ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಘಟಕದಲ್ಲಿಉಳಿಕೆ ಮೂಲ ವೃಂದದಡಿಯಲ್ಲಿ ಖಾಲಿ ಇರುವ ವಾಹನ ಚಾಲಕ ಹಾಗೂ ಜವಾನ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ.
ಹುದ್ದೆಗಳ ವಿವರ:-
- ಒಟ್ಟು ಹುದ್ದೆಗಳು: 88
- ವಾಹನ ಚಾಲಕ (Driver): 07 ಹುದ್ದೆಗಳು
- ಜವಾನ (Peon): 81 ಹುದ್ದೆಗಳು
ಶೈಕ್ಷಣಿಕ ಅರ್ಹತೆ
ವಾಹನ ಚಾಲಕ:
- ಎಸ್ಎಸ್ಎಲ್ಸಿ (10ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಚಾಲ್ತಿಯಲ್ಲಿರುವ ಭಾರಿ ಮೋಟಾರು ವಾಹನ (HMV) ಚಾಲನಾ ಪರವಾನಗಿ ಹೊಂದಿರಬೇಕು.
ಜವಾನ:
- ಎಸ್ಎಸ್ಎಲ್ಸಿ (10ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಕನ್ನಡ ಓದಲು ಹಾಗೂ ಬರೆಯಲು ತಿಳಿದಿರಬೇಕು.
ವಯೋಮಿತಿ (Age Limit)
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಟ ವಯಸ್ಸು ಈ ಕೆಳಕಂಡಂತೆ ಇರಬೇಕು
- ಸಾಮಾನ್ಯ ವರ್ಗ-ಸಾಮಾನ್ಯ ವರ್ಗದ ಅಭ್ಯರ್ಥಿಗಳು 40 ವರ್ಷ ಮೀರಿರಬಾರದು.
- ಹಿಂದುಳಿದ ವರ್ಗಗಳು (2A, 2B, 3A, 3B):-ಅಭರ್ಥಿಗಳು 43 ವರ್ಷ ಮೀರಿರಬಾರದು
- ಪ್ರವರ್ಗ-1/Sc /St:-ಅಭರ್ಥಿಗಳು 45 ವರ್ಷ ಮೀರಿರಬಾರದು
ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಅರ್ಜಿ ಶುಲ್ಕ:-
- ಸಾಮಾನ್ಯ ವರ್ಗ:- 300/-
- ಹಿಂದುಳಿದ ವರ್ಗಗಳು (2A, 2B, 3A, 3B):- 150/-
- ಪ್ರವರ್ಗ-1/Sc /St/Pwd:- ಶುಲ್ಕ ವಿನಾಯಿತಿ ಇರುತ್ತದೆ.
ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ ಸೂಚಿಸಿದಂತಹ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಲೆಕ್ಟ್ ಪೇಜ್ ನಲ್ಲಿ ನೆಟ್ ಅಥವಾ ಇಂಟರ್ನೆಟ್ ಬ್ಯಾಂಕಿಂಗ್ / ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ ಮೂಲಕ ಆನ್ ಲೈನ್ ಶುಲ್ಕ ಸಂದಾಯ ಮಾಡಬಹುದಾಗಿದೆ.
ವೇತನ ಶ್ರೇಣಿ:-
- ಚಾಲಕ ಹುದ್ದೆ :- 34100- 67600
- ಜವಾನ :- 27000-46675
ಸೇವಾ ಪರಿವೀಕ್ಷಣಾ ಅವಧಿ:-
- ಅಭ್ಯರ್ಥಿಯು ನೇಮಕಗೊಂಡ ಪಕ್ಷದಲ್ಲಿ ಪ್ರಾರಂಭಿಕವಾಗಿ ಎರಡು ವರ್ಷಗಳ ಅವಧಿಗೆ ಅಥವಾ ಅಗತ್ಯವಿದ್ದರೆ ವಿಸ್ತರಿಸಬಹುದಾದ ಅವಧಿಗೆ ಪರಿವೀಕ್ಷಣಾರ್ಥಿಗಳಾಗಿರುತ್ತಾರೆ.
ಸಂದರ್ಶನ ವಿಧಾನ:-
ವಾಹನ ಚಾಲಕ
- ಚಾಲಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭರ್ಥಿಗಳು, 50 ಅಂಕಗಳ ಅರ್ಹತಾ ಪರೀಕ್ಷೆಗೆ ಹಾಜಾರಾಗಬೇಕು, ಹಾಗೂ ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 1:25 ಅನುಪಾತದಂತೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯುತ್ತಾರೆ, ಸಂದರ್ಶನಕ್ಕೆ ಒಟ್ಟು 10 ಅಂಕಗಳನ್ನು ನಿಗದಿಪಡಿಸಲಾಗಿದೆ.
