಶಲ ಪರೀಕ್ಷೆಗೆ/ ಸಂದರ್ಶನಕ್ಕೆ ಹಾಜರಾಗುವುದು.
ಪರಿವೀಕ್ಷಣಾ ಅವಧಿ:-
- ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣಾ ನಿಯಮಗಳು) 1977ರ ಪ್ರಕಾರ 2 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಈ ಅವಧಿಯಲ್ಲಿ ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ, ಕನ್ನಡ ಭಾಷಾ ಪರೀಕ್ಷೆಯಲ್ಲಿ ಮತ್ತು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.
ಆಯ್ಕೆ ವಿಧಾನ :-
ಶೀಘ್ರಲಿಪಿಗಾರರು ಗ್ರೇಡ್-III:-ಕರ್ನಾಟಕ ಅಧೀನ ನ್ಯಾಯಾಲಯಗಳು (ಲಿಪಿಕ ಮತ್ತು ಇತರ ಹುದ್ದೆಗಳು) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2021ರ ನಿಯಮಗಳನ್ವಯ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಆಯ್ಕೆಗೆ ಕೌಶಲ ಪರೀಕ್ಷೆ ಮತ್ತು ಸಂದರ್ಶನವನ್ನು ಈ ಕೆಳಕಂಡಂತೆ ನಡೆಸಲಾಗುವುದು.
- ನೇಮಕಾತಿ ಪ್ರಾಧಿಕಾರದಿಂದ ನೇಮಿಸಲಾದ ಪರೀಕ್ಷಕರು 1 ನಿಮಿಷಕ್ಕೆ 120 ಪದಗಳ ದರದಲ್ಲಿ ತಲಾ 5 ನಿಮಿಷಗಳ ಕನ್ನಡ ಮತ್ತು ಇಂಗ್ಲೀಷ್ ಉಕ್ತಲೇಖನವನ್ನು ನೀಡುವರು. ಅದನ್ನು ಅಭ್ಯರ್ಥಿಗಳು 45 ನಿಮಿಷಗಳಲ್ಲಿ ವಿಶೇಷ ತಂತ್ರಾಂಶದ ಗಣಕಯಂತ್ರದಲ್ಲಿ ಬೆರಳಚ್ಚು ಮಾಡಬೇಕಾಗುತ್ತದೆ. ಬೆರಳಚ್ಚು ಯಂತ್ರದ ಕೀಲಿಮಣೆಯನ್ನು ಹೋಲುವ ತಂತ್ರಾಂಶವನ್ನು ಗಣಕಯಂತ್ರಗಳಿಗೆ ಅಳವಡಿಸಲಾಗುತ್ತದೆ.
- ಕನ್ನಡ ಮತ್ತು ಆಂಗ್ಲ ಭಾಷಾ ಕೌಶಲ ಪರೀಕ್ಷೆಗಳಿಗೆ ತಲಾ ಗರಿಷ್ಠ 100 ಅಂಕಗಳನ್ನು ನಿಗದಿಪಡಿಸಲಾಗಿದ್ದು, ಉತ್ತೀರ್ಣರಾಗಲು ತಲಾ ಕನಿಷ್ಠ 50 ಅಂಕಗಳನ್ನು ಪಡೆಯಬೇಕಾಗಿರುತ್ತದೆ.
- ನಿಗದಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿನ ಮತ್ತು ಕೌಶಲ ಪರೀಕ್ಷೆಗಳ ಒಟ್ಟು ಅಂಕಗಳ ಶೇಕಡಾವಾರು ಮೊತ್ತದ ಆಧಾರದ ಮೇಲೆ ಮೀಸಲಾತಿಗನುಗುಣವಾಗಿ 1 ಹುದ್ದೆಗೆ 5 ಅಭ್ಯರ್ಥಿಗಳಂತೆ (1:5ರ ಅನುಪಾತದಲ್ಲಿ) ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
- ಸಂದರ್ಶನವು 5 ಅಂಕಗಳನ್ನು ಒಳಗೊಂಡಿರುತ್ತದೆ.
ಬೆರಳಚ್ಚುಗಾರರು:- ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮ 1977 ಹಾಗೂ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರ ಹುದ್ದೆಗಳ ನೇಮಕಾತಿ) ನಿಯಮ 1982 ಹಾಗೂ (ತಿದ್ದುಪಡಿ) ನಿಯಮಗಳು, 2007 ಮತ್ತು 2021ರ ನಿಯಮಗಳನ್ವಯ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
ಆಯ್ಕೆಗೆ ಕೌಶಲ ಪರೀಕ್ಷೆ ಮತ್ತು ಸಂದರ್ಶನವನ್ನು ಈ ಕೆಳಕಂಡಂತೆ ನಡೆಸಲಾಗುವುದು.
- ನೇಮಕಾತಿ ಪ್ರಾಧಿಕಾರದಿಂದ ನೇಮಿಸಲಾದ ಪರೀಕ್ಷಕರು 15 ನಿಮಿಷಗಳ ಕನ್ನಡ ಮತ್ತು 15 ನಿಮಿಷಗಳ ಇಂಗ್ಲೀಷ್ ಉಕ್ತಲೇಖನವನ್ನು ನೀಡುತ್ತಾರೆ. ಅದನ್ನು ಅಭ್ಯರ್ಥಿಗಳು ವಿಶೇಷ ತಂತ್ರಾಂಶದ ಗಣಕಯಂತ್ರದಲ್ಲಿ ಬೆರಳಚ್ಚು ಮಾಡಬೇಕು. ಬೆರಳಚ್ಚುಯಂತ್ರದ ಕೀಲಿಮಣೆಯನ್ನು ಹೋಲುವ ತಂತ್ರಾಂಶವನ್ನು ಗಣಕಯಂತ್ರಗಳಿಗೆ ಅಳವಡಿಸಲಾಗಿರುತ್ತದೆ.
- ಕನ್ನಡ ಮತ್ತು ಆಂಗ್ಲ ಭಾಷಾ ಕೌಶಲ ಪರೀಕ್ಷೆಗಳಿಗೆ ತಲಾ ಗರಿಷ್ಠ 100 ಅಂಕಗಳನ್ನು ನಿಗದಿಪಡಿಸಲಾಗಿದ್ದು, ಉತ್ತೀರ್ಣರಾಗಲು ತಲಾ ಕನಿಷ್ಠ 50 ಅಂಕಗಳನ್ನು ಪಡೆಯಬೇಕಾಗಿರುತ್ತದೆ.
- ನಿಗದಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿನ ಮತ್ತು ಕೌಶಲ ಪರೀಕ್ಷೆಗಳ ಒಟ್ಟು ಅಂಕಗಳ ಶೇಕಡಾವಾರು ಮೊತ್ತದ ಆಧಾರದ ಮೇಲೆ ಮೀಸಲಾತಿಗನುಗುಣವಾಗಿ 1 ಹುದ್ದೆಗೆ 5 ಅಭ್ಯರ್ಥಿಗಳಂತೆ (1:5ರ ಅನುಪಾತದಲ್ಲಿ) ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.
- ಸಂದರ್ಶನವು 5 ಅಂಕಗಳನ್ನು ಒಳಗೊಂಡಿರುತ್ತದೆ.