ಜವಾನ:-
- ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡಾ ಆಧಾರದ ಮೇಲೆ ಒಂದು ಹುದ್ದೆಗೆ 1:10 ಅನುಪಾತದಂತೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನಕ್ಕೆ ಒಟ್ಟು 10 ಅಂಕಗಳನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ :-
- ಕರ್ನಾಟಕ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರ ಹುದ್ದೆಗಳು) (ನೇಮಕಾತಿ) ನಿಯಮಗಳು, 1982 ಹಾಗೂ ತಿದ್ದುಪಡಿ ನಿಯಮಗಳು 2007 ಮತ್ತು 2021 ರನ್ವಯ ಸಂದರ್ಶನದಲ್ಲಿ ಪಡೆಯುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡುತ್ತಾರೆ.
ದಾಖಲೆಗಳ ಪರಿಶೀಲನೆ
- ಶೈಕ್ಷಣಿಕ ವಿದ್ಯಾರ್ಹತೆ:- ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಮೂಲ ಅಂಕಪಟ್ಟಿ ಅಥವಾ ತತ್ಸಮಾನ ವಿದ್ಯಾರ್ಹತೆಯ ಮೂಲ ಅಂಕಪಟ್ಟಿಯನ್ನು ದಾಖಲೆಗಳ ಪರಿಶೀಲನೆ ಸಮಯದಲ್ಲಿ ಪ್ರಾಧಿಕಾರದ ಮುಂದೆ ಹಾಜರುಪಡಿಸಬೇಕು.
- ಜನ್ಮ ದಿನಾಂಕಃ- ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಮೂಲ ಅಂಕಪಟ್ಟಿ ಅಥವಾ ಮೂಲ ಜನನ ಪ್ರಮಾಣ ಪತ್ರವನ್ನು ದಾಖಲೆಗಳ ಪರಿಶೀಲನೆ ಸಮಯದಲ್ಲಿ ಪ್ರಾಧಿಕಾರದ ಮುದೆ ಹಾಜರುಪಡಿಸಬೇಕು.
- ಮೀಸಲಾತಿ ಕೋರುವ ಮಾನ್ಯವಿರುವ ಮೂಲ ಪ್ರಮಾಣ ಪತ್ರಗಳು:- ಅಭ್ಯರ್ಥಿಯು ದಾಖಲೆಗಳ ಪರಿಶೀಲನೆ ಸಮಯದಲ್ಲಿ ಪ್ರಾಧಿಕಾರದ ಮುಂದೆ ಹಾಜರುಪಡಿಸಬೇಕು.
- ಗುರುತಿನ ಪುರಾವೆ:- ಅಭ್ಯರ್ಥಿಯು ದಾಖಲೆಗಳ ಪರಿಶೀಲನೆ ಸಮಯದಲ್ಲಿ ಗುರುತಿನ ಪುರಾವೆಯಾಗಿ ಮೂಲ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಇತರೆ ದಾಖಲೆಗಳನ್ನು ಪ್ರಾಧಿಕಾರದ ಮುಂದೆ ಹಾಜರುಪಡಿಸಬೇಕು. ಪ್ರಾಧಿಕಾರವು ನಿರ್ದೇಶಿಸಿದಾಗ ಸಂಬಂಧಪಟ್ಟ ದಾಖಲೆಗಳನ್ನು ಅಭ್ಯರ್ಥಿಗಳು ಹಾಜರುಪಡಿಸಬೇಕು.
ಆನಲೈನ್ ಮುಖಾಂತರ ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ವೇಳಾಪಟ್ಟಿ:-
-
ಆನಲೈನ್ ಮುಖಾಂತರ ಅರ್ಜಿ ಸಲ್ಲಿಕೆ ಆರಂಭ:- 01-07-2026
-
ಆನಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 30-07-2026
-
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ:- 30-07-2026
ಆನಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-
- 10 ನೇ ತರಗತಿ ಅಂಕಪಟ್ಟಿ
- ಭಾರಿ ವಾಹನ ಚಾಲನಾ ಪ್ರಮಾಣ ಪತ್ರ (ವಾಹನ ಚಾಲಕ ಹುದ್ದೆಗೆ ಮಾತ್ರ)
- ಜಾತಿ ಪ್ರಮಾಣ ಪತ್ರ
- ಮೀಸಲಾತಿ ಪ್ರಮಾಣ ಪತ್ರಗಳು (ಕನ್ನಡ/ಗ್ರಾಮೀಣ/ಮುಳುಗಡೆ)
- ಅಂಗವೀಕಲ್ ಪ್ರಮಾಣ ಪತ್ರ (ಅಂಗವೀಕಲ ಅಭ್ಯರ್ಥಿಗಳಿಗೆ ಮಾತ್ರ)
- ಮೊಬೈಲ್ ಸಂಖ್ಯೆ & ಇ-ಮೇಲ್ ಐಡಿ
- ಇತ್ತೀಚಿನ ಭಾವಚಿತ್ರ & ಸಹಿ
ಅಧಿಸೂಚನಗಾಗಿ ಇಲ್ಲಿ ಕ್ಲಿಕ ಮಾಡಿ:- https://cdnbbsr.s3waas.gov.in/s3ec01366f0bc7bd1d4bf414073cabbadf/uploads/2026/06/2026062748.pdf