ಅಭ್ಯರ್ಥಿಗಳು ಕೌಶಲ ಪರೀಕ್ಷೆ/ ಸಂದರ್ಶನ/ ದಾಖಲೆ ಪರಿಶೀಲನೆ ಸಮಯದಲ್ಲಿ ಈ ಕೆಳಕಂಡ ದಾಖಲೆಗಳನ್ನು ಸಕ್ಷಮ ಪ್ರಾಧಿಕಾರದ ಮುಂದೆ ಹಾಜರುಪಡಿಸಬೇಕಾಗುತ್ತದೆ:
- ಆನ್‌ಲೈನ್ ಮೂಲಕ ಸಲ್ಲಿಸಲಾದ ಅರ್ಜಿಯ ಪ್ರತಿ
- ಆನಲೈನ ಮುಖಾಂತರ ಅರ್ಜಿ ಶುಲ್ಕವನ್ನು ಪಾವತಿಸಿದ ರಸೀದಿಯ ಪ್ರತಿ
- ಎಸ್.ಎಸ್.ಎಲ್.ಸಿ./ ತತ್ಸಮಾನ ಅಂಕಪಟ್ಟಿ
- ದ್ವಿತೀಯ ಪಿ.ಯು.ಸಿ./ ತತ್ಸಮಾನ ಅಂಕಪಟ್ಟಿ
- ಬೆರಳಚ್ಚುಗಾರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮೇಲ್ಕಂಡ ದಾಖಲೆಗಳೊಂದಿಗೆ ಹಿರಿಯ ಶ್ರೇಣಿ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಗಳ ಅಂಕಪಟ್ಟಿಗಳು ಅಥವಾ ತತ್ಸಮಾನ ಪರೀಕ್ಷಾ ಅಂಕಪಟ್ಟಿಗಳು.
- ಶೀಘ್ರಲಿಪಿಗಾರ- ಗ್ರೇಡ್–III ರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮೇಲ್ಕಂಡ ದಾಖಲೆಗಳೊಂದಿಗೆ ಹಿರಿಯ ಶ್ರೇಣಿ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಗಳ ಅಂಕಪಟ್ಟಿಗಳು ಮತ್ತು ಹಿರಿಯ ಶ್ರೇಣಿ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಪರೀಕ್ಷೆಗಳ ಅಂಕಪಟ್ಟಿಗಳು ಅಥವಾ ತತ್ಸಮಾನ ಪರೀಕ್ಷಾ ಅಂಕಪಟ್ಟಿಗಳು.
ಆನಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-
- 10 ನೇ ತರಗತಿ ಅಂಕಪಟ್ಟಿ
- ವಿಧ್ಯಾರ್ಹತೆ ಪ್ರಮಾಣ ಪತ್ರಗಳು (ಹುದ್ದೆಗೆ ಅನುಗುಣವಾಗಿ)
- ಜಾತಿ ಪ್ರಮಾಣ ಪತ್ರ
- ಮೀಸಲಾತಿ ಪ್ರಮಾಣ ಪತ್ರಗಳು (ಕನ್ನಡ/ಗ್ರಾಮೀಣ/ಮುಳುಗಡೆ)
- ಅಂಗವೀಕಲ್ ಪ್ರಮಾಣ ಪತ್ರ (ಅಂಗವೀಕಲ ಅಭ್ಯರ್ಥಿಗಳಿಗೆ ಮಾತ್ರ)
- ಮೊಬೈಲ್ ಸಂಖ್ಯೆ & ಇ–ಮೇಲ್ ಐಡಿ
- ಇತ್ತೀಚಿನ White Background ಭಾವಚಿತ್ರ & ಸಹಿ
ಶೀಘ್ರಲಿಪಿಗಾರರು ಗ್ರೇಡ್-III ಹುದ್ದೆಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ ಮಾಡಿhttps://cdnbbsr.s3waas.gov.in/s3ec033083202a936b7d0ef8b680d7ae73/uploads/2026/07/2026072358.pdf
ಬೆರಳಚ್ಚುಗಾರರು ಹುದ್ದೆಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ ಮಾಡಿ https://cdnbbsr.s3waas.gov.in/s3ec033083202a936b7d0ef8b680d7ae73/uploads/2026/07/2026072358.pdf
ಶೀಘ್ರಲಿಪಿಗಾರರು ಗ್ರೇಡ್-III ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ ಮಾಡಿhttps://judiciary.karnataka.gov.in/recruitment/district/tmk/stg/home.php
ಬೆರಳಚ್ಚುಗಾರರು ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ ಮಾಡಿ https://judiciary.karnataka.gov.in/recruitment/district/tmk/typ/home.php



